ಹಗರಣಗಳಿಂದ ಕೋಮಾಗೆ ಹೋದ ಕಾಂಗ್ರೆಸ್‌ ಸರ್ಕಾರ, ಅಭಿವೃದ್ಧಿ ಕಾರ್ಯಗಳೇ ಇಲ್ಲ: ಆರ್‌.ಅಶೋಕ್‌ ಟೀಕೆ

Date:

“ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

- Advertisement -

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರಾಗಿದೆ” ಎಂದು ದೂರಿದರು.

“ಕೆಪಿಎಸ್‌ಸಿಯಲ್ಲಿ ಕನ್ನಡ ಭಾಷಾಂತರ ಮಾಡಲು ಕೂಡ ಯೋಗ್ಯತೆ ಇಲ್ಲ. ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅಂತಹವರ ಆಡಳಿತದಲ್ಲೇ ಕನ್ನಡ ಪ್ರಶ್ನೆಪತ್ರಿಕೆಯನ್ನು ನೀಡಲು ಸಾಧ್ಯವಾಗಿಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಒತ್ತಡದಿಂದಾಗಿ ಕೆಪಿಎಸ್‌ಸಿಯಲ್ಲಿ ಪರೀಕ್ಷೆ ನಡೆಸಲು ಕೂಡ ಸಾಧ್ಯವಾಗಿಲ್ಲ. ಪರೀಕ್ಷೆ ರದ್ದು ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕಳೆದ ಬಾರಿ ಪರೀಕ್ಷೆ ಬರೆದವರಿಗೆ ಈ ಬಾರಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಈ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು” ಎಂದು ಆಗ್ರಹಿಸಿದರು.

ರೀಲ್ಸ್‌ಗೆ ಹಣ ಖರ್ಚು

“ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅಂಗನವಾಡಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಿಲ್ಲ. ಆದರೆ ರೀಲ್ಸ್‌ ಮಾಡಲು 60-70 ಕೋಟಿ ರೂ. ನೀಡುತ್ತಿದ್ದಾರೆ. ಅದೇ ಹಣದಲ್ಲಿ ಶಾಲೆಗಳ ದುರಸ್ತಿ ಮಾಡಬಹುದಿತ್ತು” ಎಂದರು.

“ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಆರೋಪಕ್ಕೆ ಸರ್ಕಾರ ಉತ್ತರ ನೀಡಬೇಕಿತ್ತು. ಅದನ್ನು ಬಿಟ್ಟು ಆರೋಪದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕೋವಿಡ್‌ ವಿಚಾರದಲ್ಲೂ ತನಿಖಾ ಆಯೋಗ ಮಾಡಿದ್ದು, ಅರ್ಧದಲ್ಲೇ ವರದಿ ಪಡೆದು ದ್ವೇಷ ರಾಜಕಾರಣ ಮಾಡಲಾಗಿದೆ. ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದಾಗಲೇ ಇದರ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು” ಎಂದು ಹೇಳಿದರು.

ರಾಜೀನಾಮೆ ನೀಡಿ

“50:50 ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನ ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಪರಿಗಣಿಸಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯನವರ ಪತ್ನಿಗೆ ಪೂರ್ವಾನ್ವಯವಾಗುತಂತೆ 50:50 ಅನುಪಾತದಲ್ಲಿ ನೀಡಿರುವುದು ಸಹ ತಪ್ಪು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದೆ” ಎಂದರು.

“ಹಿಂದಿನ ಬಿಜೆಪಿ ಸರ್ಕಾರ ನೇಮಿಸಿದ್ದ ತಾಂತ್ರಿಕ ಸಮಿತಿ ಮುಡಾ ಅಕ್ರಮದ ಬಗ್ಗೆ ವರದಿ ನೀಡಿ 10 ತಿಂಗಳು ಕಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತನಿಖೆ ನಡೆಯುತ್ತಿದ್ದರೂ ತಪ್ಪಿತಸ್ಥ ಅಧಿಕಾರಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ಈಗ ದಿಢೀರನೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಮುಡಾ ಹಗರಣ ಬಯಲಿಗೆ ಬಂದಾಗಿನಿಂದ ಗಲಿಬಿಲಿಗೊಂಡಿದ್ದಾರೆ, ಮಂಕಾಗಿದ್ದಾರೆ, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....