ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ಅನ್ಯಾಯ: ರಾಷ್ಟ್ರಪತಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

Date:

Advertisements

ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ ‘ಘೋರ ಅನ್ಯಾಯ’ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ  ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ-ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಕೂಡ ಆಗಿರುವುದರಿಂದ ಖರ್ಗೆ ಈ ಪತ್ರ ಬರೆದಿದ್ದಾರೆ.

“ಅತ್ಯಂತ ಮಹತ್ವದ ವಿಷಯದ ಕುರಿತು ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ನಿಮಗೆ ಪತ್ರ ಬರೆಯುತ್ತಿದ್ದೇನೆ. ಭಾರತ ಸರ್ಕಾರವು ತೆಗೆದುಕೊಂಡ ನಿರ್ಧಾರಗಳಿಂದ ಸುಮಾರು ಎರಡು ಲಕ್ಷ ಯುವಕ-ಯುವತಿಯರ ಭವಿಷ್ಯವು ಇಂದು ಅನಿಶ್ಚಿತತೆಗೆ ಒಳಗಾಗಿದೆ” ಎಂದು ಪತ್ರವನ್ನು ಆರಂಭಿಸಿದ್ದಾರೆ.

Advertisements

“ಇತ್ತೀಚೆಗೆ ಭಾರತೀಯ ಸಶಸ್ತ್ರ ಪಡೆಗಳ ಸೇವೆಗೆ ಆಯ್ಕೆಯಾದ ಯುವಕ-ಯುವತಿಯರ ಗುಂಪನ್ನು ಭೇಟಿಯಾಗುವ ಭಾಗ್ಯ ನನಗೆ ಸಿಕ್ಕಿತು. ಆದರೆ ನಮ್ಮ ದೇಶಕ್ಕೆ ಸೇವೆ ಸಲ್ಲಿಸುವ ಅವಕಾಶವನ್ನು ಸರ್ಕಾರ ನಿರಾಕರಿಸಿದೆ. 2019 ಮತ್ತು 2022 ರ ನಡುವೆ ಸುಮಾರು ಎರಡು ಲಕ್ಷ ಯುವಕ-ಯುವತಿಯರು ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಸೇನೆಗೆ ಅವರನ್ನು ಆಯ್ಕೆಯಾಗಿದ್ದೆವು ಎಂದು ನನಗೆ ಹೇಳಿದರು. ಈ ಯುವಕ-ಯುವತಿಯರು ಕಠಿಣ ಶ್ರಮ ವಹಿಸಿ ಎಲ್ಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದರು. 2022ರ ಮೇ 31ವರೆಗೆ ತಮ್ಮ ಕನಸುಗಳನ್ನು ಈಡೇರಲಿದೆ ಎಂದು ನಂಬಿದ್ದರು ಮತ್ತು ಆರ್ಡರ್ ಕಾಪಿ ಕೈಗೆ ಸಿಗಲು ಕಾಯುತ್ತಿದ್ದರು. ಆದರೆ, ಕೇಂದ್ರ ಸರ್ಕಾರವು ಅಗ್ನಿಪಥ್ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಅವರೆಲ್ಲರ ಕನಸಿಗೆ ತಣ್ಣೀರೆರಚಿತು” ಎಂದು ತಿಳಿಸಿದ್ದಾರೆ.

