ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

Date:

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ ರಂಗನಾಥ್‌ ಅವರು ಆರ್‌ಎಸ್‌ಎಸ್ ಗೀತೆ ಗುಣಗಾನ ಮಾಡಿದ್ದಾರೆ. ತುಮಕೂರಿನ ಕುಣಿಗಲ್ ಶಾಸಕ ರಂಗನಾಥ್ ಅವರು ಆರ್‌ಎಸ್‌ಎಸ್‌ ಗೀತೆ ಹಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ನಮಸ್ತೆ ಸದಾ ವಸ್ತಲೇ ಹಾಡು ಚೆನ್ನಾಗಿದೆ” ಎಂದು ಹೇಳಿದ್ದಾರೆ.

- Advertisement -

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆಶಿ ಅವರು ಸದನದಲ್ಲೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್‌ಎಸ್‌ಎಸ್‌ ಗೀತೆ ಹಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಡಿಕೆಶಿ ಮೃದು ಹಿಂದುತ್ವ ಹೊಂದಿದ್ದು, ಈಗ ರಾಜಕೀಯ ಲಾಭಕ್ಕಾಗಿ ಸಾರ್ವಜನಿಕವಾಗಿ ಮೃದು ಹಿಂದುತ್ವ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಬ್ಯಾನ್ ಮಾಡಿ ನೋಡಿ, ಮೂರು ತಿಂಗಳಲ್ಲಿ ನಿಮ್ಮ ಸರ್ಕಾರ ಇರಲ್ಲ: ಆರ್ ಅಶೋಕ್ ಗುಡುಗು

ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಯಾಗುತ್ತಿದ್ದಂತೆ ಈ ಬಗ್ಗೆ ಸ್ಪಷ್ಟಣೆ ನೀಡಿದ್ದ ಡಿ ಕೆ ಶಿವಕುಮಾರ್ ಅವರು, “ಹುಟ್ಟಿನಿಂದಲೇ ನಾನು ಕಾಂಗ್ರೆಸಿಗ. ನನ್ನ ರಕ್ತ ಜೀವನವೆಲ್ಲಾ ಕಾಂಗ್ರೆಸ್. ಆರ್‌ಎಸ್‌ಎಸ್‌ ಹೇಗೆ ಶಾಲೆಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ನನಗೆ ತಿಳಿದಿದೆ. ನನ್ನ ಶಕ್ತಿಯೆಲ್ಲಾ ಸೇರಿಸಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸುತ್ತೇನೆ” ಎಂದು ಹೇಳಿದ್ದಾರೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ರಂಗನಾಥ್‌ ಅವರು ಆರ್‌ಎಸ್‌ಎಸ್ ಗೀತೆ ಗುಣಗಾನ ಮಾಡಿದ್ದಾರೆ. “ಗೀತೆಯ ಅರ್ಥ ಡಿ ಕೆ ಶಿವಕುಮಾರ್ ಸಾಹೇಬ್ರು ಹಾಡಿದ ಮೇಲೆಯೇ ಓದಿ ತಿಳಿಯಿತು. ಹುಟ್ಟಿದ ಭೂಮಿಗೆ ನಮಸ್ಕಾರ ಮಾಡಿ ಎಂದು ಗೀತೆ ಹೇಳುತ್ತದೆ. ಅದರಲ್ಲಿ ಏನೂ ತಪ್ಪು ಕಾಣಿಸಲ್ಲ. ನಮ್ಮದು ಜಾತ್ಯಾತೀತ ಪಕ್ಷ, ಯಾವ ಪಕ್ಷದಲ್ಲಿ ಅಥವಾ ಮನುಷ್ಯನಲ್ಲಿ ಒಳ್ಳೆಯದು ಇದೆಯೋ ಅದನ್ನು ಸ್ವೀಕರಿಸಬೇಕು” ಎಂದು ಹೇಳಿಕೊಂಡಿದ್ದಾರೆ.

