ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರ್ಕಾರ: ಎ ಎಸ್ ಪಾಟೀಲ ನಡಹಳ್ಳಿ ವಾಗ್ದಾಳಿ

Date:

Advertisements

ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ ಬರಗಾಲದ ಪರಿಹಾರವನ್ನು ಕೊಟ್ಟಿದ್ದರೂ ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇವತ್ತಿಗೂ ನೀಡಿಲ್ಲ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.

ಬೆಂಗಳುರು ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಸಾವಿರಾರು ಕೋಟಿ ರೂ. ಬರಗಾಲದ ಪರಿಹಾರಧನ ಕೊಟ್ಟಿದೆ. ಆದರೂ, ದೇವರು ಕೊಟ್ಟರೂ ಕೂಡ ಪೂಜಾರಿ ಕೊಡಲು ತಯಾರಿಲ್ಲ” ಎಂದರು.

“ಬರಗಾಲದಿಂದ ಬೆಂದಿರುವ ರೈತರಿಗೆ ಅತ್ಯಂತ ಕಡಿಮೆ ದರದಲ್ಲಿ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ಈ ಸರ್ಕಾರ ಮಾಡಬೇಕಿತ್ತು. ಸರಕಾರವು ಬಿತ್ತನೆ ಬೀಜಕ್ಕೂ ಅತಿ ಹೆಚ್ಚು ದರ ವಿಧಿಸುತ್ತಿದೆ. ಈಗ ಮುಂಗಾರು ಸಂದರ್ಭದಲ್ಲಿ ಬೆಳೆಯುವ ಹೆಸರು, ಶೇಂಗಾ, ಉದ್ದು, ಮೆಕ್ಕೆಜೋಳ ಮೊದಲಾದವುಗಳ ದರವನ್ನು ಅತಿ ಹೆಚ್ಚು ಪ್ರಮಾಣದಲ್ಲಿ ಏರಿಸಿದ್ದಾರೆ” ಎಂದರು.

Advertisements

“ಉದ್ದು ಪ್ರತಿ ಕೆಜಿಗೆ 43 ರೂ, ತೊಗರಿಗೆ 48 ರೂ., ಮೆಕ್ಕೆಜೋಳ 5 ಕೆಜಿ ಪೊಟ್ಟಣಕ್ಕೆ 24 ರೂ. ಹೆಚ್ಚಿಸಿದ್ದಾರೆ. ಸರಕಾರ ಈ ಹಿಂದಿನ ಬಿತ್ತನೆ ಬೀಜದ ದರವನ್ನೇ ಮುಂದುವರಿಸಬೇಕು. ಬಿತ್ತನೆ ಬೀಜ, ಗೊಬ್ಬರ ಸಮರ್ಪಕವಾಗಿ ಎಲ್ಲ ರೈತರಿಗೆ ಸಿಗುವಂತೆ ನೋಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ಕೊಬ್ಬರಿಯನ್ನು ಎಂಎಸ್‍ಪಿ ಅಡಿ ಖರೀದಿ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ಪ್ರತಿ ಕ್ವಿಂಟಲ್‍ಗೆ ಸುಮಾರು 12 ಸಾವಿರ ರೂ. ಕೊಟ್ಟು ಖರೀದಿ ಅವಕಾಶ ನೀಡಿದ್ದು, ಈ ಸರಕಾರ ಚೀಲ ಇಲ್ಲ ಎಂಬ ನೆಪ ಹೇಳುತ್ತಿದೆ. ಇದು ಅತ್ಯಂತ ನಾಚಿಕೆಗೇಡು. ಈಗಾಗಲೇ ಖರೀದಿಸಿದ 35 ಸಾವಿರ ಟನ್ ಕೊಬ್ಬರಿಗೆ ಹಣವನ್ನೂ ನೀಡಿಲ್ಲ” ಎಂದು ದೂರಿದರು.

“ರೈತರು ಹಣ ಕೇಳಿದರೆ ಕೊಬ್ಬರಿ ತೆಗೆದುಕೊಂಡು ಹೋಗುವಂತೆ ಅಧಿಕಾರಿಗಳು ದರ್ಪದಿಂದ ಮಾತನಾಡುತ್ತಿದ್ದಾರೆ. ಕೊಬ್ಬರಿಗೆ ಸಂಬಂಧಿಸಿ ರೈತರಿಗೆ ಹಣ ನೀಡಬೇಕು. ಚೀಲ ಇಲ್ಲ ಎಂಬ ಕುಂಟು ನೆಪ ಬಿಟ್ಟು ಕೊಬ್ಬರಿ ಖರೀದಿ ಮುಂದುವರಿಸಬೇಕು” ಎಂದು ಒತ್ತಾಯಿಸಿದರು.

“ಹಿಂದೆ ಹೈನುಗಾರರಿಗೆ ನಮ್ಮ ಸರಕಾರ ಹಾಲು ಉತ್ಪಾದನೆಗೆ ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಈಗ ಹೈನುಗಾರಿಕೆಗೆ ಸಂಬಂಧಿಸಿ ಪ್ರತಿ ಲೀಟರಿಗೆ 5 ರೂ. ಪ್ರೋತ್ಸಾಹಧನ ಸ್ಥಗಿತಗೊಂಡಿದೆ ಎಂದರಲ್ಲದೆ, ರೈತರಿಗೆ ಬಾಕಿ ಇರುವ 700ರಿಂದ 800 ಕೋಟಿ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X