ಸೇನಾ ಕಾರ್ಯಾಚರಣೆಗೆ ಬೆಂಬಲ; ಬೆಂಗಳೂರಲ್ಲಿ ಕಾಂಗ್ರೆಸ್‌ ತಿರಂಗಾ ಯಾತ್ರೆ

Date:

ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಉದ್ವಿಗ್ನಗೊಂಡಿದೆ. ಪಾಕಿಸ್ತಾನದ ದಾಳಿಯ ವಿರುದ್ಧ ಭಾರತೀಯ ಸೇನೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕರು ಮತ್ತು ಪಾಕಿಸ್ತಾನ್ ದಾಳಿಯನ್ನು ಯಶಸ್ವಿಯಾಗಿ ಹತ್ತಿಕ್ಕುತ್ತಿರುವ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ತಿರಂಗಾ ಯಾತ್ರೆ ನಡೆಸಿದೆ.

- Advertisement -

ಬೆಂಗಳೂರಿನ ಕೆ.ಆರ್. ವೃತ್ತದಿಂದ ಮ್ಯೂಸಿಯಂ ರಸ್ತೆಯ ಚಿನ್ನಸ್ವಾಮಿ ಸ್ಟೇಡಿಯಂ ವೃತ್ತದ ಮಿನ್ಸ್ ಸ್ಕ್ವೇರ್‌ವರೆಗೆ ಕಾಂಗ್ರೆಸ್‌ ತಿರಂಗಾ ಯಾತ್ರೆ ನಡೆಸಿದೆ. ಯಾತ್ರೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿ ಎಚ್‌.ಕೆ. ಪಾಟೀಲ್, ಎಂ.ಸಿ. ಸುಧಾಕರ್, ದಿನೇಶ್ ಗುಂಡೂರಾವ್‌, ಕೃಷ್ಣ ಭೈರೇಗೌಡ, ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ಕಾಂಗ್ರೆಸ್‌ ನಾಯಕರು ತಿರಂಗಾ ಧ್ವಜ ಹಿಡಿದು, ಹೆಜ್ಜೆ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ತಿರಂಗಾ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ, ‘ನಾವು ನಮ್ಮ ಸೈನಿಕರ ಜೊತೆಗಿದ್ದೇವೆ. ಭದ್ರತೆ ವಿಚಾರವಾಗಿ ಉತ್ತರ ಭಾರತದ ರಾಜ್ಯಗಳಿಗೆ ನೀಡಲಾದ ಸೂಚನೆಗಳನ್ನೇ ಕರ್ನಾಟಕಕ್ಕೂ ಕೇಂದ್ರ ಸರ್ಕಾರ ಕೊಟ್ಟಿದೆ. ನಾವು ಎಲ್ಲ ಜಿಲ್ಲೆಗಳ ಎಸ್‌ಪಿ‌ಗಳಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದೇವೆ. ಮಾಹಿತಿಗಳನ್ನು ಸಂಗ್ರಹಿಸಲು ತಿಳಿಸಿದ್ದವೆ. ಸ್ಲೀಪರ್ ಸೆಲ್‌ಗಳ ಮೇಲೂ ನಿಗಾ ಇಡಲು ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.

“ರಾಜ್ಯದ ಎಲ್ಲ ಜಲಾಶಯಗಳು, ಅಣೆಕಟ್ಟುಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಚರ್ಚೆಗಳು ನಡೆಯುತ್ತಿವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...