ಪ್ರಿಯಾಂಕಾ ಗಾಂಧಿ ಬಗ್ಗೆ ಬಿಜೆಪಿ ನಾಯಕ ಬಿಧುರಿ ಹೇಳಿಕೆ; ದೂರು ದಾಖಲಿಸಿದ ಕಾಂಗ್ರೆಸ್

Date:

Advertisements

ಲಕ್ನೋದಲ್ಲಿ ಕಾರ್ಪೋರೇಟರ್‌ ಸೇರಿದಂತೆ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ನಾಯಕ ರಮೇಶ್ ಬಿಧುರಿ ವಿರುದ್ಧ ದೂರು ದಾಖಲಿಸಿದ್ದಾರೆ.

“ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿ ನಿರ್ಮಿಸಲಾಗುವುದು” ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ರಮೇಶ್ ಬಿಧುರಿ ವಿವಾದದಲ್ಲಿ ಸಿಲುಕಿದ್ದಾರೆ. ಅದಾದ ಬಳಿಕ ಮಾಧ್ಯಮಗಳ ಮುಂದೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡು ಇನ್ನಷ್ಟು ಟೀಕೆಗೆ ಒಳಗಾಗಿದ್ದಾರೆ.

ಇದನ್ನು ಓದಿದ್ದೀರಾ? ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ನುಣುಪಾದ ರಸ್ತೆ ನಿರ್ಮಾಣ : ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಖಂಡನೆ

Advertisements

ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್‌ನ ಮಾಳವೀಯ ನಗರ ವಾರ್ಡ್ 21 ಅನ್ನು ಪ್ರತಿನಿಧಿಸುವ ಕಾಂಗ್ರೆಸ್ ನಾಯಕಿ ಮಮತಾ ಚೌಧರಿ ಅವರು ಲಿಖಿತ ದೂರು ಸಲ್ಲಿಸಿದ್ದು, ಬಿಧುರಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಬಜಾರ್ ಖಾಲಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ನೀಡಿದ ದೂರು ಪತ್ರದಲ್ಲಿ, “ಬಿಧುರಿ ಹೇಳಿಕೆಯು ಸಾರ್ವಜನಿಕ ವ್ಯಕ್ತಿಯಾಗಿರುವ ಪ್ರಿಯಾಂಕಾ ಗಾಂಧಿಗೆ ಅಗೌರವಿಸಿದಂತೆ ಮಮತ್ತು ಮಾನನಷ್ಟ ಮಾಡಿದಂತಿದೆ. ಮಹಿಳೆಯ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿರುವ ರಮೇಶ್ ಬಿಧುರಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಔಪಚಾರಿಕ ದೂರಿನಲ್ಲಿ ಬರೆದಿದ್ದಾರೆ.

ಇದನ್ನು ಓದಿದ್ದೀರಾ? ಬಿಧುರಿ ‘ಮಹಿಳಾ ವಿರೋಧಿ’ – ಬಿಜೆಪಿ ನಾಯಕನ ನಿವಾಸದ ಗೇಟ್‌ ಮೇಲೆ ಬರೆದ ಪ್ರತಿಭಟನಾಕಾರರು

ಇನ್ನು ದೆಹಲಿ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬಿಜೆಪಿ ನಾಯಕ ರಮೇಶ್ ಬಿಧುರಿ ನಿವಾಸದ ಹೊರಗಡೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಬಿಧುರಿ ನಿವಾಸದ ಗೇಟ್‌ ಮೇಲೆ ಕಪ್ಪು ಪೇಂಟ್‌ ಬಳಸಿ ‘ಮಹಿಳಾ ವಿರೋಧಿ’ ಎಂದು ಬರೆದಿದ್ದಾರೆ. ಒಂದು ಹೆಣ್ಣಿನ ದೇಹದ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ಖಂಡನಾರ್ಹ ಎಂದು ಯುವ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X