ಕಾಂಗ್ರೆಸ್ ಸರಕಾರ ಬಡಜನರ, ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ: ಬಿ ವೈ ವಿಜಯೇಂದ್ರ

Date:

ಕಾಂಗ್ರೆಸ್ ಸರಕಾರವು ಬಡಜನರ, ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಬಡವರು, ರೈತರು ಈ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಬರಗಾಲದ ಕುರಿತು ನಿರ್ಲಕ್ಷ್ಯ ವಹಿಸಿದ ಕಾಂಗ್ರೆಸ್ ಸರಕಾರವನ್ನು ಎಚ್ಚರಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷನಾಗಿ ನಾನು ಮತ್ತು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಸೇರಿ ಮಾಡುತ್ತೇವೆ” ಎಂದರು.

“ನಮ್ಮೆಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಹಿರಿಯ ನಾಯಕರು ಒಗ್ಗಟ್ಟಾಗಿ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ದಿಕ್ಕನ್ನು ಬದಲಾಯಿಸುವ ಮಹತ್ವದ ಚುನಾವಣೆ. ಅದು ರಾಜ್ಯದ ರಾಜಕೀಯ ದಿಕ್ಕನ್ನು ಬದಲಾಯಿಸಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

“ರಾಜ್ಯ ಮತ್ತು ದೇಶದ ಭವಿಷ್ಯದ ದೃಷ್ಟಿಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು 3ನೇ ಬಾರಿಗೆ ದೇಶದ ಪ್ರಧಾನಿ ಆಗಬೇಕು. ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ರಾಜ್ಯ ಸರಕಾರಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ : ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ

ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ...

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಲಬುರಗಿ | ಸಕಾಲ ಅರ್ಜಿ ವಿಲೇವಾರಿ : ಕಲಬುರಗಿಗೆ ರಾಜ್ಯದಲ್ಲೇ ನಂಬರ್‌ 1 ಸ್ಥಾನ

ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್ ತಿಂಗಳ ಅರ್ಜಿ...