ಪಿಣರಾಯಿ ವಿಜಯನ್ ಮತ್ತೆ ಕೇರಳ ಸಿಎಂ ಆಗುವುದು ಖಚಿತ: ಹಿರಿಯ ಕಾಂಗ್ರೆಸ್ ನಾಯಕ ಅಯ್ಯರ್!

Date:

ಕೇರಳದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಾರಿ ಮತ್ತೆ ಎಲ್‌ಡಿಎಫ್ ಅಧಿಕಾರ ಪಡೆಯಬಹುದೇ ಅಥವಾ ಯುಡಿಎಫ್ ಗೆಲ್ಲಬಹುದೇ ಎಂಬ ಕಾತುರವಿದೆ. ಸಿಎಂ ಗದ್ದುಗೆಯನ್ನು ಎಲ್‌ಡಿಎಫ್‌ನಿಂದ ಕಸಿದುಕೊಳ್ಳುವ ವಿಶ್ವಾಸವನ್ನು ಯುಡಿಎಫ್‌ ಹೊಂದಿದೆ. ಈ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ನೀಡಿರುವ ಹೇಳಿಕೆಯು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

- Advertisement -

ಕೇರಳ ರಾಜ್ಯ ಯೋಜನಾ ಮಂಡಳಿಯು ಭಾನುವಾರ ತಿರುವನಂತಪುರದಲ್ಲಿ ಆಯೋಜಿಸಿದ್ದ ‘ವಿಷನ್ 2031: ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ಅಂತಾರಾಷ್ಟ್ರೀಯ ಸಮ್ಮೇಳನ’ದಲ್ಲಿ ಮಾತನಾಡಿದ ಅಯ್ಯರ್, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಹಾಡಿಹೊಗಳಿದ್ದಾರೆ. “ಪಿಣರಾಯಿ ವಿಜಯನ್ ಮತ್ತೆ ಕೇರಳ ಮುಖ್ಯಮಂತ್ರಿಯಾಗುವುದು ಖಚಿತ” ಎಂದೂ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಕೇರಳದ ಅಸಲಿ ಕಥೆಯೇ ಬೇರೆ : ಪಿಣರಾಯಿ ವಿಜಯನ್‌

ಪಂಚಾಯತ್ ರಾಜ್‌ನಲ್ಲಿ ಕೇರಳ ಭಾರತದ ನಾಯಕ ಎಂದಿರುವ ಅಯ್ಯರ್, ಈ ಕಾರ್ಯಕ್ರಮದಲ್ಲಿ ಇತರೆ ಕಾಂಗ್ರೆಸ್ ನಾಯಕರ ಅನುಪಸ್ಥಿತಿಯನ್ನು ಟೀಕಿಸಿದ್ದಾರೆ. “ದೇಶದಲ್ಲಿ ಪಂಚಾಯತಿ ರಾಜ್‌ಗೆ ಯಾವುದೇ ಪ್ರತಿಪಾದಕರು ಉಳಿದಿಲ್ಲ ಎಂದು ನನಗೆ ಭಯವಾಗಿದೆ. ಆದ್ದರಿಂದ, ಪಿಣರಾಯಿ ವಿಜಯನ್, ನಾನು ನಿಮ್ಮ ಪಾದಗಳಿಗೆ ಬಿದ್ದು ಕೇಳುತ್ತೇನೆ. ದಯವಿಟ್ಟು, ಸರ್, ಕಾಂಗ್ರೆಸ್ ಬೀಳಿಸಿದ ಲಾಠಿಯನ್ನು ಎತ್ತಿಕೊಳ್ಳಿ” ಎಂದು ಕಾಂಗ್ರೆಸ್‌ ಅನ್ನು ಅಯ್ಯರ್ ಟೀಕಿಸಿದ್ದಾರೆ.

“ಪಂಚಾಯತಿ ರಾಜ್‌ನಲ್ಲಿ ಕೇರಳ ಭಾರತದ ನಾಯಕ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ನಿರೀಕ್ಷೆಗಳನ್ನು ನೋಡಿದಾಗ ರಾಜ್ಯವು ಬೇರೆ ರಾಜ್ಯಗಳಿಗಿಂತ ಹೆಚ್ಚಿನದನ್ನು ಸಾಧಿಸುತ್ತಿದೆ. ಬಡವರು ರಾಷ್ಟ್ರದ ಅಭಿವೃದ್ಧಿಯಲ್ಲಿ ಧ್ವನಿ ಹೊಂದಿರಬೇಕು ಎಂಬ ಮಹಾತ್ಮ ಗಾಂಧೀಜಿಯವರ ನಿರ್ದೇಶನದಲ್ಲಿ ಪ್ರಗತಿ ಸಾಧಿಸಿದ ಏಕೈಕ ರಾಜ್ಯವೆಂದರೆ ಮಾರ್ಕ್ಸ್‌ವಾದಿ-ಲೆನಿನ್‌ವಾದ ಪಕ್ಷಗಳು ಆಳುವ ಕೇರಳ” ಎಂದೂ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕೋಮುವಾದ ಹರಡುವ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಪಿಣರಾಯಿ ವಿಜಯನ್ ಆಕ್ರೋಶ

ಕಾಂಗ್ರೆಸ್ ನಾಯಕರ ಹೇಳಿಕೆ ರಾಜಕೀಯವಾಗಿ ತೀವ್ರ ಚರ್ಚೆಗೆ ಒಳಗಾಗುತ್ತಿದ್ದಂತೆ, “ಕಳೆದ ಕೆಲವು ವರ್ಷಗಳಿಂದ ಅಯ್ಯರ್ ಅವರಿಗೆ ಕಾಂಗ್ರೆಸ್ ಜತೆ ಯಾವುದೇ ಸಂಬಂಧ ಹೊಂದಿಲ್ಲ” ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಅಯ್ಯರ್ ಅವರು ಸಂಪೂರ್ಣವಾಗಿ ತಮ್ಮ ವೈಯಕ್ತಿಕ ವಿಚಾರವನ್ನು ಮಾತನಾಡುವುದು, ಬರೆಯುವುದು. ಅವರು ಈಗ ಕಾಂಗ್ರೆಸ್‌ನೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ” ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ, “ಇದು ಚುನಾವಣಾ ಪೂರ್ವ ಪ್ರಚಾರ ಕಾರ್ಯಕ್ರಮ. ಅಯ್ಯರ್ ಮತ್ತು ಅಮರ್ತ್ಯ ಸೇನ್ ಅವರಂತಹ ಇತರ ಗಣ್ಯ ವ್ಯಕ್ತಿಗಳನ್ನು ಈ ಕಾರ್ಯಕ್ರಮದಿಂದ ದೂರವಿರಬೇಕು” ಎಂದು ಒತ್ತಾಯಿಸಿದ್ದಾರೆ.

ಕೇರಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ವಿಜಯನ್ ಅವರನ್ನು ಕಾಂಗ್ರೆಸ್ ನಾಯಕರೇ ಹೊಗಳಿರುವುದು, ವಿಜಯನ್ ಅಧಿಕಾರವನ್ನು ಉಳಿಸಿಕೊಳ್ಳುತ್ತಾರೆ ಎಂದು ಹೇಳಿರುವುದು ಕಾಂಗ್ರೆಸ್‌ಗೆ ಮುಜುಗರ ಉಂಟುಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...