ಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ಸಂವಿಧಾನವೇ ನಮಗೆ ಶ್ರೇಷ್ಠ: ಅಧೀರ್‌ ರಂಜನ್‌ ಚೌಧರಿ

Date:

Advertisements

ಸಂವಿಧಾನವು ನಮಗೆ ಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ಶ್ರೇಷ್ಠ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್‌ ರಂಜನ್‌ ಚೌಧರಿ ತಿಳಿಸಿದ್ದಾರೆ.

ಐದು ದಿನಗಳ ವಿಶೇಷ ಅಧಿವೇಶನದ ಎರಡನೇ ದಿನದಂದು ಲೋಕಸಭೆಯಲ್ಲಿ ಮಾತನಾಡಿದ ಅಧೀರ್‌ ರಂಜನ್‌ ಚೌಧರಿ, ಈ ಸಂವಿಧಾನವು ನಮಗೆ ಗೀತಾ, ಕುರಾನ್ ಮತ್ತು ಬೈಬಲ್‌ಗಿಂತ ಕಡಿಮೆಯಿಲ್ಲ. 1ನೇ ವಿಧಿ ಹೇಳುತ್ತದೆ, ಇಂಡಿಯಾ, ಅದುವೇ ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ. ”ಅಂದರೆ ಇಂಡಿಯಾ ಮತ್ತು ಭಾರತಕ್ಕೆ ಯಾವುದೇ ವ್ಯತ್ಯಾಸವಿಲ್ಲ. ಎರಡರ ನಡುವೆ ಅನಗತ್ಯವಾಗಿ ಬಿರುಕು ಮೂಡಿಸಲು ಪ್ರಯತ್ನಿಸದಿದ್ದರೆ, ಅದು ಉತ್ತಮವಾಗಿರುತ್ತದೆ” ಎಂದು ಹೇಳಿದರು.    

“ಮಹಿಳಾ ಮೀಸಲಾತಿಯನ್ನು ಪ್ರಧಾನಿ ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಾರಿಗೊಳಿಸಿದರು. ಅಂದಿನಿಂದ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡಲು ಕಾಂಗ್ರೆಸ್ ಕಾನೂನು ತರಲು ಪ್ರಯತ್ನಿಸುತ್ತಿದೆ. ಇದು ಕೆಲವೊಮ್ಮೆ ಲೋಕಸಭೆಯಲ್ಲಿ ಅಂಗೀಕಾರವಾಗುತ್ತಿತ್ತು, ಆದರೆ ರಾಜ್ಯಸಭೆಯಲ್ಲಿ ವಿಫಲವಾಗುತ್ತಿತ್ತು. ಮನಮೋಹನ್ ಸರ್ಕಾರ ತಂದ ಮಸೂದೆ ಇನ್ನೂ ಸಕ್ರಿಯವಾಗಿದೆ,” ಚೌಧರಿ ಪ್ರತಿಪಾದಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: 2027ರಲ್ಲಿ ಜನಗಣತಿ 2029ಕ್ಕೆ ಜಾರಿ!

ಸಾಮಾನ್ಯವಾಗಿ ‘ಇಂಡಿಯಾದ ರಾಷ್ಟ್ರಪತಿ’ ಎಂದು ಬಳಸಲಾಗುತ್ತದೆ. ಆದರೆ ಜಿ20 ಔತಣಕೂಟದ ಆಹ್ವಾನದಲ್ಲಿ ‘ಭಾರತದ ಅಧ್ಯಕ್ಷ’ ಹೆಸರಿನಲ್ಲಿ ಕಳುಹಿಸಲಾಯಿತು. ಇದು ಇಂಡಿಯಾ ಮತ್ತು ಭಾರತ ನಡುವಿನ ರಾಜಕೀಯ ಗದ್ದಲಕ್ಕೆ ಕಾರಣವಾಯಿತು. ಇಂದು ಲೋಕಸಭೆಯಲ್ಲಿ ಈ ವಿಚಾರವನ್ನು ಕಾಂಗ್ರೆಸ್ ನಾಯಕ ಚೌಧರಿ ಪ್ರಸ್ತಾಪಿಸಿದರು.

ಈ ನಡುವೆ ಮಹಿಳಾ ಮೀಸಲಾತಿ ಮಸೂದೆಯ ಶ್ರೇಯವನ್ನು ನಮ್ಮದು ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ ಹಲವು ನಾಯಕರು ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಂವಿಧಾನವೇ ಧರ್ಮ ಗ್ರಂಥಗಳನ್ನು ಗೌರವಿಸಿದೆ,ಇನ್ನು
    ನಿಮ್ಮ ಲೆಕ್ಕಾಚಾರ ಯಾವ ಲೆಕ್ಕ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X