ಉಪಚುನಾವಣೆ | ಗುಜರಾತ್‌ನಲ್ಲಿ ಎಎಪಿ ಜೊತೆಗಿನ ಮೈತ್ರಿ ಕೈಬಿಟ್ಟ ಕಾಂಗ್ರೆಸ್

Date:

ಉಪಚುನಾವಣೆಗೂ ಮುನ್ನ ಗುಜರಾತ್‌ನ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಗುಜರಾತ್ ಕಾಂಗ್ರೆಸ್ ಘಟಕವು ಎಎಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟಿದೆ. “ಮುಂಬರುವ ವಿಸಾವದರ್ ಮತ್ತು ಕಾಡಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ” ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹ ಗೋಹಿಲ್ ಘೋಷಿಸಿದ್ದಾರೆ. ಇದರಿಂದಾಗಿ ಎಎಪಿ ಜೊತೆಗಿನ ಮೈತ್ರಿಯ ಮಾತುಕತೆ ಅಂತ್ಯವಾಗಿದೆ.

- Advertisement -

ಎಎಪಿ ಕಾಂಗ್ರೆಸ್ ಅನ್ನು ಸಂಪರ್ಕಿಸದೆ ಏಕಪಕ್ಷೀಯವಾಗಿ ಗೋಪಾಲ್ ಇಟಾಲಿಯಾ ಅವರನ್ನು ವಿಸಾವದರ್ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿ ಎಂದು ಘೋಷಿಸಿದೆ. ಇದರಿಂದಾಗಿ ಎಎಪಿ ಮತ್ತು ಕಾಂಗ್ರೆಸ್ ನಡುವೆ ಅಸಮಾಧಾನ ಉಂಟಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಗುಜರಾತ್‌ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಎಎಪಿ ಮೈತ್ರಿ

ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿಯ ಪ್ರಮುಖ ಸಭೆಯ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಗೋಹಿಲ್, “ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸುವುದು ಪಕ್ಷದ ನಿರ್ಧಾರ. ವಿಸಾವದರ್ ಮತ್ತು ವಾವ್ ಸ್ಥಾನಕ್ಕೆ ಸಂಬಂಧಿಸಿದಂತೆ ಎಎಪಿ ಜೊತೆ ಯಾವುದೇ ಒಪ್ಪಂದವನ್ನು ಮಾಡಿಕೊಂಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ವಿರೋಧ ಪಕ್ಷಗಳ ನಡುವೆ ಅಂತರ ಹೆಚ್ಚಾದಂತೆ ಬಿಜೆಪಿಗೆ ಲಾಭವಾಗಲಿದೆ ಎಂಬ ಅಭಿಪ್ರಾಯ ತಜ್ಞರುಗಳದ್ದು. ವಿರೋಧ ಪಕ್ಷಗಳು ಪ್ರತ್ಯೇಕವಾಗಿರುವ ಕಾರಣದಿಂದಾಗಿ ಈ ವರ್ಷದ ಅಂತ್ಯದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕ ಮತ ಪಡೆಯುವ ಸಾಧ್ಯತೆಯಿದೆ. ಪಾಟಿದಾರ್‌ಗಳು ಮತ್ತು ಮೇಲ್ಜಾತಿ ಎಂದು ಕರೆಸಿಕೊಂಡವರ ಪ್ರಾಬಲ್ಯವಿರುವ ಈ ಕ್ಷೇತ್ರವನ್ನು ಈ ಹಿಂದೆ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಅವರು ಪ್ರತಿನಿಧಿಸಿದ್ದ ಕಾರಣದಿಂದಾಗಿ ಈ ಕ್ಷೇತ್ರ ಮಹತ್ವವನ್ನು ಪಡೆದುಕೊಂಡಿದೆ.

2022ರಲ್ಲಿ ಎಎಪಿ ಭೂಪೇಂದ್ರ ಭಯಾನಿ ಅವರು ಈ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಕಾಂಗ್ರೆಸ್ ಅನ್ನು ಕೇವಲ 16,781 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ಎಎಪಿ ತಳ್ಳಿತ್ತು. ಬಿಜೆಪಿ ಅಭ್ಯರ್ಥಿ ಹರ್ಷದ್ ರಿಬಾಡಿಯಾ ಅವರಿಗೆ ಸಂಬಂಧಿಸಿದ ಕಾನೂನು ಸವಾಲಿನ ಕಾರಣದಿಂದಾಗಿ ಉಪಚುನಾವಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...