ದೇಶದ ಹಿತರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಸದಾ ಸೇನೆ ಬೆನ್ನಿಗೆ ನಿಲ್ಲಲಿದೆ: ಡಿಸಿಎಂ ಡಿ ಕೆ ಶಿವಕುಮಾರ್

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ದೇಶದ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

- Advertisement -

ನವದೆಹಲಿಯಲ್ಲಿ ಖಾಸಗಿ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಷನ್ ಸಿಂಧೂರ ಉತ್ತಮ ಪ್ರತ್ಯುತ್ತರವಾಗಿದೆ. ಪಹಲ್ಗಾಮ್‌ ದಾಳಿಯಲ್ಲಿ ನಮ್ಮ ರಾಜ್ಯ ಮಾತ್ರವಲ್ಲ, ದೇಶದ ಇತರೆ ಭಾಗಗಳ ಜನರು ಮೃತರಾಗಿದ್ದರು. ಈ ವಿಚಾರದಲ್ಲಿ ಕೇವಲ ಕರ್ನಾಟಕ ಎಂದು ನೋಡಬಾರದು, ಇಡೀ ದೇಶವೇ ಒಂದು ಎಂದು ನೋಡಬೇಕು. ನಾವೆಲ್ಲರೂ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕು, ಅದೇ ರೀತಿ ಒಟ್ಟಾಗಿ ನಿಂತಿದ್ದೇವೆ” ಎಂದರು.

ಪಹಲ್ಗಾಮ್ ದಾಳಿಯಲ್ಲಿ ಮೃತರ ಕುಟುಂಬದವರು ಈ ಆಪರೇಷನ್ ನಿಂದ ನೆಮ್ಮದಿ ಪಡೆಯುವರೇ?, ವಿರೋಧ ಪಕ್ಷ ಕೂಡ ಸರ್ಕಾರದ ಬೆನ್ನಿಗೆ ನಿಂತಿದೆಯಲ್ಲವೇ ಎಂದು ಕೇಳಿದಾಗ, “ಹೌದು, ನಾವು ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ನಿಂತಿದ್ದೇವೆ. ಬೆಲೆ ಏರಿಕೆ ವಿಚಾರವಾಗಿ ಇಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅದನ್ನು ನಾವು ರದ್ದುಗೊಳಿಸಿದ್ದೇವೆ. ಈ ಸಂದರ್ಭದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಹೀಗಾಗಿ ಈ ಪ್ರತಿಭಟನಾ ಸಮಾವೇಶವನ್ನು ಮುಂದೂಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...