ಕನ್ನಡಿಗರಿಗೆ ಉದ್ಯೋಗ | ‘ಅಸ್ತು’ ಎಂದು ಹೆಜ್ಜೆ ಇಟ್ಟ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’: ವಿಜಯೇಂದ್ರ ವ್ಯಂಗ್ಯ

Date:

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.

- Advertisement -

ಸಿಎಂ ಸಿದ್ದರಾಮಯ್ಯ ಅವರ ಎಕ್ಸ್‌ ತಾಣದ ಪೋಸ್ಟ್‌ ಉಲ್ಲೇಖಿಸಿ ಎಕ್ಸ್‌ ತಾಣದಲ್ಲೇ ಪ್ರತಿಕ್ರಿಯಿಸಿ, “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ’ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ?” ಎಂದು ಕೇಳಿದ್ದಾರೆ.

“ಮುಖ್ಯಮಂತ್ರಿಗಳು ಈ ಕುರಿತು ತಮ್ಮ ಎಕ್ಸ್  ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ” ಎಂದು ಟೀಕಿಸಿದ್ದಾರೆ.

“ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ?” ಎಂದು ಕುಟುಕಿದ್ದಾರೆ.

“ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ
ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು” ಎಂದು ಹೇಳಿದ್ದಾರೆ.

“ವಿಧೇಯಕದ ಕುರಿತು ಮಾಧ್ಯಮಗಳಲ್ಲಿ‌ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ
ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...