ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೆ.7ರಂದು ದೇಶಾದ್ಯಂತ ಜಿಲ್ಲಾಮಟ್ಟದಲ್ಲಿ ಯಾತ್ರೆ ನಡೆಸಲು ಪಕ್ಷ ತೀರ್ಮಾನಿಸಿದೆ.
2023ರ ಸೆಪ್ಟೆಂಬರ್ 7 ರಂದು ದೇಶದ ಎಲ್ಲ ಜಿಲ್ಲೆಯಲ್ಲಿ ಭಾರತ್ ಜೋಡೊ ಯಾತ್ರೆ ಆಯೋಜಿಸಲು ಕಾಂಗ್ರೆಸ್ ಯೋಜಿಸಿದೆ. ಯಾತ್ರೆಯ ವರ್ಷಾಚರಣೆ ಪ್ರಯುಕ್ತ ಕಾಂಗ್ರೆಸ್ ವಿಶೇಷ ಯಾತ್ರೆ ಹಮ್ಮಿಕೊಂಡಿದೆ. ಸೆ. 7 ರಂದು ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ಎಲ್ಲ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ 7 ರಂದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದರು. 130 ದಿನಗಳ ಅಭೂತಪೂರ್ವ ಯಾತ್ರೆಯಲ್ಲಿ 12 ರಾಜ್ಯಗಳಲ್ಲಿ ಹಾದು ಹೋಗಿತ್ತು. ಕನ್ಯಾಕುಮಾರಿಯಿಂದ ಆರಂಭಗೊಂಡು, ಕಾಶ್ಮೀರದಲ್ಲಿ ಅಂತ್ಯಗೊಂಡಿತ್ತು. ಜನವರಿ 30, 2023ರವರೆಗೆ ಈ ಯಾತ್ರೆ ನಡೆದಿತ್ತು.
ಈ ಸುದ್ದಿ ಓದಿದ್ದೀರಾ? ‘ಒಂದು ರಾಷ್ಟ್ರ, ಒಂದು ಚುನಾವಣೆ’| ದೇಶದ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ: ರಾಹುಲ್ ಗಾಂಧಿ
ಇನ್ನು ಎರಡನೇ ಆವೃತ್ತಿಯ ಭಾರತ ಒಗ್ಗೂಡಿಸುವ ಯಾತ್ರೆಯನ್ನು ಕಾಂಗ್ರೆಸ್ ಶೀಘ್ರದಲ್ಲೇ ಆರಂಭಿಸಲು ತಯಾರಿ ನಡೆಸುತ್ತಿದೆ. ಈ ಯಾತ್ರೆ ಗುಜರಾತ್‌ನಿಂದ ಆರಂಭಗೊಳ್ಳಲಿದ್ದು, ಮೆಘಾಲಯ, ಮಣಿಪುರ , ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ಸಂಚರಿಸಲಿ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಇತ್ತೀಚಿಗೆ ತಿಳಿಸಿದ್ದರು.