ಕಾಂಗ್ರೆಸ್‌ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್‌ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆ.30) ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ” ಎಂದರು.

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ

Advertisements

ಸಿದ್ದರಾಮಯ್ಯನವರ ಮೇಲೆ ಮಾತ್ರ ಇಂತಹ ಪಿತೂರಿ ನಡೆಯುತ್ತಿರುವ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಸೇರಿ , ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದರು.

ಬಾಕಿ ಪ್ರಕರಣಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಲು ರಾಜ್ಯಪಾಲರಿಗೆ ಒತ್ತಾಯ

ಮುಡಾ ಪ್ರಕರಣದಲ್ಲಿ ಸಿಎಂ ಅವರು ರಾಜಿನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ವಿಜಯೇಂದ್ರ ತಿಳಿಸಿದರು ಎಂದು ರಾಜಿನಾಮೆ ನೀಡಲು ಸಾಧ್ಯವೇ ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ,ಜನಾರ್ಧನ ರೆಡ್ಡಿ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜುಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ” ಎಂದು ತಿಳಿಸಿದರು.

ಪರಿಸರ ತೀರುವಳಿ ಬಂದ ತಕ್ಷಣ ಮಹಾದಾಯಿಗೆ ಚಾಲನೆ

“ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದವಿದೆ. ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು” ಎಂದರು.

16ನೇ ಹಣಕಾಸು ಆಯೋಗ ರಾಜ್ಯದ ಅನುದಾನ ಕೊರತೆ ನೀಗಿಸುವ ವಿಶ್ವಾಸ

“ನಿನ್ನೆ 16 ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸ್ಸು ಮಾಡಿದ್ದ 11495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ತೆರಿಗೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು , 1.66 ರಷ್ಟು ಪ್ರಮಾಣ ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರ್ಉ 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16 ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ” ಎಂಬ ವಿಶ್ವಾಸವಿದೆ ಎಂದರು.

ನಟ ದರ್ಶನ್ ಪ್ರಕರಣ: ತಪ್ಪೆಸೆಗಿರುವ ಅಧಿಕಾರಿಗಳ ಅಮಾನತು

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ನಿಟ್ಟಿನಲ್ಲಿ ಕರ್ತವ್ಯ ಲೋಪ ಎಸಗಿದ್ದ 9 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಜೊತೆಗೆ ಉಳಿದ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಕಳಿಸಲಾಗಿದ್ದು, ಇಂತಹ ತಪ್ಪು ನಡೆದ ಜೈಲಿನ ಡಿಜಿಪಿಗೆ ನೋಟಿಸ್‌ ನೀಡಲಾಗಿದೆ” ಎಂದು ಹೇಳಿದರು.

ಮುಡಾದ ಮಾಜಿ ಆಯುಕ್ತರ ಮೇಲೆ ಆರೋಪವಿದ್ದು, ಅವರನ್ನು ಹಾವೇರಿ ವಿವಿಗೆ ಕುಲಸಚಿವರಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ವಿಚಾರದ ಬಗ್ಗೆ ಮಾಹಿತಿ ಪಡೆಯುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X