ಮಾ.20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್ 19ರಂದು ಸಭೆ ಇದ್ದು, ಅಂದೇ ತೀರ್ಮಾನಿಸುತ್ತೇವೆ. ಆದರೆ, ನಾವು ಮಾ.20ರಂದು ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
“ಗ್ಯಾರಂಟಿ ಅಧ್ಯಕ್ಷರನ್ನ ಪ್ರತಿ ತಾಲೂಕಿನಲ್ಲಿ ಮಾಡಿದ್ದೇವೆ. ಅವರದೆಲ್ಲ ಒಂದು ಸಭೆ ಕರೆಯುತ್ತೇವೆ. ಮಾ. 21 ರಂದು ಸಭೆ ಕರೆಯಬೇಕು ಎಂದು ತೀರ್ಮಾನ ಮಾಡಿದ್ದೇವೆ. ಸರ್ಕಾರ ಯಾರನ್ನೆಲ್ಲ ಗ್ಯಾರಂಟಿ ಸಮಿತಿಗೆ ನೇಮಕ ಮಾಡಿದೆ. ಅವರನೆಲ್ಲ ನಾವು ಅಲ್ಲಿಗೆ ಕರೆಯುತ್ತೇವೆ. ಅವರಿಗೆಲ್ಲ ಚುನಾವಣೆ ಜವಾಬ್ದಾರಿ ಕೊಡುತ್ತೇವೆ. ಈ ಚುನಾವಣೆಯಲ್ಲಿ ನಾಮಿನೇಶನ್ ಮಾಡುವುದು ಅಷ್ಟೆ ಅಲ್ಲಾ, ಪಕ್ಷಕ್ಕೂ ದುಡಿಯಬೇಕು” ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಇದನ್ನು ಓದಿದ್ದೀರಾ? ರಮ್ಯಾ ಮಾನಹಾನಿ | ಸುವರ್ಣ ನ್ಯೂಸ್ , ವಿಶ್ವೇಶ್ವರ್ ಭಟ್ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಮೋದಿ ಅವರು ಕರ್ನಾಟಕದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ಕಲಬುರ್ಗಿಯಲ್ಲಿ ಗೆಲ್ಲುವುದೇ ಎಂದು ಕೇಳಿದಾಗ, “ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
