ದೆಹಲಿ ಚುನಾವಣೆ | ಆಪ್, ಕೇಜ್ರಿವಾಲ್ ಸೋಲನ್ನು ಸಂಭ್ರಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು!

Date:

ದೆಹಲಿಯ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಅಂತಿಮ ಹಂತದಲ್ಲಿದ್ದು, ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದ್ದಲ್ಲದೇ, 27 ವರ್ಷಗಳ ಬಳಿಕ ದೇಶದ ರಾಜಧಾನಿಯಲ್ಲಿ ಅಧಿಕಾರಕ್ಕೆ ಬರುವಲ್ಲಿ ಸಫಲವಾಗಿದೆ.

- Advertisement -

ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಮೂರನೇ ಬಾರಿಗೆ ಗೆದ್ದು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದ ಆಡಳಿತಾರೂಢ ಎಎಪಿ 22 ಸ್ಥಾನಗಳೊಂದಿಗೆ ಹೀನಾಯ ಸೋಲು ಕಂಡಿದೆ. ಚುನಾವಣೆಯಲ್ಲಿ ಎಎಪಿಯನ್ನು ಮುನ್ನಡೆಸುತ್ತಿದ್ದ ಘಟಾನುಘಟಿ ನಾಯಕರಾದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವಾರು ಪ್ರಮುಖ ನಾಯಕರು ಸೋಲುಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಆಮ್ ಆದ್ಮಿ ಪಕ್ಷ, ಅರವಿಂದ್ ಕೇಜ್ರಿವಾಲ್‌ಗೆ ಅವರು ಸೋಲು ಕಂಡಿರುವುದನ್ನು ಬಿಜೆಪಿ ಕಾರ್ಯಕರ್ತರಿಗಿಂತಲೂ ಕಾಂಗ್ರೆಸ್ ಕಾರ್ಯಕರ್ತರು ಸೋಷಿಯಲ್ ಮೀಡಿಯಾಗಳಲ್ಲಿ ಸಂಭ್ರಮಿಸುತ್ತಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ ಅಧಿಕಾರಕ್ಕೆ ಬಂದಿದ್ದ ಕೇಜ್ರಿವಾಲ್‌ ತನ್ನಷ್ಟಕ್ಕೇ ತಾನೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಅವರಿಗೆ ದೆಹಲಿಯ ಜನತೆ ವರ್ಷಗಳ ಬಳಿಕ ಸರಿಯಾದ ಪಾಠ ಕಳಿಸಿದ್ದಾರೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಜೊತೆಗೆ, ಶೀಲಾ ದೀಕ್ಷಿತ್ ಅವರನ್ನು ನವದೆಹಲಿಯಿಂದ ಕ್ಷೇತ್ರದಿಂದ ಸೋಲಿಸಿದ್ದಕ್ಕೆ ಇದು ಜನರೇ ನೀಡಿರುವ ಪ್ರತೀಕಾರ ಎಂದು ಉಲ್ಲೇಖಿಸುತ್ತಿದ್ದಾರೆ.

‘ಮನಸ್ಸಿಗೆ ಬಂದಂತೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿ’ ಎಂದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ

ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಎಎಪಿ ದೆಹಲಿ ಚುನಾವಣೆಯಲ್ಲಿ ಪರಸ್ಪರ ವಿರೋಧಿಗಳಾಗಿ ಸ್ಪರ್ಧೆ ಮಾಡಿರುವುದು ಬಿಜೆಪಿಯ ಮುನ್ನಡೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಇದೇ ವಿಷಯವನ್ನು ಪರೋಕ್ಷವಾಗಿ ಉಲ್ಲೇಖಿಸಿ ಎರಡೂ ಪಕ್ಷಗಳ ವಿರುದ್ದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಉಮರ್ ಅಬ್ದುಲ್ಲಾ, “ನೀವು ಪರಸ್ಪರ ಜಗಳವಾಡುತ್ತಿರಿ” ಎಂದಿದ್ದಾರೆ. “ಔರ್ ಲಡೋ, ಜೀ ಭರ್ ಕೆ ಲಡೋ, ಸಮಾಪ್ತ್ ಕರ್‌ ದೋ ಏಕ್ ದೂಸ್ರೆ ಕೋ” (ಇನ್ನೂ ಸ್ವಲ್ಪ ಜಗಳವಾಡಿ, ಮನಸ್ಸಿಗೆ ಬಂದಂತೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿ) ಎಂದು ಮುನಿಯೊಬ್ಬರು ಹೇಳಲಾಗುವ ಜಿಫ್ (GIF)ಒಂದನ್ನು ಒಮರ್ ಅಬ್ದುಲ್ಲಾ ಬರೆದುಕೊಂಡಿದ್ದಾರೆ. ಈ ಮೂಲಕ ಎಎಪಿ, ಕಾಂಗ್ರೆಸ್‌ನ ಕಿತ್ತಾಟದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...