ಪೆನ್‌ಡ್ರೈವ್ ಪ್ರಕರಣ| ಪ್ರಜ್ವಲ್‌ ರೇವಣ್ಣ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Date:

ಹಾಸನ ಜಿಲ್ಲೆಯಲ್ಲಿ ಮುಗ್ಧ ಮಹಿಳೆಯರ ಮೇಲೆ ಮಾನಸಿಕವಾಗಿ ಚಿತ್ರಹಿಂಸೆ ನೀಡಿ ಮಹಿಳೆಯರನ್ನು ಮಹಿಳೆಯರ ಹಕ್ಕುಗಳ ಕಗ್ಗೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

- Advertisement -

ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಾಸನ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯರನ್ನು ಬೆತ್ತಲೆಗೊಳಿಸಿರುವ ಎಲ್ಲಾ ವಿಡಿಯೋ ಚಿತ್ರಣಗಳು ರಾಜ್ಯದ ಎಲ್ಲಾ ಕಡೆ ಹರಿದಾಡುತ್ತಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ದ ಕೂಡಲೇ ಅತ್ಯಂತ ಕಠಿಣ ಕ್ರಮ ಕೈಗೊಂಡು ಮಹಿಳೆಯರನ್ನು ರಕ್ಷಿಸಬೇಕು ಎಂದು ದೂರನ್ನು ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ?  ಪೆನ್‌ಡ್ರೈವ್‌ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ

ಈಗಾಗಲೇ ಕರ್ನಾಟಕ ರಾಜ್ಯ ಹಾಗೂ ದೇಶದ ಎಲ್ಲಾ ಭಾಗದಲ್ಲೂ ಹಾಸನದ ಮಹಿಳೆಯರ ಬೆತ್ತಲೆ ಪ್ರಕರಣ ಬಹಿರಂಗವಾಗಿದೆ. ಇದರ ಬಗ್ಗೆ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಹಿಳಾ ಆಯೋಗವು ಸಹ ದೂರನ್ನು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿದೆ. ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ಕಾನೂನು ಕ್ರಮಕ್ಕೆ ಮುಂದಾಗಿದೆ. ಆದರೆ ಮಾನವ ಹಕ್ಕು ಉಲ್ಲಂಘನೆ ಬಹಿರಂಗವಾದರೂ ಸಹ ಇಲ್ಲಿಯವರೆಗೂ ಯಾವುದೇ ರೀತಿಯ ಕಾನೂನಾತ್ಮಕ ಕ್ರಮ ಕೈಗೊಳ್ಳದೆ ಇರುವುದು ಅತ್ಯಂತ ದುರದೃಷ್ಟಕರ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಾಗೆಯೇ ಕೂಡಲೇ ರಾಜ್ಯ ಮಾನವ ಹಕ್ಕು ಆಯೋಗದ ತಂಡ ಹಾಸನಕ್ಕೆ ಭೇಟಿ ನೀಡಿ ನಡೆದಿರುವ ಅನ್ಯಾಯದ ಬಗ್ಗೆ ಮಾನವ ಹಕ್ಕು ಉಲ್ಲಂಘನೆ ಆಗಿರುವ ಬಗ್ಗೆ ತನಿಖೆ ನಡೆಸಬೇಕು. ಯಾರು ಮುಗ್ಧ ಮಹಿಳೆಯರನ್ನು ದುರುಪಯೋಗಪಡಿಸಿಕೊಂಡು ಲೈಂಗಿಕವಾಗಿ ಚಿತ್ರಹಿಂಸೆ ನೀಡಿದ್ದಾರೋ ಆ ಅರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ಇದನ್ನು ಓದಿದ್ದೀರಾ?  ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡು ಹೋಗಲು ಬಿಜೆಪಿ ಸರ್ಕಾರ ಮತ್ತು ಮೋದಿಯವರೇ ನೇರ ಕಾರಣ | ಪುಷ್ಪಾ ಅಮರನಾಥ್

ಇನ್ನು ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್, “ಕೋಮುವಾದವನ್ನು ವಿರೋಧಿಸುತ್ತಿದ್ದ ದೇವೇಗೌಡರು, ಯಾವ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಪ್ರಜ್ವಲ್‌ ರೇವಣ್ಣನನ್ನು ರಕ್ಷಿಸಲೆಂದೇ ಜನತಾದಳ ಬಿಜೆಪಿಯೊಂದಿಗೆ ಕೈ ಜೋಡಿಸಿದೆ” ಎಂದು ಆರೋಪಿಸಿದರು.

“ತಮ್ಮ ಕುಟುಂಬದ ರಕ್ಷಣೆಗಾಗಿ ದೇವೇಗೌಡರು ಈ ರೀತಿ ಮೈತ್ರ ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಕೇಂದ್ರ ಸರಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಲು ಮುಖ್ಯ ಕಾರಣ. ಪ್ರಜ್ವಲ್ ಇಂತಹ ಕೆಟ್ಟ ಕೆಲಸ ಮಾಡಿರುವುದು ಮೊದಲೇ ಇವರೆಲ್ಲರಿಗೂ ತಿಳಿದಿತ್ತು” ಎಂದು ವಿ.ಮನೋಹರ್ ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...