ಕಾಂಗ್ರೆಸ್‌ ಸಂಸ್ಕೃತಿಯೇ ಬೇರೆ, ಅವರಿಗೆ ನಮ್ಮ ಆಚಾರ ವಿಚಾರ, ನಂಬಿಕೆ ಆಗಿ ಬರಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

Advertisements

ಕುಂಭಮೇಳದ ಗಂಗಾಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, “ಕಾಂಗ್ರೆಸ್‌ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ ವಿಚಾರ, ನಂಬಿಕೆಗಳು ಎಂದರೆ ಆಗಿ ಬರುವುದಿಲ್ಲ” ಎಂದು ಟೀಕಿಸಿದ್ದಾರೆ.

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ, “ಕಾಂಗ್ರೆಸ್ ನವರಿಗೆ ಟೀಕೆ ಮಾಡುವುದೇ ಕೆಲಸ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಮಾಡಿರುವ ಟೀಕೆ, ಪದ ಬಳಕೆ ಸರಿಯಿಲ್ಲ. ಕಾಂಗ್ರೆಸ್ ಗೆ ನಮ್ಮ ಧಾರ್ಮಿಕ ಆಚರಣೆಗಳ ಮೇಲೆ ನಂಬಿಕೆ ಇಲ್ಲ. ಅದಕ್ಕೆ ಈ ರೀತಿ ಮಾತನಾಡುತ್ತಾರೆ” ಎಂದರು.

“ಕಾಂಗ್ರೆಸ್‌ನವರು ಬೆಳಗಾವಿಯಲ್ಲಿ ಜೈ ಬಾಪು, ಜೈ ಅಂಬೇಡ್ಕರ್, ಜೈ ಸಂವಿಧಾನ್ ಎಂದು ಕಾರ್ಯಕ್ರಮ ಮಾಡಿದರು. ಗಾಂಧೀಜಿಯವರ ಹೆಸರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿದರು. ಆದರೂ ಈಗ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಗಾಂಧೀಜಿ ಅವರ ಮೇಲೆ ಕಾಂಗ್ರೆಸಿಗರಿಗೆ ನಂಬಿಕೆ ಇದ್ದಿದ್ದರೆ ಇಂತಹ ಮಾತುಗಳು ಬರುತ್ತಿರಲಿಲ್ಲ” ಎಂದು ಹೇಳಿದರು.

Advertisements

ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳಿಂದ ಸೂಕ್ತ ನಿರ್ದೇಶನ

“ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ. ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ” ಎಂದು ತಿಳಿಸಿದರು.

“ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ” ಎಂದರು.

ಸಮಸ್ಯೆ ಇದ್ದರೆ ನಮ್ಮ ಕಚೇರಿ ಸಂಪರ್ಕಿಸಿ

“ಕುಂಭಮೇಳದಲ್ಲಿ ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ಪಾಲ್ಗೊಂಡಿದ್ದು, ಯಾರಿಗೆ ಆದರೂ ಸಮಸ್ಯೆ ಆಗಿದ್ದರೆ ದೆಹಲಿಯಲ್ಲಿರುವ ನನ್ನ ಸಚಿವಾಲಯವನ್ನು ಸಂಪರ್ಕಿಸಿ. ಯಾರಿಗೆ ಸಮಸ್ಯೆ ಆಗಿದ್ದರೂ ನನ್ನ ಸಂಪರ್ಕ ಮಾಡಲು ಹೇಳಿದ್ದೇನೆ. ಮಾಧ್ಯಮದ ಮೂಲಕ ಮತ್ತೆ ಮನವಿ ಮಾಡುತ್ತೇನೆ. ನಮ್ಮ ಅಧಿಕಾರಿಗಳಿಗೂ ಕೂಡ ಹೇಳಿದ್ದೇನೆ” ಎಂದು ಕುಮಾರಸ್ವಾಮಿ ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಾಜಿ ಜ್ಯಾತ್ಯಾತೀತ ಕುಮಾರಣ್ಣ ಬಹುಶಃ ನಿಂಬೆ ಹಣ್ಣು ಮತ್ತು ಪೆನ್ ಡ್ರೈವ್ ವಿಚಾರವಾಗಿ ಹೇಳಿರಬಹುದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X