ಅಲ್ಪಸಂಖ್ಯಾತರ ಯೋಜನೆ ಬಗ್ಗೆ ತಪ್ಪು ಮಾಹಿತಿ ಹರಡಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

  • ಧರ್ಮಾಧಾರಿತ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿದೆ ಎಂದಿದ್ದ ತೇಜಸ್ವಿ ಸೂರ್ಯ
  • ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಎಂದು ಕೇಳಿದ ಕಾಂಗ್ರೆಸ್

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರನ್ನು ಓಲೈಸಲು ‘ಧರ್ಮಾಧಾರಿತ ಯೋಜನೆ’ಗಳನ್ನು ಜಾರಿಗೆ ತರುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಸುಳ್ಳು ಮಾಹಿತಿ ಹರಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಐಟಿ ಸೆಲ್, “ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ? ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ?” ಎಂದು ಕೇಳಿದೆ.

ದಲಿತರ ಏಳಿಗೆಗೂ ಆಕ್ಷೇಪ, ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೂ ಆಕ್ಷೇಪ ಮಾಡುವ ನಿಮ್ಮ ಉದ್ದೇಶವಾದರೂ ಏನು? ದೇವಾಲಯಗಳ ಅರ್ಚಕರ ತಸ್ತಿಕ್ ಹಣವನ್ನೂ ಏರಿಸಿದೆ ನಮ್ಮ ಸರ್ಕಾರ, ಇದಕ್ಕೂ ನಿಮ್ಮ ಆಕ್ಷೇಪ ಇದೆಯೇ? ಎಂದು ಕಾಂಗ್ರೆಸ್, ಬಿಜೆಪಿ ಸಂಸದರನ್ನು ಪ್ರಶ್ನಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾಲಿನ ದರ ಏರಿಕೆಯ ಲಾಭ ರೈತರ ಕೈ ಸೇರುವುದು ಇಷ್ಟವಿಲ್ಲವೇ? ವಿದ್ಯುತ್ ದರ ಏರಿಸಿದ್ದು ಹಿಂದಿನ ಬಿಜೆಪಿ ಸರ್ಕಾರ ಎನ್ನುವುದು ತಿಳಿದಿಲ್ಲವೇ? ಗ್ಯಾಸ್ ಬೆಲೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾತಾಡುವುದಿಲ್ಲವೇಕೆ? ದುಬಾರಿ ಜಿಎಸ್‌ಟಿ ಬಗ್ಗೆ ನೀವು ತುಟಿ ಬಿಚ್ಚುವುದಿಲ್ಲವೇಕೆ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದೆ.

ಜನರ ಹಣವನ್ನು ಜನರಿಗೇ ಕೊಡುವ ಬಗ್ಗೆ ಇಷ್ಟೊಂದು ಅಸಹನೆ ತೋರುವ ಬಿಜೆಪಿಗರ ಪ್ರಕಾರ ಜನರ ಹಣವನ್ನು ಉದ್ಯಮಿಗಳ ಸಾಲ ಮನ್ನಾ ಮಾಡಲು ಬಳಸುವುದು ಅಭಿವೃದ್ಧಿಯೇ? ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಇತ್ತೀಚೆಗೆ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಂದ ದುಡಿಯುವ ಉದ್ದೇಶಕ್ಕಾಗಿ ವಾಹನಗಳನ್ನು ಖರೀದಿಸಲು ₹3 ಲಕ್ಷಗಳನ್ನು ಸಬ್ಸಿಡಿ ನೀಡುವ ಯೋಜನೆಯನ್ನು ಪ್ರಕಟಿಸಿತ್ತು. ಈ ಯೋಜನೆಯು ಮುಸ್ಲಿಮರಿಗಾಗಿ ಇರುವ ಯೋಜನೆ ಎಂದು ಉಲ್ಲೇಖಿಸುತ್ತಾ ‘ಧರ್ಮಾಧಾರಿತ ಯೋಜನೆ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಪ್ಪು ಮಾಹಿತಿ ಹರಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ...

‘ಈ ದಿನʼ ಗ್ರೌಂಡ್‌ ರಿಪೋರ್ಟ್‌ 3 | ವಿಡಿಯೊ ಪ್ರಕರಣ; ಹಲವು ಮಹಿಳೆಯರ ರಾಜಕೀಯ ಮಹತ್ವಾಕಾಂಕ್ಷೆ ಮಣ್ಣುಪಾಲು

ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...