ಸಂವಿಧಾನ ದುರ್ಬಲಗೊಳಿಸಲು ಹವಣಿಸುತ್ತಿರುವವರಿಗೆ ಸಂವಿಧಾನ ಜಾಗೃತಿ ಜಾಥಾ ಉತ್ತರ: ಸಿಎಂ ಸಿದ್ದರಾಮಯ್ಯ

Date:

ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕಿದೆ. 75ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡುತಿದ್ದು, ಸಂವಿಧಾನ ತಜ್ಞರು,ವಿಚಾರವಾದಿಗಳಿಂದ ಭಾಷಣ ಕಾರ್ಯಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಮೈಸೂರಿನ ಗೃಹ ಕಚೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹಿನ್ನೆಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು ಬಲಪಡಿಸಬೇಕಾಗಿದೆ. ರಾಜ್ಯದ 6 ಸಾವಿರ ಗ್ರಾ.ಪಂ.ಗಳಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದ ಚಿತ್ರ ವಾಹನಗಳು ಬೆಂಗಳೂರಿನಲ್ಲಿ ಸಮಾವೇಶಗೊಂಡು ಜನವರಿ 24 ಹಾಗೂ 25 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ,ಜಾತ್ಯಾತೀತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಒದಗಿಸುವ ವಿಧಿಗಳು, ಮೂಲಭೂತ ಹಕ್ಕುಗಳು,ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳನ್ನು ಖಾತ್ರಿಪಡಿಸುವ ವಿಷಯಗಳ ಬಗೆಗೆ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

“ಸಮಾವೇಶದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ನಡೆದ ಅರ್ಥಪೂರ್ಣ ಚರ್ಚೆಗಳ 10 ವಾಲ್ಯೂಮ್‌ ಗಳ ಪುಸ್ತಕಗಳು ಮುದ್ರಿತವಾಗಿದ್ದು ಪುಸ್ತಕಗಳ ಬಿಡುಗಡೆಯೂ ಇರಲಿದೆ. ಸಂವಿಧಾನದ ಅಂಗೀಕಾರದ ಮುನ್ನಾದಿನ ಅಂಬೇಡ್ಕರರು ಮಾಡಿದ ಅಮೋಘ ಭಾಷಣವನ್ನೂ ಪುಸ್ತಕ ಒಳಗೊಂಡಿರುವುದರೊಂದಿಗೆ ಡಾ.ಬಾಬು ರಾಜೇಂದ್ರ ಪ್ರಸಾದ್, ರಾಜಾಜಿ ಅಂತಹವರೂ ಸೇರಿದಂತೆ ಸಂವಿಧಾನ ರಚನಾ ಸಭೆಯ ಮುತ್ಸದ್ದಿಗಳ ಮಾತುಗಳು ಪುಸ್ತಕದಲ್ಲಿರಲಿವೆ” ಎಂದರು.

“ಸಂವಿಧಾನವನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಹವಣಿಸುತಿದ್ದು, ಸಂವಿಧಾನಕ್ಕೆ ವಿರುದ್ದವಾದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅಂತಹವರಿಗೆ ಸಂವಿಧಾನ ಜಾಥಾ ಉತ್ತರ ಕೊಡಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...