ಕಾಂಗ್ರೆಸ್‌ ʼದಿಲ್ಲಿ ಯಾತ್ರೆʼ ಲೋಕಸಭೆ ಚುನಾವಣೆಯ ತಂತ್ರ ಅಷ್ಟೇ: ಎಚ್‌ ಡಿ ಕುಮಾರಸ್ವಾಮಿ

Date:

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ‌, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ; ಲೋಕಸಭೆ ಚುನಾವಣೆ” ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

- Advertisement -

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

“ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್‌ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ?” ಎಂದು ವ್ಯಂಗ್ಯವಾಡಿದ್ದಾರೆ.

“ಕೇರಳದ ಎಲ್‌ಡಿಎಫ್‌ ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್‌ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’ ಯಾರು?

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು'...

ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಶಾಶ್ವತ ಪರಿಹಾರಕ್ಕೆ ಚಿಂತನೆ; ಹೋರಾಟ ಕೈಬಿಡುವಂತೆ ಸಿಎಂ ಮನವಿ

ತಮ್ಮ ಬೇಡಿಕೆಗಳಿಗಾಗಿ ನಡೆಸುತ್ತಿರುವ ಹೋರಾಟವನ್ನು ಕೈಬಿಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಡಿ.ಕೆ. ಶಿವಕುಮಾರ್...