ಜಮ್ಮು ಕಾಶ್ಮೀರ | ಕಾಂಗ್ರೆಸ್, ಎನ್‌ಸಿ 370ನೇ ವಿಧಿ ಮರುಸ್ಥಾಪಿಸಲು ಬಯಸುತ್ತದೆ : ಅಮಿತ್ ಶಾ

Date:

Advertisements

“ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) 370ನೇ ವಿಧಿಯನ್ನು ಮರಳಿ ತರಲು ಬಯಸುತ್ತವೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು ಕಾಂಗ್ರೆಸ್, ಎನ್‌ಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್ ಮತ್ತು ಎನ್‌ಸಿ ಮುಸ್ಲಿಂ ಕೃಷಿ ಜನಾಂಗ (ಗುಜ್ಜರ್), ಪಹಾಡಿಯಾ (ಮುಸ್ಲಿಂ ಪರಿಶಿಷ್ಠ ಜನಾಂಗ), ಕಣಿವೆ ಪ್ರದೇಶದಲ್ಲಿ ಜೀವಿಸುವವರು, ಒಬಿಸಿಗಳು ಮತ್ತು ದಲಿತರಿಗೆ ಇರುವ ಮೀಸಲಾತಿಯನ್ನು ಕಿತ್ತುಕೊಳ್ಳಲು ಬಯಸುತ್ತವೆ” ಎಂದು ಆರೋಪಿಸಿದರು.

Advertisements

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಅಮಿತ್ ಶಾ, “ರಾಹುಲ್ ಬಾಬಾ ನಾನು ಏನು ಹೇಳುತ್ತಿದ್ದೇನೆ ಎಂದು ಎಚ್ಚರಿಕೆಯಿಂದ ಕೇಳಿ. ಗುಜ್ಜರ್, ಪಹಾಡಿಯಾ, ಕಣಿವೆ ಪ್ರದೇಶದ ಜನರು, ದಲಿತರಿಗೆ ಇರುವ ಮೀಸಲಾತಿಯನ್ನು ನೀವು ಮುಟ್ಟದ ಹಾಗೆ ನಾವು ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಅಮಿತ್ ಶಾ ಮಗ ಜಯ್ ಶಾಗೆ 35 ವರ್ಷಕ್ಕೇ 12 ಹುದ್ದೆ; ಪದವೀಧರರಿಗೆ ಪಕೋಡ!

ಇನ್ನು ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ವಿಚಾರವನ್ನು ಮಾತನಾಡಿದ ಅಮಿತ್ ಶಾ, “”ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುತ್ತೇವೆ ಎಂದು ಹೇಳುತ್ತಿವೆ. ಯಾರು ರಾಜ್ಯ ಸ್ಥಾನಮಾನ ಕೊಡಬಹುದು ಹೇಳಿ? ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಮಾತ್ರ ರಾಜ್ಯ ಸ್ಥಾನಮಾನ ನೀಡಬಹುದು. ಜಮ್ಮು ಮತ್ತು ಜನರನ್ನು ಕಾಂಗ್ರೆಸ್‌ ಮುರ್ಖರನ್ನಾಗಿಸುವುದು ಬೇಡ. ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ನಾವು ರಾಜ್ಯ ಸ್ಥಾನಮಾನ ನೀಡುತ್ತೇವೆ. ರಾಹುಲ್ ಗಾಂಧಿ ಇಲ್ಲಿಯ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಬೇಕು” ಎಂದಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಚುನಾವಣೆಗೂ ಮುನ್ನ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಕಾಂಗ್ರೆಸ್, ಎನ್‌ಸಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ. ಈ ನಡುವೆ ಬಿಜೆಪಿ ಚುನಾವಣೆ ಬಳಿಕ ರಾಜ್ಯ ಸ್ಥಾನಮಾನ ನೀಡುವುದಾಗಿ ಚುನಾವಣಾ ಪ್ರಚಾರ ನಡೆಸುತ್ತಿದೆ. ರಾಜ್ಯ ಸ್ಥಾನಮಾನ ನೀಡಲು ಚುನಾವಣೆ ಮುಗಿಯುವವರೆಗೆ ಯಾಕೆ ಕಾಯಬೇಕು ಎಂದು ವಿಪಕ್ಷಗಳು ಪ್ರಶ್ನಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X