ಇಸ್ರೇಲ್‌ ದಾಳಿ ಖಂಡಿಸಿ ಪ್ಯಾಲೆಸ್ತೀನಿಯರ ಹಕ್ಕುಗಳಿಗೆ ಕಾಂಗ್ರೆಸ್ ಬೆಂಬಲ

Date:

Advertisements

ಇಸ್ರೇಲ್–ಪ್ಯಾಲೆಸ್ತೀನ್ ಹೋರಾಟದ ನಡುವೆ ಯುದ್ಧವಿರಾಮ ಘೋಷಿಸಿ ಮಾತುಕತೆಗಳ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದು ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಕ್ಷವು ಕರೆ ನೀಡಿದೆ. ಅಲ್ಲದೆ ಇಸ್ರೇಲ್ ದಾಳಿಯನ್ನುಖಂಡಿಸಿ ಪ್ಯಾಲೆಸ್ತೀನ್ ಜನರ ಹಕ್ಕುಗಳಿಗೆ ಬೆಂಬಲ ಸೂಚಿಸಿದೆ.

“ಪ್ಯಾಲೆಸ್ತೀನಿಯರ ಭೂಮಿ, ಸ್ವತಂತ್ರ ಸರ್ಕಾರ, ಘನತೆ ಮತ್ತು ಗೌರವದಿಂದ ಬದುಕುವ ಹಕ್ಕುಗಳಿಗಾಗಿ” ಕಾಂಗ್ರೆಸ್ ತನ್ನ ಬೆಂಬಲವನ್ನು ಸೂಚಿಸಿದೆ. ಪ್ರಸ್ತುತ ಸಂಘರ್ಷಕ್ಕೆ ಕಾರಣವಾದ ಸಮಸ್ಯೆಗಳು ಸೇರಿದಂತೆ ಎಲ್ಲ ಬಾಕಿ ಉಳಿದಿರುವ ವಿಷಯಗಳ ಬಗ್ಗೆ ಮಾತುಕತೆಗಳನ್ನು ಪ್ರಾರಂಭಿಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ನಡೆಸಿರುವ ಕ್ರೂರ ದಾಳಿಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಪ್ಯಾಲೆಸ್ತೀನ್ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ಮಾತುಕತೆಯ ಮೂಲಕ ಪೂರೈಸಬೇಕು ಎಂದು ತಮ್ಮ ಪಕ್ಷವು ಯಾವಾಗಲೂ ನಂಬುತ್ತದೆ” ಎಂದು ಹೇಳಿದರು.

Advertisements

ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ಗುಂಪಿನ ನಡುವಿನ ಸಂಘರ್ಷ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಈ ಬಗ್ಗೆ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ, ಕಳೆದ ಎರಡು ವರ್ಷಗಳಲ್ಲಿ ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಬಗ್ಗೆ ಕಾರ್ಯಕಾರಿ ಸಮಿತಿ ದುಃಖವನ್ನು ವ್ಯಕ್ತಪಡಿಸುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ | ಈಜಿಪ್ಟ್‌ನಲ್ಲಿ ಇಬ್ಬರು ಇಸ್ರೇಲಿ ಪ್ರವಾಸಿಗರ ಗುಂಡಿಟ್ಟು ಹತ್ಯೆ

ಪ್ಯಾಲೆಸ್ತೀನ್ ಜನರ ಭೂಮಿ, ಸ್ವತಂತ್ರ ಸರ್ಕಾರ, ಘನತೆ ಮತ್ತು ಗೌರವದಿಂದ ಬದುಕುವ ಹಕ್ಕುಗಳಿಗಾಗಿ ತನ್ನ ಬೆಂಬಲವನ್ನು ಸೂಚಿಸಿದೆ. “ಯಾವುದೇ ರೀತಿಯ ಹಿಂಸಾಚಾರವು ಎಂದಿಗೂ ಯಾವುದೇ ಪರಿಹಾರವನ್ನು ನೀಡುವುದಿಲ್ಲ ಮತ್ತು ಅದು ನಿಲ್ಲಬೇಕು” ಎಂದು ನಿರ್ಣಯವು ಹೇಳಿದೆ.

ಗಾಜಾ ಪಟ್ಟಿಯಲ್ಲಿ, ಇಸ್ರೇಲ್‌ನ ಪ್ರತಿದಾಳಿಯಲ್ಲಿ ಸುಮಾರು 500 ಜನರು ಮೃತಪಟ್ಟು 2,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X