ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

Date:

“ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು ಉದ್ವಿಗ್ನತೆ ಹುಟ್ಟಿಸಿ ತನ್ನ ಹತಾಶೆಯನ್ನು ತೋರಿಸುತ್ತಿರುವ ಬಿಜೆಪಿಗೆ ಆತಂಕ ಉಂಟು ಮಾಡಿದೆ” ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

- Advertisement -

ಜಮ್ಮು ಮತ್ತು ಕಾಶ್ಮೀರಾದ ಕುಲ್‌ಗಾಮ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂಡಿಯಾ ಮೈತ್ರಿಕೂಟದ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗುವುದು ಎಂದು ಹೇಳಿದ್ದು, ಇದರಿಂದ ಎನ್‌ಡಿಎ ಕಂಗೆಟ್ಟಿದೆ. ಇಂಡಿಯಾ ಮೈತ್ರಿ ಉತ್ತಮ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ?  ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಣಾಳಿಕೆ ದೇಶದ ಅಭ್ಯುದಯಕ್ಕೆ ಸಹಕಾರಿ: ಅನಿಲ್ ಕುಮಾರ್ ತಡಕಲ್

ಅನಂತನಾಗ್-ರಾಜೌರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಮುಫ್ತಿ ಅವರು, “ಬಡವರು, ನಿರುದ್ಯೋಗಿ ಯುವಕರು ಮತ್ತು ರೈತರ ಬಗ್ಗೆ ಮಾತನಾಡುವ ಇಂತಹ ಉತ್ತಮ, ಜನಪರ ಪ್ರಣಾಳಿಕೆ 70 ವರ್ಷಗಳಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದೆ” ಎಂದು ಅಭಿಪ್ರಾಯಿಸಿದರು.

“ಈ ಜನಪರ ಪ್ರಣಾಳಿಕೆಯು ಬಿಜೆಪಿ ನಾಯಕರನ್ನು ವಿಚಲಿತಗೊಳಿಸಿದೆ. ಅದಕ್ಕಾಗಿ ಬಿಜೆಪಿ ನಾಯಕರು ಹಿಂದೂ-ಮುಸ್ಲಿಂ ಉದ್ವಿಗ್ನತೆಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ” ಎಂದರು.

ಹಾಗೆಯೇ, “ದಬ್ಬಾಳಿಕೆಗೆ ಮತದಾನವೇ ಉತ್ತರವಾಗಿದೆ. ಬಂದೂಕು ಅಥವಾ ಕಲ್ಲುಗಳಲ್ಲ” ಎಂದು ಹೇಳಿದರು. “ಇಂದು ನಾವು ಮೌನವಾಗಿದ್ದರೆ, ನಮ್ಮ ಮುಂದಿನ ಪೀಳಿಗೆಗೆ ಏನೂ ಉಳಿಯದು. ಮತದಾನ, ಬಂದೂಕು ಅಥವಾ ಕಲ್ಲು ಅಲ್ಲ. ದಬ್ಬಾಳಿಕೆಗೆ ಉತ್ತರ ಮತದಾನ. ಬಂದೂಕು ಮತ್ತು ಕಲ್ಲುಗಳು ನಮ್ಮ ಸ್ಮಶಾನವನ್ನು ತುಂಬಿಸುತ್ತದೆ. ನಮ್ಮ ಮಕ್ಕಳನ್ನು ಅನಾಥರನ್ನಾಗಿ ಮತ್ತು ನಮ್ಮ ಹೆಂಗಸರನ್ನು ವಿಧವೆಯರನ್ನಾಗಿ ಮಾಡುತ್ತದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...