ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿ ಸುಟ್ಟ ಈಶ್ವರಪ್ಪ ವಿರುದ್ಧ ʼಕೈʼ ನಾಯಕರು ಕಿಡಿ

Date:

Advertisements

ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿರುವ ಬಿಜೆಪಿ ಶಾಸಕ ಕೆ ಎಸ್‌ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ನಾಯಕರು ಕಿಡಿ ಕಾರಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುವುದು ಬಿಜೆಪಿ ಕೆಲಸ” ಎಂದಿದ್ದಾರೆ.

“ಪ್ರಣಾಳಿಕೆ ಇಷ್ಟ ಇರಲಿ, ಬಿಡಲಿ ಅದನ್ನು ಸುಡಬಾರದು. ಜನರಿಗೆ ಕೊಟ್ಟ ಗ್ಯಾರಂಟಿ ಯೋಜನೆಗಳನ್ನ ಬಿಜೆಪಿ ನಾಯಕರು ಸುಟ್ಟು ಹಾಕಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ” ಎಂದು ಟೀಕಿಸಿದ್ದಾರೆ.

Advertisements

“ಪ್ರಜಾಪ್ರಭುತ್ವದಲ್ಲಿ ಸ್ವಾತಂತ್ರ್ಯ, ಸಮಾನತೆ ಮತ್ತು ಸಹಿಷ್ಣುತೆ ಪ್ರಮುಖವಾಗಿದೆ. ಈಶ್ವರಪ್ಪ ಕೃತ್ಯಕ್ಕೆ ತಕ್ಕ ಉತ್ತರವನ್ನು ಕೆಪಿಸಿಸಿ ಅಧ್ಯಕ್ಷರು ಮತ್ತು ಪ್ರಣಾಳಿಕೆ ಸಮಿತಿಯ ಪರಮೇಶ್ವರ ಹಾಗೂ ತಂಡ ಉತ್ತರಿಸಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಜನರ ತೀರ್ಪು ಸಿದ್ಧವಾಗಿದೆ: ಹರಿಪ್ರಸಾದ್‌

“ರಾಜಕೀಯ ಅಪ್ರಬುದ್ಧತೆ, ಅವಿವೇಕಿತನದಿಂದ ಪಕ್ಷದಿಂದಲೇ ಹೊರದಬ್ಬಲ್ಪಟ್ಟಿರುವ ಈಶ್ವರಪ್ಪ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸುಟ್ಟಿದ್ದಾರೆ. ಸಂತೋಷ್ ಪಾಟೀಲ್ ಕುಟುಂಬಕ್ಕೆ ಬೆಂಕಿ ಇಟ್ಟು ಬಿ ರಿಪೋರ್ಟ್ ತೆಗೆದುಕೊಂಡಷ್ಟು ಸುಲಭವಲ್ಲ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಎದುರಿಸುವುದು. ಜನರ ತೀರ್ಪು ಸಿದ್ಧವಾಗಿದೆ, ಎದುರಿಸಲು ಸಿದ್ಧತೆ ಮಾಡಿಕೊಳ್ಳಿ” ಎಂದು ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್‌ ಟ್ವೀಟ್‌ ಮಾಡಿ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X