ರಾಜಭವನ ಚಲೋ ಮೂಲಕ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್‌ ಮುಖಂಡರು

Date:

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಖಾಸಗಿ ದೂರು ಆಧರಿಸಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಡಿ ಕೆ ಶಿವಕುಮಾರ್‌ ನೇತೃತ್ವದಲ್ಲಿ ರಾಜಭವನ ಚಲೋ ನಡೆಯಿತು. ವಿಧಾನಸೌಧದ ಬಳಿಯಿಂದ ಬೆಳಿಗ್ಗೆ10.30ಕ್ಕೆ ರಾಜಭವನಕ್ಕೆ ಹೊರಟ ಪಾದಯಾತ್ರೆಯಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಮತ್ತು ಮಾಜಿ ಸಂಸದ ವೀರಪ್ಪ ಮೊಯ್ಲಿ ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರು ಭಾಗವಹಿಸಿದ್ದರು. ರಾಜ್ಯಪಾಲ ಥಾವರ್‌ ಚಂದ್‌ ಹ್ಲೋಟ್‌ ಅವರನ್ನು ಕಾಂಗ್ರೆಸ್‌ ನಾಯಕರು ಭೇಟಿಯಾದರು.

“ಬೇರೆಯವರ ದೂರಿನ ಆಧಾರದ ಮೇಲೆ ನಾನು ತನಿಖೆಗೆ ಅನುಮತಿ ನೀಡಿದ್ದೇನೆ. ನಾನಾಗಿಯೇ ನೀಡಿಲ್ಲ” ಎಂದು ಕಾಂಗ್ರೆಸ್‌ ನಾಯಕರಿಗೆ ರಾಜ್ಯಪಾಲರು ಸಮರ್ಥನೆ ನೀಡಿದ್ದಾರೆ. ಬಾಕಿ ಉಳಿದ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಪ್ರಜಾತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ನಾಯಕರು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧ ತನಿಖೆಗೆ, ಕ್ರಮಕ್ಕೆ ಅನುಮತಿ ನೀಡದ ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ನಂತರ ರಾಜಭವನಕ್ಕೆ ಪಾದಯಾತ್ರೆ ನಡೆಸಿದರು.

- Advertisement -

ಇನ್ನೊಂದೆಡೆ ಹೈಕೋರ್ಟ್‌ನಲ್ಲಿ ಸಿ ಎಂ ಸಿದ್ದರಾಮಯ್ಯ ಅವರ ಅರ್ಜಿಯ ವಿಚಾರಣೆ ಮುಂದುವರಿದಿದೆ. ರಾಜ್ಯಪಾಲರ ಪರವಾಗಿ ಹಿರಿಯ ನ್ಯಾಯವಾದಿ ತುಷಾರ್‌ ಮೆಹ್ತಾ ವಾದ ಮಂಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...