ಶಿಕ್ಷಣ ನಿಧಿ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

Date:

ತಮಿಳುನಾಡಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ಯೋಜನೆಯಡಿ ಶಿಕ್ಷಣ ನಿಧಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರ ಆರೋಗ್ಯ ಹದಗೆಟ್ಟಿದ್ದು ಅವರನ್ನು ಶನಿವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಎಸ್‌ಎಸ್‌ಎ ಯೋಜನೆಯಡಿಯಲ್ಲಿ ಹಂಚಿಕೆಯಾದ ಸುಮಾರು 2,000 ಕೋಟಿ ರೂ.ಗಳನ್ನು ವಿತರಿಸುವಲ್ಲಿ ಕೇಂದ್ರದ ವಿಳಂಬವನ್ನು ವಿರೋಧಿಸಿ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ತಮಿಳುನಾಡು ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತರಲು ನಿರಾಕರಿಸಿದ್ದರಿಂದ ಶಿಕ್ಷಣ ನಿಧಿ ಬಿಡುಗಡೆಯನ್ನು ತಡೆಯಲಾಗಿದೆ ಎಂದು ಸೆಂಥಿಲ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಇದನ್ನು ಓದಿದ್ದೀರಾ? ಜಿಲ್ಲಾಧಿಕಾರಿಯಿಂದ ಸಂಸದರಾಗುವವರೆಗೆ: ಐದು ಲಕ್ಷ ಅಂತರದಲ್ಲಿ ಗೆದ್ದ ಸಸಿಕಾಂತ್ ಸೆಂಥಿಲ್ ಪಯಣ

ಉಪವಾಸ ಮಾಡುತ್ತಿದ್ದ ಸೆಂಥಿಲ್ ಅವರಿಗೆ ಅಧಿಕ ರಕ್ತದೊತ್ತಡ ಕಾಣಿಸಿಕೊಂಡಿದ್ದು ತಿರುವಲ್ಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸೆಂಥಿಲ್, “ಎಸ್‌ಎಸ್‌ಎ ಅಡಿಯಲ್ಲಿ ತಮಿಳುನಾಡಿನ ನ್ಯಾಯಯುತ ನಿಧಿಯನ್ನು ಕೋರಿ ನಾನು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಮೂರನೇ ದಿನವಾದ ಇಂದು ನನಗೆ ಅಧಿಕ ರಕ್ತದೊತ್ತಡವಿದೆ. ನನಗೆ ಸರಿಯಾದ ವೈದ್ಯಕೀಯ ಆರೈಕೆ ನೀಡಲಾಗುತ್ತಿದೆ ಮತ್ತು ನನ್ನ ಆರೋಗ್ಯ ಸ್ಥಿರವಾಗಿದೆ” ಎಂದು ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೂಡ ಶಿಕ್ಷಣ ನಿಧಿ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. “ಕೇಂದ್ರವು ಶಿಕ್ಷಣ ನಿಧಿಯನ್ನು ರಾಜಕೀಯಗೊಳಿಸುತ್ತಿದೆ ಮತ್ತು NEP ವಿರುದ್ಧದ ನಿಲುವಿಗಾಗಿ ತಮಿಳುನಾಡಿಗೆ ದಂಡ ವಿಧಿಸುತ್ತಿದೆ” ಎಂದು ಟೀಕಿಸಿದ್ದಾರೆ.

ಸೆಂಥಿಲ್ ಈ ಹಿಂದೆ ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಬಾಕಿ ಇರುವ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ನಿಧಿ ನೀಡುವುದು ವಿಳಂಬ ಮಾಡಿರುವುದರಿಂದಾಗಿ ಶಿಕ್ಷಣ ಹಕ್ಕು (RTE) ನಿಧಿಗಳ ವಿತರಣೆ ಮತ್ತು ಶಿಕ್ಷಕರಿಗೆ ಸಂಬಳ ಪಾವತಿ ಸೇರಿದಂತೆ ರಾಜ್ಯದ ಪ್ರಮುಖ ಶಿಕ್ಷಣ ಯೋಜನೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...