ಬಿಜೆಪಿಗೆ ಕಾಂಗ್ರೆಸ್‌ ಮುಖಂಡರು; ಗುಜರಾತ್ ಬಿಜೆಪಿಯಲ್ಲಿ ಬಂಡಾಯ

Date:

Advertisements

ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಗುಜರಾತ್ ಬಿಜೆಪಿಗೆ ಕಾಂಗ್ರೆಸ್‌ನ ಕೆಲವು ನಾಯಕರು ಸೇರಿದ್ದಾರೆ. ಇದರಿಂದಾಗಿ, ಸ್ಥಳೀಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ಉಲ್ಬಣಗೊಂಡಿವೆ. ಅಂತಹ ಬಂಡಾಯದಿಂದಲೇ ಗುಜರಾತ್‌ನ ಮೂರು ಅವಧಿಯ ಬಿಜೆಪಿ ಶಾಸಕ ಕೇತನ್ ಇನಾಮದಾರ್ ಅವರು ಮಂಗಳವಾರ ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.

ಇನಾಮ್‌ದಾರ್ ಅವರು ತಮ್ಮ ರಾಜೀನಾಮೆ ನಿರ್ಧಾರಕ್ಕೆ “ನಾನು ನನ್ನ ಒಳದನಿ ಏನು ಹೇಳುತ್ತದೋ ಅದನ್ನು ಮಾಡಿದ್ದೇನೆ. ಆತ್ಮಗೌರವಕ್ಕಿಂತ ಯಾವುದೂ ದೊಡ್ಡದಲ್ಲ” ಕಾರಣ ನೀಡಿದ್ದಾರೆ. ಸ್ವಾಭಿಮಾನದ ಬಗ್ಗೆ ಒತ್ತಿ ಹೇಳಿದ್ದಾರೆ. ಅದಾಗ್ಯೂ, ಪಕ್ಷದ ರಾಜ್ಯ ಮುಖ್ಯಸ್ಥರು ಮನವೊಲಿಸಿದ ನಂತರ, ಅವರು ಕೆಲವೇ ಗಂಟೆಗಳಲ್ಲಿ ತಮ್ಮ ರಾಜೀನಾಮೆಯನ್ನು ಹಿಂಪಡೆದ್ದಾರೆ.

ಬಿಜೆಪಿಗೆ ಕಾಂಗ್ರೆಸ್ ನಾಯಕರು ಮತ್ತು ಇತರ ಪಕ್ಷದ ಸದಸ್ಯರು ನಿರಂತರವಾಗಿ ವಲಸೆ ಬರುತ್ತಿದ್ದಾರೆಂದು ಹತಾಶೆಗೊಂಡು ಇನಾಮದಾರ್ ರಾಜೀನಾಮೆ ನೀಡಿದ್ದರು. ಅವರನ್ನು ಭೇಟಿ ಮಾಡಿದ್ದ ವಡೋದರಾ ಜಿಲ್ಲಾ ಉಸ್ತುವಾರಿ ಸಚಿವ ಅವರನ್ನು ಗಾಂಧಿನಗರಕ್ಕೆ ಕರೆದೊಯ್ದರು. ಅಲ್ಲಿ, ಅವರು ರಾಜ್ಯ ಪಕ್ಷದ ಮುಖ್ಯಸ್ಥ ಸಿಆರ್ ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ಬಳಿಕ, ರಾಜೀನಾಮೆ ಹಿಂಪಡೆದರು.

Advertisements

“ತಮ್ಮ ಸಮಸ್ಯೆ ಮತ್ತು ಕಳವಳವನ್ನು ಸಿಆರ್ ಪಾಟೀಲ್ ಜೊತೆ ಹಂಚಿಕೊಂಡಿದ್ದೇನೆ. ನಾನು ಆತ್ಮಾವಲೋಕನದಲ್ಲಿ ತೊಡಗಿದೆ. ನಾನು ಹೃದಯದಿಂದ ಮಾತನಾಡಿದೆ. ನಿಷ್ಠಾವಂತ ಪಕ್ಷದ ಕಾರ್ಯಕರ್ತರ ಸಮರ್ಪಣೆಯನ್ನು ಗೌರವಿಸುವುದು ಚರ್ಚೆಯ ಮುಖ್ಯ ವಿಷಯವಾಗಿತ್ತು. ಪ್ರತಿಯೊಬ್ಬ ವ್ಯಕ್ತಿಯು ಕೆಲಸ ಮಾಡಲು ತನ್ನದೇ ಆದ ವಿಧಾನವನ್ನು ಹೊಂದಿದ್ದಾನೆ. ಯಾರ ಮೇಲೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ನಾನು ನನ್ನ ರಾಜೀನಾಮೆಯನ್ನು ಹಿಂಪಡೆಯುತ್ತೇನೆ” ಎಂದು ಇನಾಮದಾರ್ ಹೇಳಿದರು.

ಇನಾಮದಾರ್ ಅವರು ರಾಜೀನಾಮೆ ಸಲ್ಲಿಸುವುದು, ಬಳಿಕ ರಾಜೀನಾಮೆಯನ್ನು ಹಿಂಪಡೆಯುವಲ್ಲಿ ತಮ್ಮದೇ ದಾಖಲೆ ಹೊಂದಿದ್ದಾರೆ. 2020ರ ಜನವರಿಯಲ್ಲಿಯೂ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಸ್ಪೀಕರ್ ಅದನ್ನು ಅಂಗೀಕರಿಸಿರಲಿಲ್ಲ.

ಹಿಂದೆ ಸರಿದ ಕಾಂಗ್ರೆಸ್ ಅಭ್ಯರ್ಥಿ 

ಅಹಮದಾಬಾದ್ ಪೂರ್ವ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೋಹನ್ ಗುಪ್ತಾ ಅವರು ತಮ್ಮ ತಂದೆಯ ಗಂಭೀರ ಅನಾರೋಗ್ಯದ ಕಾರಣ ನೀಡಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಗುಪ್ತಾ ಅವರು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾಗಿದ್ದು, ಮಾರ್ಚ್ 12 ರಂದು ಪಕ್ಷವು ಘೋಷಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X