ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

Date:

ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ʼಪಾಕಿಸ್ತಾನಿʼ ಎಂದು ನಿಂದಿಸಿರುವ ಎನ್‌ ರವಿಕುಮಾರ್‌ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರನ್ನು ʼನಾಯಿʼಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ವಿಧಾನ ಪರಿಷತ್ತಿನ ಸದಸ್ಯರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

- Advertisement -

ವಿಧಾನಪರಿಷತ್‌ನ ಆಡಳಿತ ಪಕ್ಷದ ನಾಯಕರಾದ ಎನ್‌ ಎಸ್‌ ಭೋಸರಾಜು, ಹಾಗೂ ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರ ನೇತೃತ್ವದ ನಿಯೋಗ ಇಂದು(ಗುರುವಾರ) ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಿಧಾನಪರಿಷತ್‌ ಆಡಳಿತ ಪಕ್ಷದ ನಾಯಕರಾದ ಎನ್‌.ಎಸ್‌.ಭೋಸರಾಜು ಅವರು ಮಾತನಾಡಿ, “ವಿಧಾನಪರಿಷತ್‌ ಸದಸ್ಯರುಗಳಾದ ಎನ್‌.ರವಿಕುಮಾರ್‌ ಹಾಗೂ ಛಲವಾದಿ ನಾರಾಯಣ ಸ್ವಾಮಿ ಬೀದಿಯಲ್ಲಿ ಸಂವಿಧಾನ ವಿರೋಧಿಯಾಗಿ ಮಾತನಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಹೇಳಿಕೆ ನೀಡುವುದು ಸಮಂಜಸವಲ್ಲ. ʼಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ʼ ಎನ್ನುವ ಬಿಜೆಪಿ ಸದಸ್ಯರು ಸಮಾಜವನ್ನು ಹೊಡೆಯುವ ಕೆಲಸ ಮಾಡ್ತಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುವುದನ್ನು ಹವ್ಯಾಸವನ್ನಾಗಿಸಿಕೊಂಡಿದ್ದಾರೆ. ದಲಿತ ಸಮುದಾಯವನ್ನು ಹೀಗೆಳೆಯುವಂತಹ ಹೇಳಿಕೆ ನೀಡಿರುವ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಉಚ್ಚಾಟನೆ ಮಾಡಬೇಕು. ಹಾಗೆಯೇ, ಅಧಿಕಾರಿಯ ಬಗ್ಗೆ ಹೇಳಿಕೆ ನೀಡಿರುವ ರವಿಕುಮಾರ್ ಅವರ ವಿರುದ್ದ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸೆಣಸಾಟ ಸೇನೆಯದು, ಮೆರೆದಾಟ ಮೋದಿಯದು!

ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರು ಮಾತನಾಡಿ, ಕಾಂಗ್ರೆಸ್ ವಿಧಾನಪರಿಷತ್ತಿನ ಸದಸ್ಯರುಗಳ ನಿಯೋಗದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ರವಿಕುಮಾರ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ದ ಎರಡು ದೂರು ಸಲ್ಲಿಸಿದ್ದೇವೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಛಲವಾದಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ.

ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನದಿಂದ ಬಂದಿದ್ದಾರಾ? ಎಂದು ಹೇಳಿರುವ ರವಿಕುಮಾರ್‌ ಅವರನ್ನು ಅಮಾನತುಗೊಳಿಸಬೇಕು. ಇವರಿಬ್ಬರೂ ಸಮಾಜದಲ್ಲಿ ತಪ್ಪು ಸಂದೇಶ ಕೊಡುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನಿಯೋಗದಲ್ಲಿ ವಿಧಾನಪರಿಷತ್‌ ಸದಸ್ಯರುಗಳಾದ ವಸಂತ್‌ಕುಮಾರ್‌, ಅನಿಲ್‌ ಕುಮಾರ್‌ ಎಂ.ಎಲ್‌., ಜಗದೇವ ಗುತ್ತೇದಾರ್‌, ಎಸ್‌.ರವಿ, ಡಿ.ಟಿ.ಶ್ರೀನಿವಾಸ್‌, ದಿನೇಶ್‌ ಗೂಳಿಗೌಡ,ಚನ್ನರಾಜ್‌ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ಪುಟ್ಟಣ್ಣ, ನಸೀರ್‌ ಅಹ್ಮದ್‌, ಗೋವಿಂದರಾಜು, ನಾಗರಾಜ್‌ ಯಾದವ್‌, ಮಂಜುನಾಥ್‌ ಭಂಡಾರಿ ನಿಯೋಗದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...