ಬಜೆಟ್ ಪ್ರತಿಕ್ರಿಯೆ | ಬಿಜೆಪಿಯ ರೈತ ವಿರೋಧಿ ನೀತಿಗಳನ್ನು ಪೋಷಿಸುತ್ತಿರುವ ಕಾಂಗ್ರೆಸ್‌: ಬಡಗಲಪುರ ನಾಗೇಂದ್ರ

Date:

ಎಲ್ಲ ವರ್ಗಕ್ಕೂ ನ್ಯಾಯ ಒದಗಿಸಿದಂತೆ ಮೇಲ್ನೋಟಕ್ಕೆ ಕಂಡುಬಂದರೂ ಕರ್ನಾಟಕದ ಮಾದರಿಗೆ ಯಾವುದೇ ಸ್ಪಷ್ಟತೆಯನ್ನು ರಾಜ್ಯ ಬಜೆಟ್ ಹೊಂದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ವಿಶ್ಲೇಷಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಶೇ.60 ಭಾಗ ಜನರು ಅವಲಂಬಿತರಾಗಿರುವ ಕೃಷಿ ಮತ್ತು ಕೃಷಿಪೂರಕ ಕ್ಷೇತ್ರಕ್ಕೆ ಈ ಬಜೆಟ್‌ನಲ್ಲಿ ಕೇವಲ ಶೇ.14 ರಷ್ಟು ಅನುದಾನ ಮೀಸಲಿಡಲಾಗಿದೆ. ಇದರಿಂದ ಕೃಷಿ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಕೇಂದ್ರ ಸರ್ಕಾರ ತರಲು ಹೊರಟಿರುವ ರೈತ ವಿರೋಧಿ, ಕೃಷಿ ವಿರೋಧಿ ನೀತಿಗಳನ್ನು ತಿರಸ್ಕರಿಸದೇ ಇರುವುದು ಸರಿಯಲ್ಲ. ಮತ್ತು ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ‘ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್ ಪಡೆದುಕೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೇಂದ್ರ ಸರ್ಕಾರ ಖಾಸಗಿಕರಣ ಮಾಡಲು ಹೊರಟಿರುವ ವಿದ್ಯುತ್ ತಿದ್ದುಪಡಿ ಬಗ್ಗೆ ಚಕಾರ ಎತ್ತಿಲ್ಲ. ಕೃಷಿ ಬೆಲೆ ಆಯೋಗವನ್ನು ಸದೃಢಗೊಳಿಸಲು ಯಾವುದೇ ತೀರ್ಮಾನ ಕೈಗೊಳ್ಳದೆ ಮಾತಿಗೆ ತಪ್ಪಿದ್ದು ಬಿಜೆಪಿ ತಂದಿರುವ ಎಲ್ಲ ರೈತ ವಿರೋಧಿ ನೀತಿಗಳನ್ನು ರಾಜ್ಯ ಸರ್ಕಾರ ಮುಂದುವರಿಸಲು ಇಚ್ಚಿಸಿದಂತೆ ಕಾಣುತ್ತದೆ” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...