ಖರ್ಗೆ ಕೊಲೆಗೆ ಸಂಚು | ಆಡಿಯೋ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ: ಸಿಎಂ ಬೊಮ್ಮಾಯಿ

Date:

  • ಆಡಿಯೋ ಅಸಲಿಯತ್ತು ಪರಿಶೀಲನೆ ಸಲುವಾಗಿ ಪ್ರಕರಣ ದಾಖಲು
  • ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮದ ಭರವಸೆ ನೀಡಿದ ಸಿಎಂ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕೊಲೆ ಸಂಚು ಕುರಿತಂತೆ ಮಾತನಾಡಿರುವ ಆಡಿಯೋ ಬಗ್ಗೆ ಪ್ರಕರಣ ದಾಖಲಿಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಣಿಕಂಠ ರಾಠೋಡ್ ಮಾತಾಡಿದ ಫೋನ್‌ ಧ್ವನಿ ಮುದ್ರಿಕೆ ವಿಚಾರದಲ್ಲಿ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಅವರು ಧ್ವನಿ ಮುದ್ರಿಕೆ ವಿಚಾರದಲ್ಲಿ ಅನುಮಾನವಿದೆ. ಅದನ್ನು ತಿರುಚಲಾಗಿದೆಯೋ ಏನು ಎಂಬುವುದನ್ನು ನೋಡಬೇಕು. ಆ ಬಳಿಕ ಇದರ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ಬೊಮ್ಮಾಯಿ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ಬಿಜೆಪಿಯಿಂದ ಖರ್ಗೆ ಕುಟುಂಬ ಹತ್ಯೆಗೆ ಸಂಚು, ಮೋದಿ ಮೌನಕ್ಕೆ ಶರಣು : ಸುರ್ಜೇವಾಲ ಗಂಭೀರ ಆರೋಪ

ಇದೇ ವೇಳೆ ಕಾಂಗ್ರೆಸ್ ಪರ ನಟ ಶಿವರಾಜ್ ಕುಮಾರ್ ಪ್ರಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಶಿವರಾಜ್ ಕುಮಾರ್ ಪ್ರಚಾರದ ಬಗ್ಗೆ ನನಗೇನು ಅಭ್ಯಂತರವಿಲ್ಲ ಎಂದರು.

ರಾಜ್ಯದಲ್ಲಿ ಮೋದಿ ಅಲೆ ಮೊದಲಿಗಿಂತಲೂ ಈಗ ಜಾಸ್ತಿಯಾಗಿದೆ. ಹೀಗಾಗಿ ನಮಗೇನೂ ಆತಂಕವಿಲ್ಲ. ಅವರವರ ಪಕ್ಷದವರು ಅವರಿಗೆ ಬೇಕಾದವರನ್ನು ಕರೆಯಿಸಿಕೊಂಡು ಪ್ರಚಾರ ನಡೆಸಿಕೊಳ್ಳಲಿ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲ್ಯ ವಿವಾಹ | ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಳವಳ

ಬಾಲ್ಯ ವಿವಾಹ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ದುರದೃಷ್ಟಕರ...

ಉಪಚುನಾವಣೆ ಫಲಿತಾಂಶ | 13ರ ಪೈಕಿ 10ರಲ್ಲಿ ಗೆದ್ದ ‘ಇಂಡಿಯಾ’; ಎನ್‌ಡಿಎಗೆ ಕೇವಲ 2 ಸ್ಥಾನ

ಲೋಕಸಭಾ ಚುನಾವಣೆಯಲ್ಲಿನ ಪ್ರಬಲ ಪ್ರದರ್ಶನವನ್ನು ಮುಂದುವರೆಸಿರುವ 'ಇಂಡಿಯಾ' ಮೈತ್ರಿಕೂಟ ಏಳು ರಾಜ್ಯಗಳ...

ಜಮ್ಮು-ಕಾಶ್ಮೀರ | ‘ಹುತಾತ್ಮರ ದಿನ’ ಆಚರಣೆಗೆ ತಡೆ; ಹಲವು ನಾಯಕರಿಗೆ ಗೃಹಬಂಧನ

'ಹುತಾತ್ಮರ ದಿನಾಚರಣೆ' ಆಚರಿಸಲು ಶ್ರೀನಗರದ ಡೌನ್‌ಟೌನ್‌ಲ್ಲಿರುವ ಹುತಾತ್ಮರ ಸ್ಮಶಾಕಕ್ಕೆ ತೆರಳಲು ನಮಗೆ...