ಧಾರವಾಡಕ್ಕೆ ಪ್ರವೇಶ ಪಡೆಯಲು ಕಾಂಗ್ರೆಸ್‌ ಶಾಸಕ ಹರಸಾಹಸ

Date:

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಎದುರಿಸುತ್ತಿರುವ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ, ಧಾರವಾಡಕ್ಕೆ ಪ್ರವೇಶ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಜಿಲ್ಲೆಗೆ ಪ್ರವೇಶಿಸಲು ಅನುಮತಿ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

- Advertisement -

ಜೂನ್ 20ರಂದು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಯ ಮೇಯರ್ ಚುನಾವಣೆ ಇದೆ. ಆ ಚುನಾವಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಕೂಡ ಮತ ಚಲಾಯಿಸಬೇಕು. ಅದಕ್ಕಾಗಿ, ತಮಗೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ. ಅರ್ಜಿದಾರರ ವಾದ ಆಲಿಸಿರುವ ನ್ಯಾಯಾಲಯ, ಜೂನ್ 17ರೊಳಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ವಿನಯ್ ಕುಲಕರ್ಣಿಗೆ ಚುನಾವಣೆ ಸಮಯದಲ್ಲಿಯೂ ಧಾರವಾಡ ಪ್ರವೇಶಕ್ಕೆ ಅವಕಾಶ ನೀಡಲಾಗಿರಲಿಲ್ಲ. ಚುನಾವಣಾ ಸಮಯದಲ್ಲಿಯೂ ಅನುಮತಿ ಕೋರಿ ವಿನಯ್ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 18ರಂದು ನ್ಯಾಯಾಲಯ ತಿರಸ್ಕರಿಸಿತ್ತು.

ಅಂದು ಅರ್ಜಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯ, “ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ 90 ಸಾಕ್ಷಿಗಳಿವೆ. ಒಂದು ವೇಳೆ ವಿನಯ್ ಕಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಪ್ರಕರಣಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ” ಎಂದು ಹೇಳಿತ್ತು.

ಅರ್ಜಿ ತಿರಸ್ಕೃತವಾಗಿ, ಧಾರವಾಡ ಪ್ರವೇಶ ಪಡೆಯಲಾಗದಿದ್ದರೂ ವಿನಯ್ ಕುಲಕರ್ಣಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಅವರ ಗೆಲುವಿಗಾಗಿ ಅವರಪ ಪತ್ನಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಭಾರೀ ಪ್ರಚಾರ ನಡೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ...

ಯಾದಗಿರಿ | ಜಮೀನು ವಿವಾದ: ಜೋಳದ ಬೆಳೆ ನಾಶ, ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ

ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳಪುರ ಗ್ರಾಮದಲ್ಲಿ ಬಾಂಡ್ ಪತ್ರದ ಮೂಲಕ...

ಮಂಗಳೂರು | SIR ರದ್ದತಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮನವಿ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು,...

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...