“ಬಲಪಂಥೀಯರಾದ ಬಿಜೆಪಿಯವರು ಜಾತಿಯ, ಧರ್ಮದ ಒಡಕನ್ನು ಮೂಡಿಸುವುದನ್ನು ನಾವು ಖಂಡಿಸುತ್ತೇವೆ. ಯಾವುದೇ ಕಾರಣಕ್ಕೂ ಅವರ ಸಿದ್ಧಾಂತಕ್ಕೂ ನಮ್ಮ ಸಿದ್ಧಾಂತಕ್ಕೂ ಹೊಂದಿಕೆಯಾಗಲ್ಲ. ಆರ್‌ಎಸ್‌ಎಸ್‌ನಲ್ಲಿರುವ ಗೀತೆ ಹಾಡಿದರೆ ತಪ್ಪೇನು” ಎಂದು ಡಾ. ರಂಗನಾಥ್ ಪ್ರಶ್ನಿಸಿದ್ದಾರೆ.

ಇನ್ನು ಧರ್ಮಸ್ಥಳ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಪ್ರತಿ ಮನೆಯಲ್ಲೂ ಧರ್ಮಸ್ಥಳದ ಭಕ್ತರಿದ್ದಾರೆ. ವಿಶೇಷವಾಗಿ ಅತಿ ಹೆಚ್ಚು ಕಾಂಗ್ರೆಸ್ ಶಾಸಕರೇ ಅಲ್ಲಿಯ ಭಕ್ತರು. ಬಿಬೆಪಿಯವರು ಇಲ್ಲಿವರೆಗೂ ಯಾರೂ ಮಾತಾಡಿರಲಿಲ್ಲ. ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಇರಬಹುದು ಅಂತ ಎಂದು ಸದನದಲ್ಲಿ ಡಿಕೆಶಿ ಅವರು ಹೇಳಿದ ಬಳಿಕ ಬಿಜೆಪಿಯವರು ಮಾತನಾಡಲು ಶುರು ಮಾಡಿದ್ದಾರೆ” ಎಂದು ಟೀಕಿಸಿದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ ಇದ್ದರೆ ಸಿಎಂ, ಡಿಸಿಎಂ ಕಿತ್ತೆಸೆಯಲಿ: ಹೆಚ್‌ ಡಿ ಕುಮಾರಸ್ವಾಮಿ ಕಿಡಿ

“ಮಹಾಭಾರತ, ರಾಮಾಯಣಗಳಲ್ಲಿ ಹಲವು ಸವಾಲುಗಳು ಎದುರಾಗಿದೆ. ಸೀತಾ ಮಾತೆಯನ್ನೆ ಪರೀಕ್ಷೆಗೆ ದೂಡಿದಂತಹ ಸಂಸ್ಕೃತಿ ನಮ್ಮದು. ಹಾಗಾಗಿ ತನಿಖೆ ನಡೆಯುತ್ತಿರುವುದು ಸ್ವಾಗತಾರ್ಹ. ಸಂಪೂರ್ಣ ತನಿಖೆ ನಡೆದ ಮೇಲೆ ಪೂರ್ಣ ಮಾಹಿತಿ ನೀಡುತ್ತಾರೆ. ಕಾದು ನೋಡೋಣ” ಎಂದು ಹೇಳಿದ್ದಾರೆ.

ಇನ್ನು ಎಡಪಂಥೀಯರ ಷಡ್ಯಂತ್ರ, ಒತ್ತಡ ಇದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, “ಡಿ ಕೆ ಶಿವಕುಮಾರ್ ಅವರು ಮಾತನಾಡುವವರೆಗೂ ಬಿಜೆಪಿಯವರು ಮಾತನಾಡಲೇ ಇಲ್ಲ. ಈಗ ಅವರಿಗೆ ಹುರುಪು ಬಂದುಬಿಟ್ಟಿದೆ. ಧರ್ಮಸ್ಥಳ ಪವಿತ್ರವಾದ ಕ್ಷೇತ್ರ. ನಮ್ಮ ಹೇಳಿಕೆಯಿಂದ ಗೊಂದಲವಾಗಬಾರದು. ಬಹಳಷ್ಟು ಜನ ಸೂಕ್ಷ್ಮವಾಗಿ ಗಮನಿಸುತ್ತಾರೆ. ತನಿಖೆ ನಡೆದು ಪೂರ್ಣವಾಗುವವರೆಗೂ ನಾನು ಅದರ ಬಗ್ಗೆ ಹೆಚ್ಚು ಮಾತನಾಡಲ್ಲ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...