ಕಾಂಗ್ರೆಸ್‌ನವರು ಯಾವತ್ತು ಸತ್ಯ, ಧರ್ಮವನ್ನು ಉಳಿಸಿದ್ದಾರೆ: ಹೆಚ್‌ ಡಿ ಕುಮಾರಸ್ವಾಮಿ ಪ್ರಶ್ನೆ

Date:

Advertisements

ಕಾಂಗ್ರೆಸ್‌ನವರು ಇಂದು ಪೇಪರ್‌ಗಳಲ್ಲಿ ಜಾಹೀರಾತು ಕೊಟ್ಟು, ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ ಹೇಳಿದ್ದಾರೆ. ಇವರು ಯಾವತ್ತು ಸತ್ಯ ಹಾಗೂ ಧರ್ಮವನ್ನು ಉಳಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಕರ್ನಾಟಕ ರಾಜ್ಯವನ್ನು ವಾಮಾಮಾರ್ಗ, ಮೋಸದಿಂದ ಅಸ್ಥಿರಗೊಳಿಸುತ್ತಿದ್ದಾರೆ ಎಂದು ಜಾಹೀರಾತಿನಲ್ಲಿ ತಿಳಿಸಿದ್ದಾರೆ. ಆದರೆ, ವಾಮಾಮಾರ್ಗ, ಮೋಸವನ್ನು ಸ್ಥಿರಗೊಳಿಸಲು ಹೊರಟಿರುವ ಸರ್ಕಾರವಿದು” ಎಂದು ಟೀಕಿಸಿದ್ದಾರೆ.

“ಮಹರ್ಷಿ ವಾಲ್ಮೀಕಿ ನಿಗಮದಿಂದ ಬಡವರಿಗೆ ಕೊಡಬೇಕಾದ ಹಣವನ್ನು ನುಂಗಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿ ಮುಡಾ ನಿವೇಶನ ತೆಗೆದುಕೊಂಡಿದ್ದಾರೆ. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ ಕೊಟ್ಟಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ. ಇವರೇ ಆರ್ಥಿಕ ಸಚಿವರು, ಇವರ ಇಲಾಖೆಗೆ ಸಂಬಂಧಪಟ್ಟ ಹಣ ಬಿಡುಗಡೆ ಆಗಿದೆ. ಅದರ ಸತ್ಯಾಂಶಗಳು ಹೊರಬರುವ ಕಾಲ ದೂರವಿಲ್ಲ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

“ಸಿದ್ರಾಮಣ್ಣನ ಬಗ್ಗೆ ಹಿನಕಲ್ ಸಾಕಮ್ಮನ ಕೇಳಿದರೆ ಗೊತ್ತಾಗುತ್ತದೆ. ಯಾವ ವಾಮ ಮಾರ್ಗದಲ್ಲಿ ನಿವೇಶನ ಪಡೆದಿದ್ದಾರೆ ಎಂಬುದು ಗೊತ್ತಾಗುತ್ತದೆ. ಇದೆಲ್ಲ ಇತಿಹಾಸ ಇದೆ. ಹಾಗಾಗಿ ಇಲ್ಲಿ ಸ್ಥಿರಗೊಳಿಸುವುದು, ಅಸ್ಥಿರಗೊಳಿಸೊದು ನಮ್ಮ ಕೈಯಲ್ಲಿಲ್ಲ. ಎಲ್ಲ ಚಾಮುಂಡೇಶ್ವರಿ ಅಮ್ಮನ ಕೈಯಲ್ಲಿದೆ” ಎಂದು ತಿರುಗೇಟು ನಿಡಿದರು.

“ಡಿನ್ನರ್ ಮೀಟಿಂಗ್ ಅಥವಾ ಬ್ರೇಕ್ ಫಾಸ್ಟ್ ಮೀಟಿಂಗ್ ಬೆಳವಣಿಗೆಗಳೆಲ್ಲಾ ಕಾಂಗ್ರೆಸ್‌ನವರಿಗೆ ಸೇರಿದ್ದು. ಮುಖ್ಯಮಂತ್ರಿ ಬದಲಾವಣೆ ವಿಚಾರ ಅವರ ಪಕ್ಷಕ್ಕೆ ಸೇರಿದ್ದು. ನಾನು ಮುಖ್ಯಮಂತ್ರಿ ಇದ್ದಾಗ ಜಾತಿಗಣತಿ ವರದಿ ಸ್ವೀಕರಿಸಲಿಲ್ಲ ಎಂದು ಆರೋಪ ಮಾಡಿದ್ದರು. ನಾನು 14 ತಿಂಗಳು ಸಿಎಂ ಆಗಿದ್ದೆ. ಸಿದ್ದರಾಮಯ್ಯ ಅವರು ಬಂದು 15 ತಿಂಗಳಾಗಿವೆ. ಏಕೆ ವರದಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X