ಚಿಕ್ಕಮಗಳೂರು ಕ್ಷೇತ್ರದಲ್ಲಿ ನನಗೆ ಟಿಕೆಟ್‌ ತಪ್ಪಿಸಲು ಪಿತೂರಿ: ಶೋಭಾ ಕರಂದ್ಲಾಜೆ ಆರೋಪ

Date:

ಲೋಕಸಭೆ ಚುನಾವಣೆಗೆ ನನ್ನ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಹಿರಂಗವಾಗಿಯೇ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, “ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಿದ್ದರು. ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ” ಎಂದರು.

“ನನ್ನನ್ನು ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕಿದ್ದಾರೆ. ಇದರಿಂದಾದರೂ ಸತ್ಯ ಗೊತ್ತಾಗುತ್ತದೆ. ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ” ಎಂದು ಶೋಭಾ ಭರವಸೆ ವ್ಯಕ್ತಪಡಿಸಿದರು.

“ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಚರ್ಚೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷದಿಂದ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಕೋಲಾ ಗುಡ್ಡ ಕುಸಿತ | ಮುಂದುವರಿದ ರಕ್ಷಣಾ ಕಾರ್ಯಾಚರಣೆ; ಲಾರಿ ಚಾಲಕ ಜೀವಂತ ಮರಳಲು ಜನರ ಪ್ರಾರ್ಥನೆ

ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ...

ಬೆಂಗಳೂರು | ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ; ಪ್ರಶಾಂತ್‌ ಭೂಷಣ್‌ ಆರೋಪ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯೂ ಸೇರಿದಂತೆ ಎಲ್ಲ ನ್ಯಾಯಮೂರ್ತಿಗಳ ಹಿಂದೆ ಕೇಂದ್ರ...

ಪ್ಯಾರಿಸ್ ಒಲಿಂಪಿಕ್ಸ್: 9 ಕ್ರೀಡಾಪಟುಗಳಿಗೆ ಅನುದಾನ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ...

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು...