ಕೇವಲ 11 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಕಾಂಗ್ರೆಸ್; ಲೋಕಸಭಾ ಚುನಾವಣೆ ಕತೆಯೇನು?

Date:

Advertisements

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 223 ಸ್ಥಾನಗಳಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ಕೇವಲ 11 ಕ್ಷೇತ್ರಗಳಲ್ಲಿ ಮಾತ್ರ ಠೇವಣಿ ಕಳೆದುಕೊಂಡಿದೆ. 224 ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದ ಬಿಜೆಪಿ 31 ಮತ್ತು ಹಾಗೂ ಜೆಡಿಎಸ್ ಸ್ಪರ್ಧಿಸಿದ್ದ 209ರ ಪೈಕಿ 70 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿವೆ ಎಂದು ಚುನಾವಣಾ ಆಯೋಗ ಹೇಳಿದೆ.

ಆಯೋಗದ ಅಂಕಿಅಂಶಗಳ ಪ್ರಕಾರ, ಠೇವಣಿ ಕಳೆದುಕೊಂಡ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಆರನೇ ಒಂದು ಭಾಗದಷ್ಟು ಮತಗಳನ್ನು ಗಳಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ 93 ಪಕ್ಷಗಳಿಂದ ಸ್ಪರ್ಧಿಸಿದ್ದ 2,615 ಅಭ್ಯರ್ಥಿಗಳ ಪೈಕಿ 2,111 ಮಂದಿ ಠೇವಣಿ ಕಳೆದುಕೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಎಎಪಿ, ಬಿಎಸ್‌ಪಿ, ಎಐಎಂಐಎಂ ಮತ್ತು ಎನ್‌ಸಿಪಿ ಸೇರಿದಂತೆ ಕರ್ನಾಟಕದಲ್ಲಿ ನೆಲೆಯನ್ನು ಹೊಂದಿರದ ಪಕ್ಷಗಳ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಡುವೆ ತ್ರಿಕೋನ ಹಣಾಹಣಿ ನಡೆದಿದ್ದರೆ, ಮಧ್ಯ ಮತ್ತು ಉತ್ತರ ಕರ್ನಾಟಕದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಹಣಾಹಣಿ ನಡೆದಿದೆ. ಕಾಂಗ್ರೆಸ್ ಅತ್ಯಂತ ಕಡಿಮೆ ಸಂಖ್ಯೆಯ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಜೊತೆಗೆ, 135 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 224 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿ, 66 ಕ್ಷೇತ್ರಗಳಲ್ಲಿ ಗೆದ್ದಿರುವ ಬಿಜೆಪಿ 31 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿದೆ. ಹಳೇ ಮೈಸೂರು ಭಾಗದಲ್ಲಿಯೂ ಹೀನಾಯ ಸೋಲುಕಂಡಿರುವ ಜೆಡಿಎಸ್ 209 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 19 ಸ್ಥಾನಗಳನ್ನು ಮಾತ್ರವೇ ಗೆದ್ದಿದ್ದು, ಬರೋಬ್ಬರಿ 70 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.

Advertisements

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿರುವ ಆಮ್ ಆದ್ಮಿ ಪಕ್ಷ (ಎಎಪಿ) 209 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಎಲ್ಲ ಕ್ಷೇತ್ರಗಳಲ್ಲೂ ಠೇವಣಿ ಕಳೆದುಕೊಂಡಿದೆ. 133 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಎಸ್‌ಪಿ ಒಂದು ಕ್ಷೇತ್ರವನ್ನು ಹೊರತುಪಡಿಸಿ, ಉಳಿದೆಲ್ಲ ಕ್ಷೇತ್ರಗಳಲ್ಲೂ ಠೇವಣಿಯನ್ನು ಚುನಾವಣಾ ಆಯೋಗದ ವಶಕ್ಕೆ ನೀಡಿದೆ. ಬಿಎಸ್‌ಪಿಯಿಂದ ಪುಲಿಕೇಶಿನಗರದಲ್ಲಿ ಸ್ಪರ್ಧಿಸಿದ್ದ ಆರ್ ಅಖಂಡ ಶ್ರೀನಿವಾಸ್ ಮೂರ್ತಿ ಠೇವಣಿ ಉಳಿಸಿಕೊಂಡಿದ್ದಾರೆ.

ಇನ್ನು, 46 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) 42 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ. ಪಕ್ಷದ ನೇತಾರ ಗಾಲಿ ಜನಾರ್ದನ ರೆಡ್ಡಿ ಗಂಗಾವತಿಯಲ್ಲಿ ಗೆಲುವು ಸಾಧಿಸಿದ್ದಾರೆ. 16 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಸ್‌ಡಿಪಿಐ ಅಷ್ಟೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.

ಈ ವರದಿ ಓದಿದ್ದೀರಾ?: ಅರಣ್ಯ ಸಂರಕ್ಷಣಾ ತಿದ್ದುಪಡಿ ಮಸೂದೆ – ಕೇಂದ್ರದ ಉದ್ದೇಶವೇನು? ವಿವಾದ ಯಾಕೆ?

ಕಾಂಗ್ರೆಸ್‌ ಇದೇ ರೀತಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡರೆ, 2024ರ ಲೋಕಸಭೆ ಚುನಾವಣೆಯಲ್ಲಿ ಕೈ ಪಡೆ ಮೇಲುಗೈ ಸಾಧಿಸಬಹುದು ಎಂದು ರಾಜಕೀಯ ತಜ್ಞರು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಇನ್ನೂ ದೊಡ್ಡ ಸಮಸ್ಯೆಗಳಿಂದ ಮತದಾರರು ಬೇಸತ್ತಿದ್ದಾರೆ. ಆ ಸಮಸ್ಯೆಗಳನ್ನು ಮುಂದಿಟ್ಟುಕೊಂಡು, ಕಾಂಗ್ರೆಸ್‌ ಯೋಜನೆಗಳು ಮತ್ತು ತಂತ್ರಗಳನ್ನು ಹೆಣೆದರೆ, ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಮಣಿಸಬಹುದು ಎಂದು ಹೇಳುತ್ತಾರೆ. ಆದರೆ, ಅದು ಅಸಂಭವವೂ ಆಗಬಹುದು. ಏಕೆಂದರೆ, ಈ ಹಿಂದೆ ರಾಜ್ಯದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ವಿಭಿನ್ನ ಪಕ್ಷಗಳಿಗೆ ಜನರು ಮತ ಚಲಾಯಿಸಿದ್ದಾರೆ.

ಆದರೂ, ಈ ಬಾರಿ ಕಾಂಗ್ರೆಸ್‌ 26 ಪಕ್ಷಗಳ ಸಖ್ಯದೊಂದಿಗೆ ಒಕ್ಕೂಟ (ಇಂಡಿಯಾ) ರಚಿಸಿಕೊಂಡಿದೆ. ಜಾತ್ಯತೀತ ಮತಗಳು ವಿಭಜನೆಯಾಗದಂತೆ ತಂತ್ರ ಹೆಣೆಯಲು ಯತ್ನಿಸುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೂ ತಲಾ ಒಂದನ್ನು ಮಾತ್ರವೇ ಗೆದ್ದಿದ್ದವು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಶ್‌ ಗೆದ್ದಿದ್ದರು. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X