‘ಅಕ್ಕಿ’ ಬಗ್ಗೆ ಮಾತನಾಡದ ಬಿಜೆಪಿ ಸಂಸದರ ವಿರುದ್ಧ ಯೂತ್ ಕಾಂಗ್ರೆಸ್‌ ಪ್ರತಿಭಟನೆ

Date:

Advertisements

ರಾಜ್ಯದ ಕಾಂಗ್ರೆಸ್‌ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಅಕ್ಕಿ ನೀಡಲು ಒತ್ತಾಯಿಸದ ಸಂಸದರ ವಿರುದ್ಧ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಹಲವೆಡೆ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಕರ್ನಾಟಕದಲ್ಲಿ 25 ಮಂದಿ ಬಿಜೆಪಿ ಸಂಸದರಿದ್ದರೂ ಕರ್ನಾಟಕಕ್ಕೆ ಅಕ್ಕಿ ಕೊಡುವಂತೆ ಮನವಿ ಸಲ್ಲಿಸಲು ಆಗಿಲ್ಲ. ಅಕ್ಕಿ ಸ್ಟಾಕ್ ಇಟ್ಟು ಇಲ್ಲ ಅಂತಿರುವುದು ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಬಿಜೆಪಿ ಸಂಸದರ ಮುಖವಾಡ ಧರಿಸಿ, ಅಕ್ಕಿ ಮೂಟೆಯ ರೀತಿಯ ಮಾದರಿಗಳನ್ನು ಹೊತ್ತುಕೊಂಡು ಸಂಸದರುಗಳ ವಿರುದ್ಧ ಧಿಕ್ಕಾರ ಕೂಗಿದರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಸ್ಯಾಂಕಿ ಟ್ಯಾಂಕಿ ಡಾ. ರಾಜ್‌ಕುಮಾರ್‍‌ ಪುತ್ಥಳಿಯಿಂದ ಬಿಜೆಪಿ ಕಾರ್ಯಾಲಯದವರೆಗೆ ನಡೆದುಕೊಂಡು ಬಂದು ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಎಂಟಿಸಿ ಬಸ್‌ಗಳಲ್ಲಿ ಕರೆದೊಯ್ದರು.

Advertisements

ಪ್ರತಾಪ್‌ಸಿಂಹ ಕಾರಿಗೆ ತಡೆ
ಮೈಸೂರಿನಲ್ಲಿ ಕಾರ್ಯ ನಿಮಿತ್ತ ಕಚೇರಿಗೆ ಬಂದಿದ್ದ ಸಂಸದ ಪ್ರತಾಪ್‌ ಸಿಂಹ ಅವರ ಕಾರಿಗೂ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಪ್ರತಿಭಟನಾಕಾರರನ್ನು ತಡೆದರು.

ನಿನ್ನೆ(ಜು.4) ರಾಜ್ಯದ ಕಾಂಗ್ರೆಸ್‌ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಜಾರಿ ಮಾಡ್ತಾ ಇಲ್ಲ ಎಂದು ಆರೋಪಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದರು. ಅಲ್ಲದೇ, ಸದನದ ಒಳಗಡೆ ಬಿಜೆಪಿ ಶಾಸಕರು ಧರಣಿ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X