“ಅಗ್ನಿಪಥ್ ಯೋಜನೆಯಿಂದ ಸುಮಾರು ಎರಡು ಲಕ್ಷ ಯುವಕ-ಯುವತಿಯರ ಕನಸುಗಳು ಭಗ್ನಗೊಂಡವು. ಈ ಯೋಜನೆಯಲ್ಲಿ ಅನೇಕ ಸಮಸ್ಯೆಗಳಿವೆ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಕೂಡ ತಿಳಿಸಿದ್ದಾರೆ. ಈ ಯೋಜನೆಯಿಂದ ನಮ್ಮ ಯೋಧರಲ್ಲಿ ತಾರತಮ್ಯವನ್ನುಂಟು ಮಾಡುತ್ತದೆ. ನಾಲ್ಕು ವರ್ಷಗಳ ಸೇವೆಯ ನಂತರ ಅಗ್ನಿವೀರ್‌ಗಳನ್ನು ಸೇವೆಯಿಂದ ತೆಗೆಯಲಾಗುತ್ತದೆ. ಇದು ಸಾಮಾಜಿಕ ಸ್ಥಿರತೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು” ಎಂದು ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸೇನೆಗೆ ಸೇರುವ ಉದ್ದೇಶದಿಂದ ದೇಶಾದ್ಯಂತ ಸುಮಾರು 50 ಲಕ್ಷ ಯುವಕತು ಅರ್ಜಿ ಸಲ್ಲಿಸಿದ್ದರು. ಅವರಿಂದ ಅರ್ಜಿ ಶುಲ್ಕವಾಗಿ ತಲಾ ₹250 ಸಂಗ್ರಹಿಸಲಾಗಿತ್ತು. ಆ ಮೂಲಕ ಒಟ್ಟು ₹125 ಕೋಟಿ ಸಂಗ್ರಹಿಸಲಾಗಿದ್ದರೂ, ಅದನ್ನು ಹಿಂದಿರುಗಿಸಿಲ್ಲ. ಅಗ್ನಿಪಥ್ ಯೋಜನೆ ಜಾರಿಯಾದ ಪರಿಣಾಮವಾಗಿ ಹಲವು ಮಂದಿ ಯುವಕರು ಆತ್ಮಹತ್ಯೆಗಳಿಗೆ ಶರಣಾಗಿದ್ದಾರೆ. ಈ ಯುವಕರು ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳುವ ಪ್ರಯತ್ನದಲ್ಲಿ ವರ್ಷಗಳ ಕಾಲ ಕಳೆದಿದ್ದಾರೆ ಮತ್ತು ‘ಪರಿಣಾಮವಾಗಿ ಹತಾಶೆ ಮತ್ತು ಭರವಸೆ ಕಾಣದಿರುವುದು ಹಲವಾರು ಸಾವುಗಳಿಗೆ ಕಾರಣವಾಯಿತು’ ಎಂದು ಖರ್ಗೆ ತಿಳಿಸಿದ್ದಾರೆ.

“ನಮ್ಮ ಯುವಕರು ಈ ರೀತಿ ತೊಂದರೆ ಅನುಭವಿಸಲು ಬಿಡಬಾರದು. ಅವರಿಗೆ ಸೂಕ್ತ ನ್ಯಾಯ ಲಭ್ಯವಾಗುವಂತೆ ನೋಡಿಕೊಳ್ಳಲು ನಾನು ನಿಮಗೆ ಮನವಿ ಮಾಡುತ್ತೇನೆ” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿಯವರಲ್ಲಿ ಮನವಿ ಮಾಡಿದ್ದಾರೆ.

ಅಧಿಕಾರಕ್ಕೆ ಬಂದರೆ ಹಳೆಯ ನೇಮಕಾತಿ ಪದ್ಧತಿ ಮರುಜಾರಿ: ಕಾಂಗ್ರೆಸ್

ಅಗ್ನಿಪಥ್ ಸೇನಾ ಭರ್ತಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ದಾಳಿ ನಡೆಸಿರುವ ಕಾಂಗ್ರೆಸ್, ಯುವಜನರಿಗೆ ತೀವ್ರ ಅನ್ಯಾಯವನ್ನು ಮಾಡಲಾಗಿದೆ ಎಂದು ಹೇಳಿದೆಯಲ್ಲದೇ, ಒಂದು ವೇಳೆ ತಾನು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಹಳೆಯ ನೇಮಕಾತಿ ಪದ್ಧತಿಯನ್ನು ಮರುಜಾರಿಗೊಳಿಸುವುದಾಗಿ ಭರವಸೆ ನೀಡಿದೆ.

ಏನಿದು ಅಗ್ನಿಪಥ್ ಯೋಜನೆ?

ಜೂನ್ 14, 2022ರಂದು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಘೋಷಿಸಿದೆ. ಅಗ್ನಿಪಥ್ ಯೋಜನೆಯು ಹದಿನೇಳುವರೆಯಿಂದ 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳ ಅವಧಿಗೆ ಸೇನೆಗೆ ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಅವರಲ್ಲಿ ಶೇ. 25ರಷ್ಟನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ. ಆದರೆ ಇದಕ್ಕೆ ಯುವಕರಿಂದ ಮಾತ್ರವಲ್ಲದೇ, ಮಾಜಿ ಸೈನಿಕರಿಂದ ಭಾರೀ  ವಿರೋಧ ವ್ಯಕ್ತವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

Download Eedina App Android / iOS

X