ಸಾಕ್ಷ್ಯ ನಾಶಕ್ಕೆ ಸಂಚು, ಮುಡಾ ಆಯುಕ್ತರನ್ನು ಮೊದಲು ಬಂಧಿಸಿ: ಕುಮಾರಸ್ವಾಮಿ ಒತ್ತಾಯ

Date:

Advertisements

ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದರು.

ಜೆಡಿಎಸ್ ಪಕ್ಷದ ಕಚೇರಿ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮುಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು” ಎಂದು ಒತ್ತಾಯಿಸಿದರು.

“ಮುಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ” ಎಂದು ಆರೋಪ ಮಾಡಿದರು.

Advertisements

ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು; “ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

“ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲವನ್ನೂ ಮಾಡುತ್ತಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ ರಾಜಕಾರಣಕ್ಕೆ ದಿಟ್ಟ ಉತ್ತರದ ಅಗತ್ಯವಿದೆ

“ಮುಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡು ಈಸಿಆರ್ ದಾಖಲು ಮಾಡಿದ ಕೂಡಲೇ ಬಿರುಸಿನ ಬೆಳವಣಿಗೆಗಳು ನಡೆದಿವೆ. ಮಂಗಳವಾರದ ದಿನ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ಬಂದು ನಿವೇಶನ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ನಂತರ ಎಲ್ಲ ನಿವೇಶನಗಳು ಮುಡಾ ವಶಕ್ಕೆ ಹೋಗಿವೆ. ಹದಿನಾಲ್ಕು ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದೆ” ಎಂದು ಕುಮಾರಸ್ವಾಮಿ ದೂರಿದರು.

“ಇದೆಲ್ಲವೂ ಸಂಶಯಾಸ್ಪದವಾಗಿ ನಡೆದಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಯಾಲಗಳ ಆದೇಶಗಳಿವೆ. ಹೀಗಿದ್ದೂ ಮುಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಅವರಿಗೆ ಈ ಅಧಿಕಾರ ಇಲ್ಲ. ಇಲ್ಲಿ ಸಿಎಂ ಅಧಿಕಾರದ ದುರುಪಯೋಗ ಮಾಡಿದ್ದಾರೆ. ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮೂಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು” ಎಂದು ಕೇಂದ್ರ ಸಚಿವರು ಆಗ್ರಹಿಸಿದರು.

“ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು. ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದರು. ಕೋರ್ಟ್ ನಲ್ಲಿ ನಮ್ಮದೇ ಆಸ್ತಿ ಎಂದಿದ್ದಾರೆ. ಇನ್ನೊಮ್ಮೆ ಜುಜುಬಿ ನಿವೇಶನಗಳು ಎಂದರು. ಅವುಗಳ ಮೌಲ್ಯ ₹62 ಕೋಟಿ ಎಂದರು. ಇಷ್ಟಕ್ಕೂ ಮೂಡಾ ಆಯುಕ್ತ ಎಲ್ಲಿಗೆ, ಯಾರ ಬಳಿಗೆ ಯಾವಾಗ ಬಂದು ನಿವೇಶನಗಳನ್ನು ವಾಪಸ್ ಪಡೆಯುವ ಮನವಿ ಸ್ವೀಕಾರ ಮಾಡಿದರು? ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X