ದ್ವೇಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, “ಇಂದು 21 ಬಿಲಿಯನೇರ್‌ಗಳು ಒಟ್ಟಾಗಿ 70 ಕೋಟಿ ಭಾರತೀಯತರಲ್ಲಿ ಇರುವ ಸಂಪತ್ತಿಗಿಂತ ಅಧಿಕ ಸಂಪತ್ತನ್ನು ಹೊಂದಿದ್ದಾರೆ ಎಂಬ ಬಗ್ಗೆ ಮೋದಿ ನಿಮಗೆ ಹೇಳುವುದಿಲ್ಲ” ಎಂದಿದ್ದಾರೆ.
The Prime Minister will never tell you that:
* More than 40% of the wealth created in the country from 2012 to 2021 has gone to just 1% of the population
* Approximately 64% of the total goods and services tax (GST) in the country comes from the poor, the lower middle…
— Jairam Ramesh (@Jairam_Ramesh) April 23, 2024
ಈ ಬಗ್ಗೆ ತನ್ನ ಎಕ್ಸ್‌ನಲ್ಲಿ ಜೈರಾಮ್ ಪೋಸ್ಟ್ ಮಾಡಿದ್ದು, “2012ರಿಂದ 2021ರವರೆಗೆ ದೇಶದಲ್ಲಿ ಸೃಷ್ಟಿಯಾದ ಶೇಕಡ 40ಕ್ಕಿಂತ ಹೆಚ್ಚು ಸಂಪತ್ತು ಕೇವಲ ಶೇಕಡ 1ರಷ್ಟು ಜನರ ಕೈಯಲ್ಲಿದೆ. ಒಟ್ಟು ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಶೇಕಡ 64ರಷ್ಟು ಪಾಲನ್ನು ದೇಶದ ಬಡವರು, ಕೆಳ ಮಧ್ಯಮ ವರ್ಗ ಮತ್ತು ಮಧ್ಯಮ ವರ್ಗದವರು ತುಂಬುತ್ತಾರೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮುಸ್ಲಿಮರು, ಕಾಂಗ್ರೆಸ್ ಬಗ್ಗೆ ದ್ವೇಷ ಭಾಷಣ: ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐಎಂ ಆಗ್ರಹ
“ಕಳೆದ ಹತ್ತು ವರ್ಷಗಳಲ್ಲಿ, ಹೆಚ್ಚಿನ ಸಾರ್ವಜನಿಕ ಆಸ್ತಿಗಳು ಮತ್ತು ಸಂಪನ್ಮೂಲಗಳನ್ನು ಒಂದು ಅಥವಾ ಎರಡು ಕಂಪನಿಗಳಿಗೆ ಮಾರಾಟ ಮಾಡಲಾಗಿದೆ. ಇದು ಆರ್ಥಿಕತೆಯಲ್ಲಿ ಬೆಳೆಯುತ್ತಿರುವ ಏಕಸ್ವಾಮ್ಯವು ಹಣದುಬ್ಬರಕ್ಕೆ ಕಾರಣವಾಗಿದೆ ಎಂದು ಅರ್ಥಶಾಸ್ತ್ರಜ್ಞರು ಈಗಾಗಲೇ ಹೇಳಿದ್ದಾರೆ. 21 ಬಿಲಿಯನೇರ್‌ಗಳು ಒಟ್ಟಾಗಿ 70 ಕೋಟಿಗಿಂತ ಅಧಿಕ ಭಾರತೀಯರಲ್ಲಿರುವ ಸಂಪತ್ತನ್ನು ಹೊಂಡಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಆರೋಪಿಸಿದರು.
ಇನ್ನು “ಭಾರತಕ್ಕೆ ತ್ವರಿತ ಆರ್ಥಿಕ ಬೆಳವಣಿಗೆಯ ಅಗತ್ಯವಿದೆ. ಹಾಗೆಯೇ ಹೆಚ್ಚು ಅಂತರ್ಗತ ಆರ್ಥಿಕ ಬೆಳವಣಿಗೆಯ ಅಗತ್ಯವಿದೆ ಮತ್ತು ಹೆಚ್ಚು ಸುಸ್ಥಿರ ಪರಿಸರ ಅಭಿವೃದ್ಧಿಯ ಅಗತ್ಯವಿದೆ. ಭಾರತ ಮಾತ್ರ ಈ ಮೂರನ್ನೂ ಮಾಡಬಲ್ಲದು ಮತ್ತು ಮಾಡಲಿದೆ” ಎಂದು ಜೈರಾಮ್ ರಮೇಶ್ ಅಭಿಪ್ರಾಯಿಸಿದರು.
ಇದನ್ನು ಓದಿದ್ದೀರಾ? ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ
ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ. ನಿಮ್ಮ ಮಂಗಳಸೂತ್ರವನ್ನು ಬಿಡಲ್ಲ” ಎಂದು ಹೇಳಿದ್ದರು. ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ಮೋದಿ ಆರೋಪಿಸಿದರು.
ಪ್ರಧಾನಿ ಮೋದಿ ಅವರ ಈ ದ್ವೇಷ ಭಾಷಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಮಂದಿ ಚುನಾವಣಾ ಆಯೋಗಕ್ಕೆ ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಆದರೆ ಚುನಾವಣಾ ಆಯೋಗ ಮಾತ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲು ನಿರಾಕರಿಸಿದೆ. ಕಾಂಗ್ರೆಸ್ ಮಾತ್ರವಲ್ಲದೆ ಇತರೆ ವಿಪಕ್ಷಗಳು ಕೂಡಾ ಕಾಂಗ್ರೆಸ್ ಮತ್ತು ಮುಸ್ಲಿಮರ ವಿರುದ್ಧದ ಪ್ರಧಾನಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದೆ.