ಮತ ಕಳವು ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

Date:

Advertisements

ರಾಜ್ಯದ ಮಹದೇವಪುರ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಮತ ಕಳವು ನಡೆದಿದೆ ಎಂದು ಆರೋಪಿಸಿದರುವ ಕಾಂಗ್ರೆಸ್ ಮತ ಕಳವು ವಿರುದ್ಧ ಅಭಿಯಾನವನ್ನು ಆರಂಭಿಸಿದೆ. ಇದಕ್ಕಾಗಿ vote chori ಎಂಬ ಹೆಸರಲ್ಲಿ ಒಂದು ವೆಬ್‌ಪೇಜ್ ಅನ್ನು ತೆರೆಯಲಾಗಿದ್ದು, ಜನರು ಬೆಂಬಲ ನೀಡಿ ರಿಜಿಸ್ಟಾರ್ ಮಾಡಿಕೊಳ್ಳುವಂತೆ ಮನವಿ ಮಾಡಿದೆ.

ಈ ಮತ ಕಳವು ಹೊಣೆಯನ್ನು ಚುನಾವಣಾ ಆಯೋಗ ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಡಿಜಿಟಲ್ ಮತದಾರರ ಪಟ್ಟಿ ನೀಡುವಂತೆ ಬೇಡಿಕೆ ಮುಂದಿಟ್ಟಿದೆ. ಯಾರೇ ಆದರೂ ಪೋರ್ಟಲ್ ಲಿಂಕ್ ಅನ್ನು ಕ್ಲಿಕ್ ಮಾಡಿ ಮತದಾನ ಕಳವು ಪುರಾವೆ, ಚುನಾವಣಾ ಆಯೋಗದ ಹೊಣೆಗಾರಿಕೆಗೆ ಒತ್ತಾಯ ಮತ್ತು ಮತಚಲಾವಣೆಯ ವರದಿ’ ಮಾಹಿತಿಗಳನ್ನು ಡೌನ್‌ಲೋಡ್ ಮಾಡಬಹುದು.

ಇದನ್ನು ಓದಿದ್ದೀರಾ? ಕರ್ನಾಟಕದಲ್ಲಿ ಭಾರಿ ಮತ ಕಳವು: ರಾಹುಲ್‌ ಗಾಂಧಿ ಆರೋಪ

ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವಿನ ಒಪ್ಪಂದದ ಮೂಲಕ ಚುನಾವಣೆಯಲ್ಲಿ ದೊಡ್ಡ ಕ್ರಿಮಿನಲ್ ವಂಚನೆ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಯ ವಿಡಿಯೋ ಕೂಡಾ ಈ ವೆಬ್‌ ಪೋರ್ಟಲ್‌ನಲ್ಲಿದೆ. “ಮತವು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಆದರೆ ಅದು ಚುನಾವಣಾ ಆಯೋಗದ ಸಹಭಾಗಿತ್ವದೊಂದಿಗೆ ಬಿಜೆಪಿಯಿಂದ ವ್ಯವಸ್ಥಿತ ದಾಳಿಗೆ ಒಳಗಾಗಿದೆ” ಎಂದು ಹೇಳುವ ಸಂದೇಶವನ್ನು ಸಹ ಪೋರ್ಟಲ್ ಹೊಂದಿದೆ.

“ಬೆಂಗಳೂರು ಸೆಂಟ್ರಲ್‌ನ ಕೇವಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ, 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ನಾವು ಕಂಡುಕೊಂಡಿದ್ದೇವೆ. ಆ ಮತಗಳು ಬಿಜೆಪಿ ಈ ಲೋಕಸಭಾ ಸ್ಥಾನವನ್ನು ಗೆಲ್ಲಲು ಸಹಾಯ ಮಾಡಿದ್ದಾರೆ. 70-100 ಸ್ಥಾನಗಳಲ್ಲಿ ಇದೇ ರೀತಿ ಸಂಭವಿಸುವುದನ್ನು ಒಮ್ಮೆ ಊಹಿಸಿ. ಇದು ಮುಕ್ತ ಚುನಾವಣೆಯನ್ನು ನಾಶಪಡಿಸಿದೆ” ಎಂದು ಹೇಳಿದೆ.

“ಮಹಾರಾಷ್ಟ್ರ ಸೇರಿದಂತೆ ಇತರೆ ಕಡೆಗಳಲ್ಲೂ ಈ ರೀತಿ ನಡೆದಿರುವ ಬಗ್ಗೆ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ಈ ಹಿಂದೆ ಎಚ್ಚರಿಕೆ ನೀಡಿವೆ. ಈಗ ನಮ್ಮ ಬಳಿ ಪುರಾವೆಗಳಿವೆ. ನಾವು ನಮ್ಮ ಎಲ್ಲಾ ಶಕ್ತಿಯಿಂದ ಈ ಮತ ಕಳವು ವಿರುದ್ಧ ಹೋರಾಡುತ್ತೇವೆ. ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಮ್ಮೊಂದಿಗೆ ಸೇರಿ” ಎಂದು ಸಂದೇಶವನ್ನೂ ಪೋರ್ಟಲ್ ಹೊಂದಿದೆ.

ನಾವು ಪೋರ್ಟಲ್‌ನಲ್ಲಿ ನೋಂದಾಯಿಸಿದ ನಂತರ ನಮ್ಮ ಹೆಸರಿನಲ್ಲಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಪ್ರಮಾಣಪತ್ರ ಮತ ಕಳವನ್ನು ವಿರೋಧಿಸುತ್ತಿರುವುದಾಗಿ ಉಲ್ಲೇಖಿಸಿರುತ್ತದೆ. ಜನರಿಗೆ ಕರೆ ಮಾಡಿ ನೋಂದಾಯಿಸುವ ಅವಕಾಶವೂ ಇದೆ. ಪ್ರಮಾಣಪತ್ರವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರ ಸಹಿಯನ್ನು ಹೊಂದಿದೆ. ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಮಾಣಪತ್ರಗಳನ್ನು ಹಂಚಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X