ಅನುದಾನ ಬಿಡುಗಡೆಗೆ ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸಚಿವರು: ಕಾಂಗ್ರೆಸ್‌ ಶಾಸಕ ಬಿ.ಆರ್ ಪಾಟೀಲ್ ಆರೋಪ

Date:

ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಶಾಸಕರು ಮತ್ತು ಸಚಿವರ ನಡುವೆ ಮುಸುಕಿನ ಗುದ್ದಾಟ ಪ್ರಾರಂಭವಾಗಿದ್ದು, ಸಚಿವರ ವಿರುದ್ಧ ಆರೋಪ ಮಾಡಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ ಶಾಸಕಾಂಗ ಸಭೆ ಕರೆದ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಶಾಸಕ ಬಿ ಆರ್‌ ಪಾಟೀಲ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಪತ್ರದಲ್ಲಿ 11 ಮಂದಿ ಕಾಂಗ್ರೆಸ್‌ ಶಾಸಕರ ಸಹಿ ಕೂಡ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದೇ ವಿಷಯವಾಗಿ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, “ನಮ್ಮ ಸರ್ಕಾರ ರಚನೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷ ಸಭೆ ನಡೆಸಿ ಎಂದು ಶಾಸಕರು ಪತ್ರ ಬರೆದಿದ್ದಾರೆ. ಅವರ ಪತ್ರದಲ್ಲಿ ಯಾವುದೇ ಸಚಿವರ ಮೇಲೆ ದೂರು ಇಲ್ಲ” ಎಂದು ಸ್ಪಷ್ಟನೆ ನೀಡಿದ್ದರು. ಆದರೆ, ಈಗ ಶಾಸಕರು ಸಿಎಂಗೆ ಬರೆದಿರುವ ಪತ್ರ ಬಹಿರಂಗವಾಗಿದೆ.

Screenshot 2023 07 25 170127
ಕಾಂಗ್ರೆಸ್‌ ಶಾಸಕ ಬಿ ಆರ್‌ ಪಾಟೀಲ್‌ ಅವರು ಸಿಎಂಗೆ ಬರೆದಿರುವ ಪತ್ರ

ಶಾಸಕ ಬಿ ಆರ್‌ ಪಾಟೀಲ್‌ ಅವರು ಸಿಎಂಗೆ ಬರೆದಿರುವ ಪತ್ರದಲ್ಲಿ “ಜಿಲ್ಲಾ ಉಸ್ತವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನದ ಬೇಡಿಕೆಯ ಬಗ್ಗೆ” ಎಂದು ವಿಷಯ ಪ್ರಸ್ತಾಪಿಸಿದ್ದು, “ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಕಾರಣ ನಾನಾ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ, ಸ್ಥಳೀಯ ಶಾಸಕರು ನಾವು ಆಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರದ ವಿಷಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾವುದೇ ಸಚಿವರ ಮೇಲೆ ಶಾಸಕರಿಂದ ದೂರು ಬಂದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

“ಇದಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿ ಕೊಡುತ್ತಿಲ್ಲ. ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂಬುದು ನಮ್ಮ ಕೋರಿಕೆ ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ತಾವು ನಡೆದುಕೊಳ್ಳುತ್ತೀರೆಂದು ಭಾವಿಸಿದ್ದೇವೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...