ಜನರ ಹಣ ಕೊಳ್ಳೆ ಹೊಡೆಯುವುದೇ ಕಾಂಗ್ರೆಸ್ ಸರ್ಕಾರದ ಕೆಲಸ: ಆರ್ ಅಶೋಕ್ ಟೀಕೆ

Date:

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ. ಇದೊಂದು ಲೂಟಿ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದರು.

ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಭಾಷಣ ಮುಗಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, “ಜನರ ಹಣವನ್ನು ಕೊಳ್ಳೆ ಹೊಡೆಯುವುದೇ ಸರ್ಕಾರದ ಕೆಲಸ ಆಗಿದೆ” ಎಂದು ಆರೋಪಿಸಿದರು.

“ಕೋಮುವಾದಕ್ಕೆ ಉತ್ತೇಜನ ನೀಡುವ ಕೆಲಸ ಆಗಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು, ಕೇಂದ್ರದ ಯೋಜನೆಯನ್ನು ನಾವೇ ತಂದಿದ್ದೀವಿ, ನಾವೇ ಮಾಡಿದ್ದು ಎಂದು ರಾಜ್ಯ ಸರ್ಕಾರ ಬೆನ್ನು ತಟ್ಟಿಕೊಂಡಿದೆ. ಐದನೇ ಗ್ಯಾರಂಟಿ ಪ್ರಾರಂಭವೇ ಆಗಿಲ್ಲ. ಒಬ್ಬ ನಿರುದ್ಯೋಗಿ ಯುವಕನಿಗೆ ಒಂದು ರೂಪಾಯಿ ಸಿಕ್ಕಿಲ್ಲ” ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬರ ಪರಿಸ್ಥಿತಿ 25 ಸಾವಿರ ಪರಿಹಾರ ನೀಡಬೇಕು ಅಂತ ಒತ್ತಾಯ ಮಾಡಿದ್ದೆವು. ಬರದ ವಿಚಾರದಲ್ಲಿ ಎರಡು ಸಾವಿರ ಹಣ ಕೊಟ್ಟಿಲ್ಲ. ಕಂತು ಕಂತು ಆಗಿ ಹೋಗಿದೆ ಅಂತೆ. ರೈತರಿಗೆ ಮೋಸ ಮಾಡುತ್ತಾ ಇದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತಿದೆ. ಅಭಿವೃದ್ಧಿ ಕುಂಠಿತ ಆಗಿದೆ” ಎಂದರು.

“ಮಕ್ಕಳಿಗೆ ಚಿಕ್ಕಿ, ಮೊಟ್ಟೆ ಕೊಡುತ್ತಿದ್ದೇವೆ ಎನ್ನುತ್ತಾರೆ. ಮೊಟ್ಟೆ, ಚಿಕ್ಕಿ ಕೊಟ್ಟು ಶೌಚಾಲಯ ಕ್ಲಿನ್ ಮಾಡಿಸುವ ಕೆಲಸ ಆಗುತ್ತಿದೆ. ಶಿವಮೊಗ್ಗ ಏರ್ಪೋರ್ಟ್ ಕಾಮಗಾರಿ ಮುಗಿದಿದ್ದು, ಅದು ನಮ್ಮದು ಅಂತ ಹೇಳಿದ್ದಾರೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣ ನಿಡುವುದು. ಅದನ್ನೂ ತಮ್ಮದೇ ಎಂದು ಹೇಳಿಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಮನೆ, ಕಚೇರಿಯಲ್ಲಿನ ಇ.ಡಿ ಶೋಧ ಮುಕ್ತಾಯ

“ಹಿಂದುಗಳ ಮೇಲೆ ದೌರ್ಜನ್ಯ ಆಗುತ್ತಾ ಇದೆ. ಭಯೋತ್ಪಾದಕ ಚಟುವಟಿಕೆಗಳು ಜಾಸ್ತಿ ಆಗಿವೆ. ಇಷ್ಟೆಲ್ಲ ಆದರೂ ಶಾಂತಿ ಸುವ್ಯವಸ್ಥೆ ಕಾಪಾಡ್ತೀವಿ ಅಂತ ಹೇಳುತ್ತಿದ್ದಾರೆ. ಕನ್ನಡ ರಕ್ಷಣೆ ಮಾಡ್ತೀವಿ ಅಂತ ಹೇಳಿ ಕನ್ನಡ ಹೋರಾಟಗಾರರನ್ನು ಜೈಲಿಗೆ ಅಟ್ಟಿದ ದುಷ್ಟ ಸರ್ಕಾರ ಇದು. ಎಸ್​​ಸಿ, ಎಸ್ಟಿ ಹಣ ಬೇರೆ ಯೋಜನೆಗಳಿಗೆ ಬಳಸಿ ಮೋಸ ಮಾಡಿದ್ದಾರೆ” ಎಂದು ದೂರಿದರು.

ಜನವಿರೋಧಿ ಸರ್ಕಾರ: ಬೊಮ್ಮಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ. ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿದರು.

