BJP ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್

Date:

ಹಣಕಾಸು ಅಕ್ರಮ, ಅವ್ಯವಹಾರ ಸಂಬಂಧ ಕಾಂಗ್ರೆಸ್‌ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಪಗಳು ಆಧಾರ ರಹಿತ ಎಂದು ಹೇಳಿರು ಕಾಂಗ್ರೆಸ್‌, ನಾರಾಯಣಸ್ವಾಮಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಿಸಿದೆ.

- Advertisement -

ಇತ್ತೀಚೆಗೆ ಕಾಂಗ್ರೆಸ್‌ ವಿರುದ್ಧ ಆರೋಪಗಳನ್ನು ಮಾಡಿದ್ದ ನಾರಾಯಣಸ್ವಾಮಿ, “ಕಾಂಗ್ರೆಸ್‌ನಲ್ಲಿ ಕೋಟ್ಯಾಂತರ ರೂ. ಹಣದ ವ್ಯವಹಾರ ನಡೆಯುತ್ತಿದೆ. ಕುದುರೆ ವ್ಯಾಪಾರ ನಡೆಯುತ್ತಿದೆ” ಎಂದು ಆರೋಪಿಸಿದ್ದರು. ಅವರ ಆರೋಪವನ್ನು ಕಾಂಗ್ರೆಸ್‌ ಆಧಾರ ರಹಿತ ಸುಳ್ಳು ಆರೋಪ ಎಂದು ಕರೆದಿದೆ. ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇಶದ ಬೃಹತ್ ಉದ್ಯಮ ಸಂಸ್ಥೆ ಟಾಟಾ ಸನ್ಸ್ ಬೋರ್ಡ್...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

“ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್‌ನ ಕೆಲವು ಶಾಸಕರ ಹೆಸರನ್ನು ಉಲ್ಲೇಖಿಸಿ ಸುಳ್ಳು ಆರೋಪ ಮಾಡಿದ್ದಾರೆ. ಪಕ್ಷದ ವರಿಷ್ಠರ ವಿರುದ್ಧವೂ ಆಧಾರ ರಹಿತ ಹೇಳಿಕೆಗಳನ್ನು ನೀಡಿದ್ದಾರೆ. ಆ ಮೂಲಕ, ರಾಜ್ಯದ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಅವರ ಆರೋಪದ ವಿರುದ್ಧ ತನಿಖೆ ನಡೆಸಬೇಕು. ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಬೇಕು” ಎಂದು ಮನೋಹರ್ ಹೇಳಿದ್ದಾರೆ.

“ನಾರಾಯಣಸ್ವಾಮಿ ಅವರು ಮಾಡುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಅವರ ಬಳಿಯೇ ದಾಖಲೆ ಇದೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಅವರ ಬಳಿ ಯಾವ ಮಾಹಿತಿಗಳು ಇವೆ ಮತ್ತು ಸಂದೇಶಗಳು ಇವೆ ಎಂಬುದನ್ನು ಪರಿಶೀಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಸುಳ್ಳು ಆರೋಪ ಮಾಡಿರುವ ನಾರಾಯಣಸ್ವಾಮಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಅವರು ನೀಡಿರುವ ಅಂಕಿ ಅಂಶ ಕುರಿತು ಅವರಿಂದ ಮಾಹಿತಿ ಪಡೆಯಬೇಕು. ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂಬುದು ಸ್ಪಷ್ಟವಾದರೆ, ಕೂಡಲೇ ಅವರನ್ನು ಬಂಧಿಸಬೇಕು. ವಿಧಾನ ಪರಿಷತ್‍ನ ವಿಪಕ್ಷ ನಾಯಕರ ಸ್ಥಾನದಲ್ಲಿ ಇವರು ನಾರಾಯಣಸ್ವಾಮಿ ಅವರು ಅಧಾರ ರಹಿತ ಆರೋಪ ಮಾಡಬಾರದು” ಎಂದಿದ್ದಾರೆ.

“ಛಲವಾದಿ ನಾರಾಯಣಸ್ವಾಮಿ ಅವರಿಗೆ ಯಾರು ಮಾಹಿತಿ ನೀಡಿದ್ದಾರೆ. ಯಾವ ವ್ಯಕ್ತಿಯಿಂದ ಸಂದೇಶಗಳು ಬಂದಿವೆ ಎಂಬುದನ್ನು ಪತ್ತೆಹಚ್ಚಬೇಕು. ಅದಕ್ಕಾಗಿ ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...