‘ಸಿದ್ಧಹಸ್ತ’ರ ಗಣಿಪುರಾಣ ಬಿಚ್ಚಿದರೆ ಕಾನ್ ಸ್ಟೆಬಲ್‌ಗಳು ಸಾಲುಗಟ್ಟುತ್ತಾರೆ: ಸಿಎಂಗೆ ಎಚ್‌ಡಿಕೆ ತಿರುಗೇಟು

Date:

ಸಿದ್ದಕರ್ಮಿ ಸಿದ್ದರಾಮಯ್ಯನವರೇ, ನಿಮ್ಮ ವಿರುದ್ಧ ಬಂದ ಮುಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಸಿದ್ದರಾಮಯ್ಯ ಅವರ ಪೋಸ್ಟ್‌ಗೆ ತಿರುಗೇಟು ನೀಡಿರುವ ಅವರು, “ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಫಫರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ, ಪಲಾಯನ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ” ಎಂದು ಪ್ರಶ್ನಿಸಿದ್ದಾರೆ.

“ಮುಡಾದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್‌ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ” ಎಂದು ಕೇಳಿದ್ದಾರೆ.

“ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ… ಸತ್ತ ಜೀವದ ರುಚಿ ನೆಕ್ಕಲು..” ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

“ಮಿಸ್ಟರ್ ಸಿದ್ದರಾಮಯ್ಯ, ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ ಎಸ್‌ಐಟಿಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ, ನಾನು ವಕೀಲ ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು” ಎಂದು ಕುಟುಕಿದ್ದಾರೆ.

“ರಾಜ್ಯಪಾಲರಿಗೆ ಎಸ್‌ಐಟಿ ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿದ್ದೀರಿ ನೀವು. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ” ಎಂದಿದ್ದಾರೆ.

“ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ. ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ” ಎಂದು ಹೇಳಿದ್ದಾರೆ.

“ಸೋತರೆ ಸೋಲಬೇಕು ಬಾಹುಬಲಿಯಂತೆ. ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ,14 ತಿಂಗಳ ಸರಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ” ಎಂದು ಸವಾಲು ಹಾಕಿದ್ದಾರೆ.

“ಗೌರವಾನ್ವಿತ ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು” ಎಂದು ತಿರುಗೇಟು ನೀಡಿದ್ದಾರೆ.

“ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ ಸ್ಟೆಬಲ್‌ಗಳು ಸಾಲುಗಟ್ಟಬೇಕಾಗುತ್ತದೆ. ಹುಷಾರ್..” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...