“ನಮ್ಮ ಅವಧಿಯ ಕೆಲಸಗಳನ್ನು ತಾವು ಮಾಡಿದ್ದಾಗಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಹೇಳಿಸಿದೆ ಈ ಸರ್ಕಾರ ರಾಜ್ಯಪಾಲರ ಮೂಲಕ ಸುಳ್ಳು ಭಾಷಣ ಮಾಡಿಸಿದೆ. ಕಾಂಗ್ರೆಸ್ ಸರ್ಕಾರ ʼಕರ್ನಾಟಕ ಮಾದರಿʼ ಎಂದು ಬಿಂಬಿಸಿಕೊಂಡಿದೆ. ಕರ್ನಾಟಕ ಮಾಡೆಲ್ ಅಂದರೆ ಏನು ಎಂಬುದನ್ನು ಕಾಂಗ್ರೆಸ್​ ಹೇಳಲಿ. ಅಭಿವೃದ್ಧಿ ಕೆಲಸ ಮಾಡದೆ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡಿದೆ. ರಾಜ್ಯಪಾಲರ ಬಾಯಲ್ಲಿ ಸುಳ್ಳನ್ನು ಹೇಳಿಸಿದೆ ಈ ಸರ್ಕಾರ” ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಕರ್ನಾಟಕ ಮಾದರಿ ಭ್ರಷ್ಟಾಚಾರ: ಅಶ್ವತ್ಥನಾರಾಯಣ

“ಕರ್ನಾಟಕಕ್ಕೆ ಇದ್ದ ಒಳ್ಳೆಯ ಹೆಸರನ್ನು ಈ ಸರ್ಕಾರ ಕೆಡಿಸಿದೆ. ಕರ್ನಾಟಕ ಇತರೆ ರಾಜ್ಯಗಳಿಗೆ ಮಾದರಿಯಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ ಕೆಟ್ಟ ಮಾಡೆಲ್ ಆಗಿದೆ. ಭ್ರಷ್ಟಾಚಾರ ಮಾದರಿಯಾಗಿದೆ. ಕರ್ನಾಟಕ ಮಾದರಿ ಅಂದರೆ ಅಪಕೀರ್ತಿ ಮಾಡೆಲ್ ಆಗಿದೆ” ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಡಾ. ಅಶ್ವತ್ಥ​ನಾರಾಯಣ ಹರಿಹಾಯ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಎಂಟು ತಿಂಗಳ ಹಿಂದೆ ನೀವು ಮಾಡಿದ್ದು ಏನು ಮಾಜಿ ಸಚಿವರೇ,, ಅದಕ್ಕೆ ಬೇಸತ್ತು ಅಲ್ಲವೇ ಜನರು ನಿಮಗೆ ವಿಶ್ರಾಂತಿ ಕೊಟ್ಟರು,,,ಜನಪರ ಕೆಲಸದ ಅರ್ಥವೇನೆಂದು ಗೊತ್ತಿದೆಯಾ ನಿಮಗೆ,,,ಕೇಸರಿ ಶಾಲು ಹೆಗಲಿಗೆ ಹಾಕಿಕೊಂಡು ಪೇಶ್ವೆಗಳಂತೆ ಜನಪ್ರತಿನಿಧಿ ಸಭೆಯಲ್ಲಿ ಮನುವ್ಯಾಧಿಗಳಂತೆ ಕೂಗಾಡುವ ಶೂದ್ರರು ಮತ್ತೊಮ್ಮೆ ನಾವು ಗುಲಾಮಗಿರಿಯಲ್ಲರಲು ಯೋಗ್ಯರು ಸಾಬೀತು ಮಾಡುವುದರೊಂದಿಗೆ ಮತ ಹಾಕಿದ ಮತದಾರರಿಗೆ ಅವಮಾನ ಮಾಡುವ ನಿಮಗೆ ಸಂವಿಧಾನದ ಬಗ್ಗೆ ಗೌರವ ಇದೆಯಾ, ರಾಜ್ಯದ ಸ್ವಾಭಿಮಾನ, ಅಸ್ಮಿತೆ, ಸೌಹಾರ್ದ ಪರಂಪರೆಗೆ ಉತ್ತರದ ಹೇರಿಕೆ ಮಾಡಿ ಧಕ್ಕೆ ತರುವ ಪ್ರಯತ್ನ ಮಾಡುತ್ತಿರುವಿರಿ,,,ನೆಲದ ಸ್ವಾಭಿಮಾನ ಇಲ್ಲದವರು ರಾಜ್ಯಕ್ಕೆ ಅವಶ್ಯಕತೆ ಇಲ್ಲ ಅಂತ ಜನರೇ ಬಹಿಷ್ಕಾರ ಹಾಕುವ ಕಾಲ ಬರಬಹುದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ಲಾಲೂ ಪ್ರಸಾದ್ ಟೀಕೆಯನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ: ‘ಮೋದಿ ಕಾ ಪರಿವಾರ್’ ಅಭಿಯಾನ!

ನಿನ್ನೆ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಷ್ಟ್ರೀಯ ಜನತಾ ದಳ...