ಪಕ್ಷದ ಶಿಸ್ತು ಉಲ್ಲಂಘನೆ: ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್‌ಗೆ ಶೋಕಾಸ್ ನೋಟಿಸ್

Date:

Advertisements

ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಎ ಇಕ್ಬಾಲ್ ಹುಸೇನ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ಮಂಗಳವಾರ ಮಾಧ್ಯಮಗಳಿಗೆ ನೀಡಿದ್ದೀರಿ. ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಾಸಕ ಇಕ್ಬಾಲ್ ಹುಸೇನ್, ಡಿಕೆಶಿ ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ನಾನು ಸೇರಿದಂತೆ ಹಲವರ ಅಭಿಲಾಷೆಯಾಗಿದೆ.‌ ಹೈಕಮಾಂಡ್ ಅವರಿಗೂ ಒಂದು ಅವಕಾಶ ನೀಡಬೇಕು. ಸುಮಾರು 100 ಶಾಸಕರು ಸಿಎಂ ಬದಲಾವಣೆ ಪರವಾಗಿದ್ದಾರೆ ಎಂದು ಹೇಳಿದ್ದರು.

Advertisements
Bose Military School
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು...

ನವದೆಹಲಿಯಲ್ಲಿ ದೇವನಹಳ್ಳಿ ರೈತ ಹೋರಾಟದ ಸದ್ದು: ಜೆಪಿಸಿ ಸಭೆಯಿಂದ ಬಿಜೆಪಿ ಸದಸ್ಯರ ಪಲಾಯನ

ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ...

ಹೆಚ್ಚುತ್ತಿರುವ ಹೃದಯಾಘಾತ | ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ...

ಪತ್ರಿಕಾ ದಿನಾಚರಣೆ | ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ: ಸಿಎಂ ಸಿದ್ದರಾಮಯ್ಯ

ಇಂದಿನ ಬಹುತೇಕ ಮಾಧ್ಯಮಗಳು ಸುಳ್ಳು ಸುದ್ದಿಗೆ ಹೆಚ್ಚು ಒತ್ತು ನೀಡಿವೆ. ಇದರಿಂದ...

Download Eedina App Android / iOS

X