ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಜಾತಿವಾರು ಪ್ರಾತಿನಿಧ್ಯ ಹೇಗಿದೆ ಗೊತ್ತೇ?

Date:

  • ಅಳೆದೂ ತೂಗಿ ಸಮುದಾಯಗಳಿಗೆ ಟಿಕೆಟ್ ಹಂಚಿಕೆ ಮಾಡಿದ ಪಕ್ಷ
  • 124 ಸ್ಥಾನಗಳಲ್ಲಿ ಅತಿ ಹೆಚ್ಚು ಲಿಂಗಾಯತರಿಗೆ, ಕಡಿಮೆ ಕ್ರಿಶ್ಚಿಯನ್ನರಿಗೆ

ಮಂಬರುವ ರಾಜ್ಯ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಬಹು ನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ.

124 ಜನರ ಭವಿಷ್ಯ ಪರೀಕ್ಷೆಗೆ ಅಸ್ತು ಎಂದಿರುವ ಹೈಕಮಾಂಡ್, ಪಕ್ಷವನ್ನುಅಧಿಕಾರಕ್ಕೆ ತರಬಲ್ಲ ಅಭ್ಯರ್ಥಿಗಳಿಗೆ ಮನ್ನಣೆ ನೀಡಿದೆ.
ಅದರಂತೆ ಸಣ್ಣಪುಟ್ಟ ಬದಲಾವಣೆ ಹೊರತುಪಡಿಸಿ, ಸಿದ್ದರಾಮಯ್ಯ ಅವಧಿಯಲ್ಲಿ ಪಕ್ಷದಿಂದ ಗೆದ್ದ ಸ್ಪರ್ಧಾಳುಗಳಿಗೆ ಒತ್ತು ನೀಡಿ ಟಿಕೆಟ್ ನೀಡಿದೆ.

ಜೊತೆಗೆ ಈ ಬಾರಿಯ ಟಿಕೆಟ್ ಹಂಚಿಕೆಯಲ್ಲಿ ಜಾತಿ ಸಮೀಕರಣಕ್ಕೆ ಒತ್ತು ನೀಡಿರುವ ಪಕ್ಷ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಆ ಪಟ್ಟಿ ಕೆಳಗಿನಂತಿದೆ.

ಮೊದಲಪಟ್ಟಿಯ ಮೊದಲ ಸ್ಥಾನದಲ್ಲಿ ಲಿಂಗಾಯತ ಸಮುದಾಯವಿದ್ದರೆ, ಎರಡನೇ ಸ್ಥಾನದಲ್ಲಿ ಒಕ್ಕಲಿಗರು, ಮೂರನೇ ಸ್ಥಾನದಲ್ಲಿ ಪರಿಶಿಷ್ಟರಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಮೊದಲ ಪಟ್ಟಿಯಲ್ಲಿಲ್ಲ ಮಾಜಿ ಸಚಿವ ಹೆಚ್‌ ಆಂಜನೇಯ ಹೆಸರು; ಗೊಂದಲಕ್ಕೀಡಾದ ಕಾರ್ಯಕರ್ತರು

ಸಂಖ್ಯೆಗಳ ಲೆಕ್ಕಾಚಾರದ ಮೇಲೆ ನೋಡುವುದಾದರೆ, ಲಿಂಗಾಯತ – 30, ಎಸ್‌ಸಿ -22, ಎಸ್‌ಟಿ -10, ಒಕ್ಕಲಿಗ – 22, ಮುಸ್ಲಿಂ -8, ಕುರುಬ -5, ಈಡಿಗ -6, ರೆಡ್ಡಿ – 2, ಬ್ರಾಹ್ಮಣ – 5, ಮರಾಠ -2, ರಜಪೂತ್ -1, ಕುಂಬಾರ – 1, ಬಂಟ್ಸ್ – 3, ಕ್ರಿಶ್ಚಿಯನ್ – 1, ಬೆಸ್ತ – 1, ಇತರೆ -5 ಮಂದಿಗೆ ಅವಕಾಶ ನೀಡಲಾಗಿದೆ.

ಇನ್ನು ಕಾಂಗ್ರೆಸ್ ಪಕ್ಷದ ಓಟ್ ಬ್ಯಾಂಕ್ ಎಂದೇ ಕರೆಯಲಾಗುವ ಪರಿಶಿಷ್ಟರ ಟಿಕೆಟ್ ಹಂಚಿಕೆಯನ್ನು ಒಳಜಾತಿಗಳಿಗೆ ಹೀಗೆ ಹಂಚಿಕೆ ಮಾಡಲಾಗಿದೆ. ಇಲ್ಲಿ ಎಡಗೈ -5, ಬಲಗೈ -11, ಬೋವಿ -2, ಲಂಬಾಣಿ -4 ರಂತೆ ನೀಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸುವ...

ತಹಶೀಲ್ದಾರ್ ಅಜಿತ್ ಕುಮಾರ್ ರೈ ಅನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಲು ಆದೇಶ

ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪ ಅನುಕಂಪದಲ್ಲಿ ಸರ್ಕಾರಿ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...