ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಆರ್‌ಎಸ್‌ಎಸ್‌ನವರಿಂದ: ಸಿದ್ದರಾಮಯ್ಯ ಕಿಡಿ

Date:

“ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, “ಯಾವ ಆರ್‌ಎಸ್‌ಎಸ್‌ ನಾಯಕರು ಹೇಳಿದರೂ ಸಂವಿಧಾನ ಬದಲಾಯಿಸಲು ಸಾಧ್ಯ ಇಲ್ಲ” ಎಂದು ಹೇಳಬೇಕಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್‌ ಹಂಚಿಕೊಂಡಿರುವ ಅವರು, “ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್‌ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್” ಎಂದು ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದ್ರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ. ಸ್ಪಾರ್ತದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು. ಇವತ್ತಿಗೂ ಮನುಸಂಸ್ಮೃತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ” – ಇದು ಆರ್ ಎಸ್ ಎಸ್ ಮುಖವಾಣಿಯಾದ “ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳು” ಎಂದು ನೆನಪಿಸಿದ್ದಾರೆ.

“ನರೇಂದ್ರ ಮೋದಿಯವರೇ, ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಇದನ್ನು ಒಪ್ಪುತ್ತೀರಾ? ನಿರಾಕರಿಸುತ್ತೀರಾ” ಎಂದು ಪ್ರಶ್ನಿಸಿದ್ದಾರೆ.1

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆಬೇರೆ ಕಲಮ್ಮುಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಅಂತ ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇಒಂದು ಪದವಿದೆಯೇ? ಇಲ್ಲ!” ಎಂದು ಹೇಳಿದವರು ಗೋಳ್ವಾಲ್ಕರ್ ” ಎಂದಿದ್ದಾರೆ.

“ನರೇಂದ್ರ ಮೋದಿಯವರೇ, ನೀವು ಗುರೂಜಿ ಎಂದೇ ಗೌರವದಿಂದ ಕರೆಯುವ ಆರ್ ಎಸ್ ಎಸ್ ನ ಎರಡನೇ ಸಂರಸಂಘ ಚಾಲಕರಾದ ಎಂ.ಎಸ್. ಗೋಳ್ವಾಲ್ಕರ್ ನಿಮ್ಮ “ಧರ್ಮ ಗ್ರಂಥ’’ವಾದ ಬಂಚ್ ಆಫ್ ಥಾಟ್ಟ್ ನಲ್ಲಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಇಲ್ಲಿಯ ವರೆಗೆ ನೀವು ನಿರಾಕರಿಸಿಲ್ಲ. ಈಗಲಾದರೂ ಹೇಳಿ ಈ ಅಭಿಪ್ರಾಯಕ್ಕೆ ನಿಮ್ಮ ಸಹಮತ ಇದೆಯೇ? ಭಿನ್ನಮತ ಇದೆಯೇ” ಎಂದು ಕೇಳಿದ್ದಾರೆ.

“ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು” ಎಂದು ಹೇಳಿದವರು ವಿನಾಯಕ ದಾಮೋದರ ಸಾವರ್ಕರ್ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

“ದೆಹಲಿಯ ಪ್ರಭಾತ್ ಸಂಸ್ಥೆ ಹಿಂದಿಯಲ್ಲಿ ಪ್ರಕಟಿಸಿರುವ ಸಾವರ್ಕರ್ ಸಮಗ್ರ ಬರಹಗಳ ಪುಸ್ತಕದ ಸಂಪುಟ 4ರ 416ನೇ ಪುಟದಲ್ಲಿ ಸಂವಿಧಾನದ ಬಗೆಗಿನ ಸಾವರ್ಕರ್ ಅಭಿಪ್ರಾಯ ಇದು. ನರೇಂದ್ರ ಮೋದಿಯವರೇ, ನೀವು ಅಧಿಕಾರಕ್ಕೆ ಬಂದ ನಂತರ ನಿಮ್ಮ ಪಕ್ಷ ಮತ್ತು ಪರಿವಾರ ಸಾವರ್ಕರ್ ಅವರನ್ನು ಅಪ್ರತಿಮ ದೇಶ ಭಕ್ತರೆಂದು ಬಿಂಬಿಸುತ್ತಾ ಬಂದಿದ್ದೀರಿ ಅವರು ಸಂವಿಧಾನದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಕೂಡಾ ನೀವು ಸಮರ್ಥಿಸಬಹುದು ಎಂದು ಭಾವಿಸಿದ್ದೇನೆ. ಆ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಾದರೆ ಅದನ್ನು ದೇಶದ ಮುಂದೆ ಹೇಳಿಬಿಡಿ” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...