ಹನ್ನೊಂದು ವರ್ಷದಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ಮೋದಿ: ಕಾಂಗ್ರೆಸ್ ವಾಗ್ದಾಳಿ

Date:

ಹನ್ನೊಂದು ವರ್ಷದಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹನ್ನೊಂದು ವರ್ಷದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜವಾದ ಪತ್ರಿಕಾಗೋಷ್ಠಿ ನಡೆಸಲು ಸಾಧ್ಯವಾಗಿಲ್ಲ, ಮಾಧ್ಯಮ ಸಂದರ್ಶನಗಳೂ ಸ್ಕ್ರಿಪ್ಟ್ ಇಲ್ಲದೆ ನಡೆಸಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.

- Advertisement -

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪ್ರಪಂಚದಾದ್ಯಂತದ ನಾಯಕರು ಕಾಲಕಾಲಕ್ಕೆ ಮುಕ್ತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಾರೆ. ಆದರೆ ನಮ್ಮಲ್ಲಿ 11 ವರ್ಷಗಳಿಂದ ಯಾವುದೇ ಪತ್ರಿಕಾಗೋಷ್ಠಿಗಳು ನಡೆದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದ ಪ್ರಧಾನಿ ಮೋದಿ!

“ನರೇಂದ್ರ ಮೋದಿ ಕಳೆದ ವರ್ಷ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ್ದರು. ಆದರೆ ಅದರ ನಿರ್ಮಾಣ, ನಿರ್ದೇಶನ, ಸ್ಕ್ರಿಪ್ಟ್ ಮಾಡಿಕೊಂಡಿದ್ದರು. ಆ ಪೈಕಿ ಒಂದರಲ್ಲಿ ತಾನು ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಂಡು ಸುದ್ದಿಯಾದರು. ಪ್ರಧಾನಿ ಮೋದಿ ಯಾವುದೇ ಪೂರ್ವ ನಿರ್ಧಾರಿತ ಪತ್ರಿಕಾಗೋಷ್ಠಿಯನ್ನು ನಡೆಸುವ ಧೈರ್ಯವನ್ನು ಹೊಂದಿಲ್ಲ” ಎಂದು ಕಾಂಗ್ರೆಸ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇದು ಅವರ ಎಲ್ಲಾ ಪೂರ್ವವರ್ತಿಗಳಿಗಿಂತ ಸಂಪೂರ್ಣವಾಗಿ ಭಿನ್ನ. ಪ್ರಧಾನಿ ಮೋದಿ ಅವರ ಅತಿ ನೆಚ್ಚಿನ ದ್ವೇಷಿಯು ಪ್ರತಿ ಎರಡು ತಿಂಗಳಿಗೊಮ್ಮೆ ಸ್ವಯಂಪ್ರೇರಿತ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದರು. ಅಲ್ಲಿ ಅವರಿಗೆ ನಿರ್ದಯವಾಗಿ ಪ್ರಶ್ನಿಸಲಾಗುತ್ತಿತ್ತು. ಆದರೆ ಅವರು ತಾಳ್ಮೆಯಿಂದ ಉತ್ತರಿಸುತ್ತಿದ್ದರು. ಇದು ನಮ್ಮ ಪ್ರಜಾಪ್ರಭುತ್ವ ಅಡಿಪಾಯವನ್ನು ಸ್ಥಾಪಿಸುವ ಒಂದು ಮಾರ್ಗ” ಎಂದು ರಮೇಶ್ ಅವರು ಪರೋಕ್ಷವಾಗಿ ನಿರಂತರ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಅವರ ಉಲ್ಲೇಖ ಮಾಡಿದ್ದಾರೆ.

2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಮೋದಿ ಮಾಧ್ಯಮಗೋಷ್ಠಿ ನಡೆಸಿಲ್ಲ. ನಿರಂತರ ವಾಗ್ದಾಳಿ ಬಳಿಕ ಸಂದರ್ಶನಗಳನ್ನು ನಡೆಸಲಾಗಿದೆ. ಆದರೆ ಅವೆಲ್ಲವೂ ಸ್ಕ್ರಿಪ್ಟ್ ಆಗಿತ್ತು, ಪೂರ್ವಯೋಜಿತವಾಗಿತ್ತು ಎಂಬುದು ವಿಡಿಯೋದಲ್ಲೇ ಸ್ಪಷ್ಟವಾಗಿ ಕಂಡುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...