ಎಚ್ಚರಿಕೆಯಿಂದ ಸಿದ್ಧಪಡಿಸಿದ ‘ಸ್ಕ್ರಿಪ್ಟ್’- ಹತಾಶೆಯ ಪಿಆರ್ ಕಸರತ್ತು: ಮೋದಿ ಪಿಟಿಐ ಸಂದರ್ಶನಕ್ಕೆ ಕಾಂಗ್ರೆಸ್ ಟೀಕೆ

Date:

ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿಸಂಸ್ಥೆ ಪಿಟಿಐ ಜತೆ ನಡೆಸಿದ ಸಂದರ್ಶನವನ್ನು ಕಾಂಗ್ರೆಸ್ ಟೀಕಿಸಿದೆ. “ಇದು ಸಂದರ್ಶನವಲ್ಲ. ಇದು ಎಚ್ಚರಿಕೆಯಿಂದ ಸಿದ್ಧಪಡಿಸಿದ ‘ಸ್ಕ್ರಿಪ್ಟ್’ ಮತ್ತು ಹತಾಶೆಯ ಪಿಆರ್ ಕಸರತ್ತು” ಎಂದು ಹೇಳಿದೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಅಮೆರಿಕಾದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಭಾರತ ಶರಣಾಗಿದೆ. ಇದೀಗ ರೈತರ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮೋದಿ ಅವರು ‘ಹೆಡ್‌ಲೈನ್ ಮ್ಯಾನೇಜ್‌ಮೆಂಟ್’ ತಂತ್ರವನ್ನು ಬಳಸುತ್ತಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ‘ದೇವಮಾನವ’ನಿಂದ ಮರಳಿ ‘ಮಾನವ’ನಾದ ಪ್ರಧಾನಿ ಮೋದಿ

“ಈ ವರ್ಷದ ಕೇಂದ್ರ ಬಜೆಟ್ ಹೂಡಿಕೆದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ. ಮಾರುಕಟ್ಟೆಗಳು ನಕಾರಾತ್ಮಕವಾಗಿ ಪ್ರತಿಕ್ರಿಯಿಸಿವೆ. ಬಜೆಟ್ ಮೇಲಿನ ಟೀಕೆಗಳನ್ನು ಮರೆಮಾಚಲು ಸಂಸತ್ತಿನ ಅಧಿವೇಶನದ ಬೆನ್ನಲ್ಲೇ ಈ ಸಂದರ್ಶನ ನೀಡಲಾಗಿದೆ” ಎಂದು ದೂರಿದ್ದಾರೆ. “ಪ್ರಧಾನಿಗಳು ಈಗ ತಲೆತಗ್ಗಿಸಿದ್ದಾರೆ ಮತ್ತು ದಣಿದಿದ್ದಾರೆ” ಎಂದು ವ್ಯಂಗ್ಯವಾಡಿದರು.

ಇನ್ನು ತೃಣಮೂಲ ಕಾಂಗ್ರೆಸ್ (TMC) ಪ್ರಧಾನಿಯವರ ಮಾತುಗಳನ್ನು “ಟೊಳ್ಳು ಮಾತುಗಳು” ಎಂದು ಟೀಕಿಸಿದರೆ, ಎಡಪಕ್ಷಗಳು ಪ್ರಧಾನಿಯವರ ಹೇಳಿಕೆಗಳು ಭಾರತೀಯ ಆರ್ಥಿಕತೆಯ ವಾಸ್ತವಕ್ಕೆ ದೂರವಾಗಿವೆ ಎಂದು ಹೇಳಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದರೂ ಈವರೆಗೆ ಒಂದೇ ಒಂದೂ ಪೂರ್ಣಪ್ರಮಾಣದ ಮುಕ್ತ ಪತ್ರಿಕಾಗೋಷ್ಠಿಯನ್ನು ನಡೆಸಿಲ್ಲ. ಪಿಟಿಐ, ಎಎನ್‌ಐ ಸೇರಿದಂತೆ ಕೆಲವು ಬೆರಳೆಣಿಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದಾರೆ. ಆದರೆ ಅವೆಲ್ಲವೂ ಪೂರ್ವಯೋಜಿತ, ಮೊದಲೇ ಸಿದ್ಧಪಡಿಸಿ ಪ್ರಶ್ನೆಗಳನ್ನು ನೀಡಲಾಗುವ ಸಂದರ್ಶನ. ಪ್ರಧಾನಿ ಮೋದಿ ಕಚೇರಿಯೇ ಈ ಪ್ರಶ್ನೆಗಳನ್ನು ನೀಡುತ್ತದೆ ಎಂಬುದು ವಿಪಕ್ಷಗಳ ಆರೋಪ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ...