ಸಚಿವ ಸಂಪುಟ | ಮಂತ್ರಿಗಿರಿಯಿಂದ ದೂರ ಉಳಿದ ಕಾಂಗ್ರೆಸ್ ನಾಯಕರಿವರು

Date:

Advertisements

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ 34 ಮಂದಿ ಸಚಿವರುಳ್ಳ ಪೂರ್ಣ ಸಚಿವ ಸಂಪುಟ ರಚನೆಯಾಗಿದೆ. ಶನಿವಾರ (ಮೇ 27) 24 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಂತ್ರಿಗಿರಿ ಸಿಕ್ಕಿಲ್ಲವೆಂದು ಕೆಲವರು ಅಸಮಾಧಾನಗೊಂಡಿದ್ದಾರೆ ಎಂದೂ ತಿಳಿದುಬಂದಿದೆ. ಈ ನಡುವೆ, ತಮ್ಮ ಕ್ಷೇತ್ರದ ಶಾಸಕರಿಗೆ ಸಚಿವ ಸ್ಥಾನ ನೀಡಿಲ್ಲವೆಂದು ಹಲವು ಕ್ಷೇತ್ರಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಹಲವಾರು ಹಿರಿಯ ನಾಯಕರನ್ನು ಸಂಪುಟದಲ್ಲಿ ದೂರವಿಟ್ಟು, ಯುವ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಅವರಲ್ಲಿ ಎಂಟು ಮಂದಿ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಹೊಸ ಸರ್ಕಾರದಲ್ಲಿ ಸಂಪುಟದಿಂದ ಪ್ರಮುಖ ನಾಯಕರು ಮತ್ತು ಹಿರಿಯರು ದೂರ ಉಳಿದಿದ್ದಾರೆ. ಅವರಲ್ಲಿ, ಐದು ಬಾರಿ ಶಾಸಕರಾಗಿ, ಎರಡು ಬಾರಿ ಮಂತ್ರಿಯಾಗಿದ್ದ ಆರ್‌.ವಿ ದೇಶಪಾಂಡೆ… ಮೂರು ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ, ಒಮ್ಮೆ ಸಚಿವರಾಗಿದ್ದ ಪ್ರಕಾಶ್ ಹುಕ್ಕೇರಿ… ನಾಲ್ಕು ಬಾರಿ ಶಾಸಕರಾಗಿ, ಒಮ್ಮೆ ಎಂಎಲ್‌ಸಿಯಾಗಿ, ಒಮ್ಮೆ ಉಪಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ ಸವದಿ… ಮೂರು ಬಾರಿ ಶಾಸಕರಾಗಿ, ಒಮ್ಮೆ ಸಚಿವರಾಗಿದ್ದ ಟಿ.ಬಿ ಜಯಚಂದ್ರ… ಒಮ್ಮೆಯೂ ಶಾಸಕರಾಗಿ ಆಯ್ಕೆಯಾಗದಿದ್ದರೂ, ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ, ಒಮ್ಮೆ ಎಂಎಲ್‌ಸಿಯಾಗಿ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾಗಿರುವ ಬಿ.ಕೆ ಹರಿಪ್ರಸಾದ್ ಮಂತ್ರಿಗಿರಿಯ ಅವಕಾಶ ಕಳೆದುಕೊಂಡಿದ್ದಾರೆ.

Advertisements

ಜೊತೆಗೆ, ರಾಯರೆಡ್ಡಿ, ತನ್ವೀರ್ ಸೇಠ್, ಸಲೀಮ್ ಅಹ್ಮದ್, ಕೃಷ್ಣಪ್ಪ, ಅಜಯ್ ಸಿಂಗ್, ಅಶೋಕ್ ಪಟ್ಟಣ್, ಗಣೇಶ್ ಹುಕ್ಕೇರಿ, ರಿಜ್ವಾನ್ ಅರ್ಷದ್, ವಿನಯ್ ಕುಲಕರ್ಣಿ, ಎನ್‌ಎ ಹ್ಯಾರಿಸ್ ಮತ್ತು ಪುಟ್ಟರಂಗಶೆಟ್ಟಿ ಅವರೂ ಮಂತ್ರಿಗಿರಿಯಿಂದ ವಂಚಿತರಾಗಿದ್ದಾರೆ.

ಸದ್ಯ, ಇವರಲ್ಲಿ ಹಲವರು ಸಚಿವ ಸ್ಥಾನ ಸಿಗದಿದ್ದರೂ ಸಮಾಧಾನದಿಂದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಬಿ.ಕೆ ಹರಿಪ್ರಸಾದ್‌ ಅವರೊಬ್ಬರು ಮಾತ್ರ ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ. ಅವರು ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X