ಹಸಿವು ಮುಕ್ತ ರಾಜ್ಯ, ದೇಶ ನಿರ್ಮಾಣಕ್ಕೆ ಕಾಂಗ್ರೆಸ್‌ ಹೊರಟಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು” ಎಂದರು.

“ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ. ಇಂಥಾ ತಪ್ಪುಗಳನ್ನು ಮತ್ತೆ ಮತ್ತೆ ಮಾಡಬೇಡಿ, ಅನ್ನದಾತರು ದುಡಿದರೆ ದೇಶ ಬದುಕುತ್ತದೆ” ಎಂದು ಹೇಳಿದರು.

Advertisements

“ನಾವು ತಲಾ 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿ ಪ್ರತಿ ಕೆಜಿಗೆ 34 ರೂಪಾಯಿ ಕೊಡ್ತೀವಿ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಆದರೂ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ ಅಕ್ಕಿ ಕೊಡಲಿಲ್ಲ” ಎಂದು ಕಿಡಿಕಾರಿದರು.

“ಬಿಜೆಪಿ ಬಡವರ, ದುಡಿಯುವವರ, ಶ್ರಮಿಕರ ಪರವಾಗಿ ಇದ್ದಿದ್ದರೆ, ಈ ನಾಡಿನ ದಲಿತರು, ಶೂದ್ರರು ಮತ್ತು ಹಿಂದುಳಿದವರ ಪರವಾಗಿ ಇದ್ದಿದ್ದರೆ ಅಕ್ಕಿ ಕೊಡುತ್ತಿತ್ತು. ಮೋದಿಗೆ, ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಹಸಿವು ಮುಕ್ತ ದೇಶ ಬೇಕಾಗಿಲ್ಲ. ಆದ್ದರಿಂದ ನಿಜವಾಗೊ ನಿಮ್ಮ ಪರವಾಗಿ ಇರುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಿ. ನಿಮ್ಮ ಹೃದಯದ ಮಾತು ಕೇಳಿ ಮತ ಚಲಾಯಿಸಿ” ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

“ಹಸಿವಿನ ಜೊತೆಗೆ ದೇಶವನ್ನು ಅನಕ್ಷರತೆ, ಅನಾರೋಗ್ಯ ಮತ್ತು ನಿರುದ್ಯೋಗ ಮುಕ್ತ ಮಾಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ಗುರಿ. ನಮ್ಮ ಹಿಂದಿನ ಸರ್ಕಾರದ ಕಾಲದಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ ವಿದ್ಯಾಸಿರಿ, ಇಂದಿರಾಕ್ಯಾಂಟೀನ್ ಕಾರ್ಯಕ್ರಮಗಳೆಲ್ಲವೂ ಈ ಗುರಿಯೆಡೆಗೆ ಕರ್ನಾಟಕವನ್ನು ಕೊಂಡೊಯ್ಯುವ ಪ್ರಯತ್ನದಲ್ಲಿ ಯಶಸ್ವಿ ಆಗಿದ್ದೇವೆ” ಎಂದರು.

ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಯೇ ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೆ ತಂದೆ. 2013ರ ಬಸವ ಜಯಂತಿಯ ದಿನವೇ ಜಾರಿಗೆ ಬಂದಿರುವ ಅನ್ನಭಾಗ್ಯ ಯೋಜನೆ ಬಸವಣ್ಣನವರ ದಾಸೋಹದಿಂದ ಪ್ರೇರಿತವಾಗಿರುವುದು ಎಂದು ನೆನಪಿಸಿದರು.

ಕಮಿಷನ್ ಮೊತ್ತ ಹೆಚ್ಚಳ

ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿಗೆ ಹೆಚ್ಚಳಗೊಳಿಸಿ ಮುಖ್ಯಮಂತ್ರಿಗಳು ಮಹತ್ವದ ಘೋಷಣೆ ಮಾಡಿದರು. ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X